Homeಮುಖಪುಟಗಂಭೀರ ಆರೋಪ ಹೊತ್ತ ಪೊಲೀಸ್‌ ವಿರುದ್ಧ ನಿರಂತರ ಹೋರಾಟ: ರವಿ ಕೃಷ್ಣಾರೆಡ್ಡಿಯವರ ಅಮಾನುಷ ಬಂಧನ, ಬಿಡುಗಡೆ..

ಗಂಭೀರ ಆರೋಪ ಹೊತ್ತ ಪೊಲೀಸ್‌ ವಿರುದ್ಧ ನಿರಂತರ ಹೋರಾಟ: ರವಿ ಕೃಷ್ಣಾರೆಡ್ಡಿಯವರ ಅಮಾನುಷ ಬಂಧನ, ಬಿಡುಗಡೆ..

ಒಟ್ಟಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ಮೇಲೆ ಬಂದ ಗುರುತರ ಆರೋಪವನ್ನು ಸಮರ್ಪಕ ತನಿಖೆಯ ಮೂಲಕ ಬಗೆಹರಿಸಬಹುದಾದ ನಗರ ಪೊಲೀಸ್ ಆಯುಕ್ತರು ಈ ರೀತಿ ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಸರಿಯಲ್ಲ.

- Advertisement -
- Advertisement -

ಅತ್ಯಾಚಾರ, ಲೈಂಗಿಕ ಕಿರುಕುಳ, ಭ್ರಷ್ಟಾಚಾರ ಮುಂತಾದ ಗಂಭೀರ ಆರೋಪ ಇರುವ ವ್ಯಕ್ತಿ ಪೊಲೀಸ್‌ ಆಗಿ ಮುಂದುವರೆಯಬಾರದು, ಅವರನ್ನು ತೆರವುಗೊಳಿಸಬೇಕೆಂದು ಒಂದು ವಾರದಿಂದಲೂ ಸತತವಾಗಿ ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರನ್ನು ನಿನ್ನೆ ಪೊಲೀಸರು ಬಲವಂತವಾಗಿ ಬಂಧಿಸಿ, ಬಿಡುಗಡೆ ಮಾಡಿರುವ ಘಟನೆ ಜರುಗಿದೆ.

ರವಿ ಕೃಷ್ಣಾರೆಡ್ಡಿ ಸೇರಿದಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ರಸ್ತೆಯಲ್ಲಿಯೇ ಎಳೆದಾಡಿ, ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಪೊಲೀಸರ ಈ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ.

ಘಟನೆಯ ಹಿನ್ನೆಲೆ

BWSSB ಯಲ್ಲಿಯ ಬಹುಕೋಟಿಗಳ ಭ್ರಷ್ಟಾಚಾರ, ಮಂತ್ರಿಯೊಬ್ಬರ ಭೂ ಅಕ್ರಮ ಹಾಗೂ ಪೊಲೀಸ್ ಅಧಿಕಾರಿಯ ಲೈಂಗಿಕ ಕಿರುಕುಳ” ಎಂಬ ಮೂರು ವಿಚಾರಗಳ ಬಗ್ಗೆ ರವಿ ಕೃಷ್ಣಾರೆಡ್ಡಿಯವರ “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷದ ವತಿಯಿಂದ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಫೆ.07ರಂದು ಮಧ್ಯಾಹ್ನ 1:30 ಕ್ಕೆ ಪತ್ರಿಕಾಗೋಷ್ಠಿ ನಿಗದಿ ಮಾಡಿದ್ದರು.

ಆದರೆ ಮೂರನೇಯ ವಿಷಯವಾದ ಪೊಲೀಸ್ ಅಧಿಕಾರಿಯ ಲೈಂಗಿಕ ಕಿರುಕುಳ ವಿಷಯದ ಕುರಿತು ಯಾರೂ ಮಾತನಾಡದಂತೆ, ಮಾಧ್ಯಮಗಳಲ್ಲಿ ಪ್ರಕಟಿಸದಂತೆ ಆ ಪೊಲೀಸ್‌ ಅಧಿಕಾರಿಯು ಕೋರ್ಟ್‌‌ನಿಂದ TI (Temporary Injunction) ತಂದಿದ್ದರು. ಹಾಗಾಗಿ ಪ್ರತಿಕಾಗೋಷ್ಠಿಯಲ್ಲಿ ಆ ವಿಚಾರವನ್ನು ಮಾತನಾಡದ ರವಿ ಕೃಷ್ಣಾರೆಡ್ಡಿಯವರು ನಂತರ ಬೀದಿಯಲ್ಲಿಯೇ ಆ ಅಧಿಕಾರಿಯ ಬಗ್ಗೆ ದಾಖಲೆಗಳನ್ನು ಪ್ರದರ್ಶಿಸಿ ಪತ್ರಿಕಾಗೋಷ್ಠಿ ನಡೆಸಿದ್ದರು.

ದಿನಾಂಕ 06-12-2019 ರಂದು ನ್ಯಾಯಾಲಯವು ದಿನಾಂಕ 10-01-2020 ರ ತನಕ TI ಅನ್ನು ವಿಸ್ತರಿಸಿರುತ್ತದೆ. ಆದರೆ ದಿನಾಂಕ 10-01-2020 ರ ತೀರ್ಪಿನಲ್ಲಿ ಅದನ್ನು ವಿಸ್ತರಿಸಿರುವುದರ ಉಲ್ಲೇಖವಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರು ಸದರಿ ಪೊಲೀಸ್‌ ಅಧಿಕಾರಿಯನ್ನು ಈ ಕೂಡಲೇ ಅಲ್ಲಿಂದ ತೆರವು ಮಾಡಬೇಕು ಮತ್ತು ಶೀಘ್ರವಾಗಿ ಅವರ ಮೇಲಿನ ಇಲಾಖಾ ವಿಚಾರಣೆ ಮುಗಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ರನ್ನು ಭೇಟಿಯಾಗಲು ಪ್ರಯತ್ನಿಸಿ ಹೋರಾಟ ಮುಂದುವರೆಸಿದ್ದರು.

ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಮುಂದೆ ಸಾರ್ವಜನಿಕರಿಗೆ ದಾಖಲೆಗಳನ್ನು ಹಂಚಿ ಶಾಂತಿಯುತವಾಗಿ ಪಾದಚಾರಿ ಮಾರ್ಗದಲ್ಲಿ ಪಥಸಂಚಲನ ಮಾಡಿದ್ದು ಈ ಕುರಿತು ಫೇಸ್‌ಬುಕ್‌ ಲೈವ್‌ನಲ್ಲಿ ರವಿ ಕೃಷ್ಣಾರೆಡ್ಡಿಯವರು ಬಹಳ ವಿಷಯ ಹಂಚಿಕೊಂಡಿದ್ದರು.

ನಿನ್ನೆ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಲು ಮುಂದಾಗಿದ್ದ ವೇಳೆ ಹೈಕೋರ್ಟ್‌ನ ಪಾರ್ಕಿಂಗ್ ಬಳಿ ರವಿ ಕೃಷ್ಣಾರೆಡ್ಡಿ, ರಘು ಜಾಣಗೆರೆ ಹಾಗೂ ವತ್ಸಲರವರ ಮೇಲೆ ಮುಗಿಬಿದ್ದ ಪೊಲೀಸರು ಅಮಾನುಷವಾಗಿ ನಡೆಸಿಕೊಂಡು ಬಂಧಿಸಿದ್ದಾರೆ. ಮೂವರನ್ನು ಅಶೋಕ ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಸ್ವಲ್ಪ ಹೊತ್ತಿನ ನಂತರ ಬಿಡುಗಡೆ ಮಾಡಿದ್ದಾರೆ.

ರವಿ ಕೃಷ್ಣರೆಡ್ಡಿ

ಅತ್ಯಾಚಾರ, ಲೈಂಗಿಕ ಕಿರುಕುಳ, ಭ್ರಷ್ಟಾಚಾರ ಮುಂತಾದ ಗಂಭೀರ ಆರೋಪ ಇರುವ ವ್ಯಕ್ತಿ ಪೊಲೀಸ್‌ ಆಗಿ ಮುಂದುವರೆಯಬಾರದು, ಅವರನ್ನು ತೆರವುಗೊಳಿಸಬೇಕೆಂದು ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣರೆಡ್ಡಿಯವರನ್ನು ನಿನ್ನೆ ಪೊಲೀಸರು ಬಲವಂತವಾಗಿ ಬಂಧಿಸಿದ್ದಾರೆ. ಅವರನ್ನು ರಸ್ತೆಯಲ್ಲಿಯೇ ಎಳೆದಾಡಿದ್ದಾರೆ. ಅದನ್ನು ವಿಡಿಯೋ ಮಾಡುತ್ತಿದ್ದ ಅವರ ತಂಡದವರನ್ನು ಸಹ ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಪೊಲೀಸರ ಈ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

Posted by Naanu Gauri on Tuesday, February 11, 2020

ಈ ಕುರಿತು ರವಿ ಕೃಷ್ಣಾರೆಡ್ಡಿಯವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ಹಲವು ಗಂಭೀರ ಆರೋಪಗಳಿರುವ, ಇನ್ನೂ ಆರೋಪಮುಕ್ತನಾಗದ ಕಳಂಕಿತ ಪೊಲೀಸ್ ಅಧಿಕಾರಿ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದರೆ, ಅದು ಪೊಲೀಸ್ ಇಲಾಖೆಗೆ ಗೌರವ ತರುವ ವಿಷಯವೇ? ಪೊಲೀಸ್ ಇಲಾಖೆಗೆ ಇದು ಅವಮಾನವಲ್ಲವೆ? ಎಂದು ಪ್ರಶ್ನಿಸಿ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದೇವೆ. ಆದರೆ ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಸಿಎಂ ಅಂಡರ್‌ನಲ್ಲಿ ಬರುತ್ತದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ನುಣುಚಿಕೊಳ್ಳುತ್ತಿದ್ದಾರೆ. ನಾವೂ ಹೋರಾಟ ತೀವ್ರಗೊಳಿಸಿದಾಗ ನಮ್ಮನ್ನು ಬೆದರಿಸಲು ನಿನ್ನೆ ಈ ಬಂಧನವನ್ನು ಮಾಡಿದ್ದಾರೆ. ಆದರೆ ಈ ಬಂಧನಗಳಿಗೆ ನಾವು ಬೆದರುವುದಿಲ್ಲ. ಫೆ.15ರ ನಂತರ ಹೋರಾಟ ತೀವ್ರಗೊಳಿಸುತ್ತೇವೆ” ಎಂದಿದ್ದಾರೆ.

ಒಟ್ಟಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ಮೇಲೆ ಬಂದ ಗುರುತರ ಆರೋಪವನ್ನು ಸಮರ್ಪಕ ತನಿಖೆಯ ಮೂಲಕ ಬಗೆಹರಿಸಬಹುದಾದ ನಗರ ಪೊಲೀಸ್ ಆಯುಕ್ತರು ಈ ರೀತಿ ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಸರಿಯಲ್ಲ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...