ದಿನೇ ದಿನೇ ಹರಡುತ್ತಿರುವ ಕೊರೊನಾ ವಿರುದ್ಧದ ಹೋರಾಟಕ್ಕೆ ಸಾಕಷ್ಟು ಹಣಕಾಸಿನ ಅಗತ್ಯವಿದ್ದು ಇದಕ್ಕಾಗಿ ಪ್ರವಾಹ ಪರಿಹಾರ ರೀತಿಯಲ್ಲಿ ಜನರು ದೇಣೀಗೆ ನೀಡಲು ಆರಂಭಿಸಿದ್ದಾರೆ.

ಇಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಎಂಬುವವರು ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಮ್ಮ ಉಳಿತಾಯದ 1 ಲಕ್ಷ ರೂಪಾಯಿಗಳ ದೇಣಿಗೆಯನ್ನು ನೀಡಿದರು.

ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಚೆಕ್‌ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಬಿ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here