ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಸಂಸದೀಯ ಕ್ಷೇತ್ರಗಳ ಪುನರ್‌ವಿಂಗಡನೆ, ಎನ್‌ಇಪಿ, ಹಿಂದಿ ಹೇರಿಕೆ ಸೇರಿದಂತೆ ವಿವಿಧ ಸಂವಿಧಾನ ವಿರೋಧಿ ನೀತಿಗಳ ವಿರುದ್ದ ಹೋರಾಟ ತೀವ್ರಗೊಳಿಸಿರುವ ತಮಿಳುನಾಡು ರಾಜ್ಯ ಸರ್ಕಾರ, ದಕ್ಷಿಣದ ಇತರ ರಾಜ್ಯಗಳ ಬೆಂಬಲ ಕೋರಿದೆ.
ತಮಿಳುನಾಡಿನ ಅರಣ್ಯ ಸಚಿವ ಡಾ.ಕೆ ಪೊನ್ಮುಡಿ, ರಾಜ್ಯಸಭಾ ಸದಸ್ಯ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಬುಧವಾರ (ಮಾ.12) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಈ ಕುರಿತು ಮಾತುಕತೆ ನಡೆಸಿದ್ದಾರೆ.
ಕ್ಷೇತ್ರ ಪುನರ್‌ವಿಂಗಡನೆ ಮತ್ತಿತರ ವಿಷಯಗಳಲ್ಲಿ ಧ್ವನಿ ಎತ್ತುವಂತೆ ಮತ್ತು ತಮಿಳುನಾಡು ನಡೆಸುತ್ತಿರುವ ಹೋರಾಟದ ಜೊತೆಗೆ ನಿಲ್ಲುವಂತೆ ಮನವಿ ಮಾಡಿದ್ದಾರೆ.

ಇದಕ್ಕೂ ಮೊದಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಇದೇ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ.
ಕೇಂದ್ರದ ನೀತಿಗಳ ವಿರುದ್ದದ ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ತಮ್ಮ ಬೆಂಬಲವೂ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮಿಳುನಾಡು ಸರ್ಕಾರದ ನಿಯೋಗಕ್ಕೆ ಹೇಳಿದ್ದಾರೆ.
ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನು ನಾವೂ ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ಹೋರಾಟಕ್ಕೂ ಬೆಂಬಲ ನೀಡುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.
ಭೂಮಿ-ವಸತಿ ಹಕ್ಕಿಗಾಗಿ ‘ಬೆಂಗಳೂರು ಚಲೋ’; ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ


