Homeಮುಖಪುಟಕೊರೊನಾ ವಿರುದ್ಧ ಹೋರಾಟ: ಅಲ್ಲಿ ಬಿಲಿಯನ್ ಡಾಲರ್‌, ಇಲ್ಲಿ ಚಪ್ಪಾಳೆ..

ಕೊರೊನಾ ವಿರುದ್ಧ ಹೋರಾಟ: ಅಲ್ಲಿ ಬಿಲಿಯನ್ ಡಾಲರ್‌, ಇಲ್ಲಿ ಚಪ್ಪಾಳೆ..

- Advertisement -
- Advertisement -

ಕೊರೋನಾ ನಿಯಂತ್ರಣಕ್ಕೆ ಅಮೆರಿಕ 1.2 ಟ್ರಿಲಿಯನ್ ಡಾಲರ್, ಇಂಗ್ಲೆಂಡ್ 39 ಬಿಲಿಯನ್ ಡಾಲರ್, ಫ್ರಾನ್ಸ್ 45 ಬಿಲಿಯನ್ ಡಾಲರ್, ನ್ಯೂಜಿಲ್ಯಾಂಡ್ 8 ಬಿಲಿಯನ್ ಡಾಲರ್, ಇಟಲಿ 28 ಬಿಲಿಯನ್ ಡಾಲರ್, ಕೆನಡಾ 56 ಬಿಲಿಯನ್ ಡಾಲರ್, ದ,ಕೋರಿಯಾ 10 ಬಿಲಿಯನ್ ಡಾಲರ್ ಹಣ ಮೀಸಲಿಟ್ಟಿವೆ.

ಪಕ್ಕದ ಪುಟ್ಟ ರಾಜ್ಯ ಕೇರಳ 20 ಸಾವಿರ ಕೋಟಿ ರೂ ಪ್ಯಾಕೇಜ್ ಘೋಷಿಸಿದೆ. ಖಜಾನೆಯಲ್ಲಿ ಸಾಕಷ್ಟು ದುಡ್ಡಿಲ್ಲದಿದ್ದರೂ ಯಡಿಯೂರಪ್ಪ ಎರಡು ತಿಂಗಳ ರೇಷನ್ ಕೊಡುವುದಾಗಿ ಹೇಳಿದ್ದಾರೆ.
ಆದರೆ, ಮೋದಿಯವರು ಯಾವ ಪ್ಯಾಕೇಜನ್ನೂ ಘೋಷಣೆ ಮಾಡಿಲ್ಲ. ನಿಮ್ಮ ಕೈ ಬಳಸಿ ಚಪ್ಪಾಳೆ ಹೊಡೆಯಿರಿ, ನಿಮ್ಮ ಮನೆ ಗಂಟೆ ಮತ್ತು ಗಂಗಾಳ (ಪ್ಲೇಟು) ಬಾರಿಸಿ ಎಂದಷ್ಟೇ ಹೇಳಿದ್ದಾರೆ. ಪರೋಕ್ಷವಾಗಿ ಅವರು ಬಡವರಿಗೆ ಶಂಖಾ ಹೊಡಿರಿ ಎಂದಿದ್ದಾರಷ್ಟೆ.

ಯಾಕೆ ಹಣ ಬಿಚ್ಚುತ್ತಿಲ್ಲ? ಹಣ ಇದ್ದರೆ ತಾನೇ? ಪುಟ್ಟಾಪೂರಾ ದೋಸ್ತ್‌ಗಳಾದ ಅಂಬಾನಿ, ಅದಾನಿಗಳಿಗೆ, ಯೆಸ್ ಬ್ಯಾಂಕಿನ ಮಿತ್ರ ಕಪೂರ್‌ಗಳಿಗೆಲ್ಲ ಮೋದಿ ಗಳಿಸಲು ಬಿಟ್ಟು ಖಜಾನೆ ಖಾಲಿ ಮಾಡುತ್ತ ಹೊರಟಿದ್ದಾರೆ. ಹೀಗಾಗಿ ಅವರ ಬಳಿ ಈಗ ಉಳಿದಿರುವುದು ಬಿಟ್ಟಿ ಬೋಧನೆಯಷ್ಟೇ!

20 ದಿನದ ಜನತಾ ಕರ್ಫ್ಯೂ

ನಿಜಕ್ಕೂ ಕಾಳಜಿ ಇದ್ದಿದ್ದರೆ, 20 ದಿನಗಳ ಜನತಾ ಕರ್ಫ್ಯೂ ಘೋಷಿಸಿ, ಸಂಬಳ ಪಡೆಯದ ಜನರಿಗೆಲ್ಲ ಕೇರಳದಂತೆ ಪ್ಯಾಕೇಜ್ ಘೋಷಿಸಬಹುದಿತ್ತು. ಅದು ಬಿಟ್ಟು ಗಂಟೆ ಬಾರಿಸಿ ಎಂದು ಹೇಳಲು ಪ್ರಧಾನಿಯೇ ಬೇಕಿತ್ತಾ? ಭಕ್ತರು ಆ ಕೆಲಸವನ್ನು ನಿರಂತರವಾಗಿ ಮಾತಾಡ್ತಾನೇ ಇದ್ದಾರಲ್ಲ?

ಜನತಾ ಕರ್ಫ್ಯೂ ಉಲ್ಲಂಘಿಸಿದ ಮೋದಿ ಭಕ್ತರು!

ಒಂದು ದಿನದ ಮಟ್ಟಿಗಾದರೂ ಹೊರಬರದೇ ಮನೆಯಲ್ಲಿಯೇ ಇದ್ದು ಚಪ್ಪಾಳೆ ಹೊಡೆಯಿರಿ ಎಂದು ಮೋದಿ ಹೇಳಿದರೆ ಹಲವು ಮೋದಿ ಭಕ್ತರು ಗುಂಪು ಗುಂಪಾಗಿ ಬೀದಿಗೆ ಬಂದು ಚಪ್ಪಾಳೆ ಹೊಡೆಯುವ ಮೂಲಕ ಮೋದಿಯವರ ಉದ್ದೇಶವನ್ನೇ ಹಾಳುಗೆಡವಿರುವ ವಿಡಿಯೋಗಳು ವೈರಲ್‌ ಆಗಿವೆ.

ಕೊರೋನಾದ ಬಗ್ಗೆ ಇಷ್ಟು ಲಘುವಾದ ಧೋರಣೆ ಬೆಳೆಸಿಕೊಂಡರೆ, ಅಪಾಯಕ್ಕೆ ಈಡಾಗುವವರು ಈ ದೇಶದ ಬಡವರು ಅಲ್ಲವೇ? ಹೀಗಾಗಿ ಶ್ರೀಮಂತರು, ಮೇಲ್ ಮಧ್ಯಮ ಮತ್ತು ಮಧ್ಯಮ ವರ್ಗಗಳ ಜನ ಒಂಥರಾ ರೋಮ್ಯಾಂಟಿಕ್ ಆಗಿ ಇದನ್ನೆಲ್ಲ ಅನುಭವಿಸುತ್ತಿರಬಹುದೇ ಎಂಬ ಸಂಶಯ ಕಾಡತೊಡಗಿದೆ.
-ಪಿ.ಕೆ. ಮಲ್ಲನಗೌಡರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...