Homeಮುಖಪುಟಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ : ಕಪ್ಪು ಬಾವುಟ ಹಾರಿಸಿ, ಮಸೂದೆ ಪ್ರತಿಸುಟ್ಟು ಪ್ರತಿಭಟನೆಗೆ ಚಾಲನೆ...

ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ : ಕಪ್ಪು ಬಾವುಟ ಹಾರಿಸಿ, ಮಸೂದೆ ಪ್ರತಿಸುಟ್ಟು ಪ್ರತಿಭಟನೆಗೆ ಚಾಲನೆ ಕೊಟ್ಟ ಎಂ.ಕೆ ಸ್ಟಾಲಿನ್

- Advertisement -
- Advertisement -

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಮರ ಸಾರಿದ್ದು, ಗುರುವಾರ (ಏ.16) ಅಧಿಕೃತವಾಗಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ.

ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ, ನಾಮಕ್ಕಲ್‌ನಲ್ಲಿ ಪ್ರಚಾರ ಕಾರ್ಯ ಕೈಗೊಂಡಿರುವ ಸ್ಟಾಲಿನ್ ಅವರು, ಅಲ್ಲಿಯೇ ಕಪ್ಪು ಬಾವುಟ ಹಾರಿಸಿ, ಕೇಂದ್ರದ ಮಸೂದೆಯ ಪ್ರತಿಯನ್ನು ಸುಟ್ಟು ಹಾಕಿ ಪ್ರತಿಭಟನೆಗೆ ಚಾಲನೆ ಕೊಟ್ಟಿದ್ದಾರೆ.

ಚೆನ್ನೈನ ಡಿಎಂಕೆ ಕೇಂದ್ರ ಕಚೇರಿ ಮತ್ತು ಮಾಜಿ ಸಿಎಂ ಎಂ. ಕರುಣಾನಿಧಿ ಅವರ ಗೋಪಾಲಪುರಂ ನಿವಾಸ ಸೇರಿದಂತೆ ರಾಜ್ಯದಾದ್ಯಂತ ಕಪ್ಪು ಬಾವುಟಗಳನ್ನು ಹಾರಿಸಲಾಗಿದೆ.

ಸ್ಟಾಲಿನ್ ಮತ್ತು ಅವರ ಪಕ್ಷದ ಕಾರ್ಯಕರ್ತರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಈ ಹೋರಾಟವನ್ನು 1960ರ ದಶಕದ ಹಿಂದಿ ಹೇರಿಕೆ ವಿರೋಧಿ ಚಳವಳಿಗೆ ಹೋಲಿಸಿರುವ ಸ್ಟಾಲಿನ್ ಅವರು, ಕೇಂದ್ರದ ಕ್ರಮ ತಮಿಳುನಾಡು ಮತ್ತು ದಕ್ಷಿಣ ಭಾರತಕ್ಕೆ ಆಗುತ್ತಿರುವ ‘ಐತಿಹಾಸಿಕ ಅನ್ಯಾಯ’ ಎಂದು ಬಣ್ಣಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸ್ಟಾಲಿನ್ ಅವರು, “ತಮಿಳುನಾಡಿನಾದ್ಯಂತ ಪ್ರತಿರೋಧ ಹರಡಲಿ. ಫ್ಯಾಸಿಸ್ಟ್ ಬಿಜೆಪಿಯ ಅಹಂಕಾರ ಪತನಗೊಳ್ಳಲಿ. ಅಂದು ತಮಿಳುನಾಡಿನಲ್ಲಿ ಹೊತ್ತಿಕೊಂಡ ಹಿಂದಿ ವಿರೋಧಿ ಪ್ರತಿರೋಧದ ಕಿಚ್ಚು ದೆಹಲಿಯನ್ನು ದಹಿಸಿತ್ತು. ದೆಹಲಿಯು ಮಣಿದ ನಂತರವಷ್ಟೇ ನಮ್ಮ ಕಿಚ್ಚು ತಣ್ಣಗಾಯಿತು. ಇಂದು, ತಮಿಳರನ್ನು ತಮ್ಮದೇ ನೆಲದಲ್ಲಿ ನಿರಾಶ್ರಿತರನ್ನಾಗಿ ಮಾಡುವ ಕರಾಳ ಕಾನೂನಿನ ಪ್ರತಿಯನ್ನು ಸುಡುವ ಮೂಲಕ ನಾನು ಮತ್ತೊಂದು ಕಿಚ್ಚನ್ನು ಹೊತ್ತಿಸಿದ್ದೇನೆ. ಈ ಬೆಂಕಿಯು ದ್ರಾವಿಡ ಭೂಮಿಯಾದ್ಯಂತ ಹರಡಲಿದೆ ಮತ್ತು ಬಿಜೆಪಿಯ ಅಹಂಕಾರವನ್ನು ಅಡಗಿಸಲಿದೆ. “ತಮಿಳು ನಮ್ಮ ಜನ್ಮದ ತಾಯಿ – ಆನಂದಮಯವಾದದ್ದು; ತಮಿಳು ನಮ್ಮ ಆತ್ಮದ ಪ್ರಜ್ವಲಿಸುವ ಅಂತರಾಳದ ಕಿಚ್ಚು” ಎಂದು ಬರೆದುಕೊಂಡಿದ್ದಾರೆ.

ಮತ್ತೊಂದು ಪೋಸ್ಟ್ ಹಾಕಿರುವ ಸ್ಟಾಲಿನ್ ಅವರು, “ತಮಿಳುನಾಡಿನಾದ್ಯಂತ ಪ್ರತಿರೋಧದ ಜ್ವಾಲೆಯು ಹರಡಲಿ. ಫ್ಯಾಸಿಸ್ಟ್ ಬಿಜೆಪಿಯ ಅಹಂಕಾರ ಪತನಗೊಳ್ಳಲಿ. ಅಂದು ತಮಿಳುನಾಡಿನಿಂದ ಉದ್ಭವಿಸಿದ ಹಿಂದಿ ಹೇರಿಕೆಯ ವಿರುದ್ಧದ ಪ್ರತಿರೋಧದ ಕಿಚ್ಚು ದೆಹಲಿಯನ್ನು ದಹಿಸಿತ್ತು; ದೆಹಲಿಯು ಮಣಿದ ನಂತರವಷ್ಟೇ ಆ ಕಿಚ್ಚು ತಣ್ಣಗಾಯಿತು. ಇಂದು, ತಮಿಳರನ್ನು ತಮ್ಮದೇ ನೆಲದಲ್ಲಿ ನಿರಾಶ್ರಿತರನ್ನಾಗಿ ಮಾಡಲು ಹವಣಿಸುತ್ತಿರುವ ಈ ಕರಾಳ ಕಾನೂನಿನ ಪ್ರತಿಯನ್ನು ಸುಡುವ ಮೂಲಕ ಮತ್ತು ಅದರ ವಿರುದ್ಧ ಕಪ್ಪು ಬಾವುಟವನ್ನು ಹಾರಿಸುವ ಮೂಲಕ ನಾನು ಆ ಕಿಚ್ಚನ್ನು ಮತ್ತೆ ಹೊತ್ತಿಸಿದ್ದೇನೆ. ಈ ಬೆಂಕಿಯು ಈಗ ದ್ರಾವಿಡ ಭೂಮಿಯಾದ್ಯಂತ ಪಸರಿಸಲಿದೆ. ಇದು ಪುಟಿದೇಳಲಿದೆ, ಇದು ಕೆರಳಲಿದೆ ಮತ್ತು ಬಿಜೆಪಿಯ ಅಹಂಕಾರವನ್ನು ಮಂಡಿಯೂರಿಸುವಂತೆ ಮಾಡಲಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...