Homeಮುಖಪುಟಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಮುಂದಾದರೆ ಹೋರಾಟ: ಕುಮಾರಸ್ವಾಮಿ ಎಚ್ಚರಿಕೆ

ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಮುಂದಾದರೆ ಹೋರಾಟ: ಕುಮಾರಸ್ವಾಮಿ ಎಚ್ಚರಿಕೆ

- Advertisement -
- Advertisement -

ಎಪಿಎಂಸಿ ಕಾಯ್ದೆಯ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಮುಂದಾದರೆ ಹೋರಾಟವನ್ನು ಎದುರಿಸಬೇಕಾಗುತ್ತದೆ, ಇದು ಕಡೇ ಎಚ್ಚರಿಕೆ ಎಂದು ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.

ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರುವ ಕುರಿತು ಇಂದು ಸಚಿವ ಸಂಪುಟದಲ್ಲಿ‌ ನಿರ್ಧಾರವಾಗುತ್ತಿದೆ. ರೈತರ ಬದುಕನ್ನು ಅಭದ್ರಗೊಳಿಸುವ, ಬಹುರಾಷ್ಟ್ರೀಯ ಕಂಪನಿಗಳ ದಾಸ್ಯಕ್ಕೆ ಒಳಪಡಿಸುವ ಈ ಸುಗ್ರೀವಾಜ್ಞೆಗೆ ಸರ್ಕಾರ ಯಾವುದೇ ಕಾರಣಕ್ಕೂ ಮುಂದಾಗಬಾರದು, ಎಂದಿರುವ ಕುಮಾರಸ್ವಾಮಿ ಇದು ಕಡೇ ಎಚ್ಚರಿಕೆ, ಇಲ್ಲವಾದರೆ ಹೋರಾಟ ಎದುರಿಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.

“ಬಹುರಾಷ್ಟ್ರೀಯ ಕಂಪನಿಗಳಿಗೆ ನಮ್ಮನ್ನು ಒಪ್ಪಿಸಿಕೊಳ್ಳುವುದು ಅಪಾಯಕಾರಿ. ಅಭದ್ರತೆಯ ಈ ವ್ಯವಸ್ಥೆಗೆ ಕೃಷಿ, ರೈತರನ್ನು ಒಳಪಡಿಸುವುದು ನಮ್ಮ ಬೆನ್ನೆಲುಬನ್ನೇ ಮುರಿದಂತೆ. ₹20 ಲಕ್ಷ ಕೋಟಿ ಪ್ಯಾಕೇಜ್ ವೇಳೆ ರಕ್ಷಣೆ ಕೊಡುವ ಬಗ್ಗೆ ಮೋದಿ ಮಾತನಾಡಿದ್ದರು. ಆದರೆ ಬಹುರಾಷ್ಟ್ರೀಯ ಕಂಪನಿಗಳಿಗೆ ರೈತರನ್ನು ಒಪ್ಪಿಸುವುದು ಯಾವ ರಕ್ಷಣೆ ಕೊಡುವುದು?” ಎಂದು ಪ್ರಶ್ನಿಸಿದ್ದಾರೆ.

“ರೈತ ತನ್ನ ಉತ್ಪನ್ನಗಳನ್ನು ಮಾರಾಟ ಮಾಡುವಾಗ ವಂಚನೆಗೊಳಗಾದರೆ ಎಪಿಎಂಸಿ ಮೂಲಕ ವ್ಯಾಜ್ಯ ಬಗೆಹರಿಸಿಕೊಳ್ಳಲು ಅವಕಾಶವಿದೆ. ಆದರೆ ಬಹುರಾಷ್ಟ್ರೀಯ ಕಂಪನಿಗಳು ಮಾಡುವ ವಂಚನೆಗಳ ವಿರುದ್ಧ ನಮ್ಮ ರೈತರು ಹೋರಾಡಬಲ್ಲರೇ? ಅವರ ಕೂಟ ವ್ಯವಸ್ಥೆಯ ಎದುರು ಸೆಣಸಬಲ್ಲರೇ? ಕೃಷಿ ವ್ಯವಸ್ಥೆಗೆ ಕಾಯಕಲ್ಪ ತರಬೇಕು. ಆದರೆ ದಾಸ್ಯಕ್ಕೊಳಪಡಿಸಬಾರದು.” ಎಂದು ಕುಮಾರಸ್ವಾಮಿ ಆಗ್ರಹಿಸದ್ದಾರೆ.

ರಾಜ್ಯದ ಕೃಷಿ ಉತ್ಪನ್ನಗಳ ಮಾರುಕಟ್ಟೆ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆ 1966 ಮತ್ತು ನಿಯಮಗಳು 1968ರ ಕಲಂ 8, 66, 67 ಮತ್ತು 70 ರಂತೆ ಎಪಿಎಂಸಿಗಳ ಹೊರಗೆ ನಡೆಯುವ ಮಾರುಕಟ್ಟೆಯ ಮೇಲೆ ಎಪಿಎಂಸಿಗಳು ನಿಯಂತ್ರಣ ಹೊಂದಿವೆ. ಈ ನಿಯಮಗಳ ಅನ್ವಯ ನಡೆಯದ ವರ್ತಕರ ಮೇಲೆ ಕಲಂ 114, 116, 117ರಡಿ ಕ್ರಿಮಿನಲ್ ಮೊಕದ್ದಮೆ ಹೂಡಲು ಅವಕಾಶವಿದೆ.

ಬ್ರಿಟೀಷರ ಕಾಲದಲ್ಲಿ ನಿರ್ಮಾಣವಾದ ಎಪಿಎಂಸಿ ಮಾರುಕಟ್ಟೆ ವ್ಯವಸ್ಥೆ ಇಂದು ಬೃಹದಾಕಾರವಾಗಿ ಬೆಳೆದಿದ್ದು, ಪ್ರಧಾನಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ತೀರ್ಮಾನದಂತೆ ಎಪಿಎಂಸಿ ಕಾಯ್ದೆಯ ತಿದ್ದುಪಡಿ ನಿರ್ಧಾರಕ್ಕೆ ಬಂದಿತ್ತು.


ಓದಿ: ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ರಾಜ್ಯಪಾಲರ ಕಚೇರಿ ತರಾತುರಿ ಮಾಡಿದ್ದೇಕೆ? ಈಗ ಹಿಂದಕ್ಕೆ ಕಳಿಸಿದ್ದು ನಿಜವಾ?


ನಮ್ಮ ಯೂಟ್ಯೂಬ್ ಚಾನೆಲ್‌ಗೆ ಭೇಟಿ ನೀಡಿ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ಆಡಳಿತದ 10 ವರ್ಷಗಳಲ್ಲಿ ‘ED’ ದಾಳಿಗಳಲ್ಲಿ ಹೆಚ್ಚಳ: ವರದಿ

0
ಮೋದಿ ಆಡಳಿತದ ಕಳೆದ 10 ವರ್ಷಗಳಲ್ಲಿ ಜಾರಿ ನಿರ್ದೇಶನಾಲಯದ ದಾಳಿ ಮತ್ತು, ಆಸ್ತಿಮುಟ್ಟುಗೋಲು ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಬಿಜೆಪಿ ಸರಕಾರ 'ಇಡಿ' ಮತ್ತು ಸಿಬಿಐಯಂತಹ ಸರಕಾರಿ ಸಂಸ್ಥೆಗಳನ್ನು ಪ್ರತಿಪಕ್ಷಗಳ...