Homeಚಳವಳಿ4 ನೆ ತಿಂಗಳಿಗೆ ಕಾಲಿಟ್ಟ ಹೋರಾಟ - ದೆಹಲಿ ಗಡಿಗಳಲ್ಲಿ ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ

4 ನೆ ತಿಂಗಳಿಗೆ ಕಾಲಿಟ್ಟ ಹೋರಾಟ – ದೆಹಲಿ ಗಡಿಗಳಲ್ಲಿ ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಹೊಸ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟ ನಾಲ್ಕನೇ ತಿಂಗಳಿಗೆ ಕಾಲಿಟ್ಟುದೆ. ಸರ್ಕಾರ ಹೋರಾಟವನ್ನು ಒಡೆಯಲು ಬೇಕಾಗಿ ದಿನಕ್ಕೊಂದು ಸಂಚು ರೂಪಿಸಿದಂತೆ ಆಂದೋಲನ ತೀವ್ರಗೊಳ್ಳುತ್ತಿದ್ದು, ಗುರುವಾರ ಗಾಜಿಪುರ, ಟಿಕ್ರಿ ಮತ್ತು ಸಿಂಗು ಗಡಿಗಳಲ್ಲಿನ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ದೆಹಲಿ ಪೊಲೀಸರು ಈ ಪ್ರದೇಶಗಳ ಸಮೀಪದ ವಾಹನ ಸಂಚಾರವನ್ನು ಬೇರೆಡೆಗೆ ತಿರುಗಿಸಿದ್ದಾರೆ. ಇದರಿಂದಾಗಿ ಪೀಕ್ ಅವರ್‌‌ಗಲ್ಲಿ(ಎಲ್ಲರೂ ಸಮಾನ್ಯವಾಗಿ ಸಂಚಾರ ಮಾಡುವ ಸಮಯ/ಸಂಜೆ ಅಥವಾ ಬೆಳಿಗ್ಗೆ) ಭಾರಿ ಸಂಚಾರ ದಟ್ಟಣೆ ಉಂಟಾಗಲಿದೆ ಎಂದು ಪೊಲೀಸರ ಹೇಳಿಕೆಯನ್ನು ಉಲ್ಲೇಖಿಸಿ ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಗಾಜಿಪುರ-ಗಾಜಿಯಾಬಾದ್ (ಯುಪಿ ಗೇಟ್) ಗಡಿ ಸಂಪೂರ್ಣವಾಗಿ ಮುಚ್ಚಲ್ಪಟ್ಟಿರುವುದರಿಂದ ದೆಹಲಿ ಮತ್ತು ಗಾಜಿಯಾಬಾದ್‌‌ ಪೀಕ್‌ ಅವರ್‌ಗಳಲ್ಲಿ ಭಾರಿ ಸಂಚಾರ ದಟ್ಟಣೆಯನ್ನು ಎದುರಿಸುತ್ತದೆ ಎಂದು ದೆಹಲಿ ಸಂಚಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಯುಪಿ ಗೇಟ್ ಗಡಿಗೆ ಹಾಕಿರುವ ದಿಗ್ಬಂಧನದಿಂದಾಗಿ ದೆಹಲಿ-ಮೀರತ್, ರಾಷ್ಟ್ರೀಯ ಹೆದ್ದಾರಿ-9 ಮತ್ತು ರಾಷ್ಟ್ರೀಯ ಹೆದ್ದಾರಿ -24 ರ ಎಲ್ಲಾ ಆರು ಪಥಗಳನ್ನು ಮುಚ್ಚಲಾಗಿದೆ.

ಇದನ್ನೂ ಓದಿ: ಭಾರತದ ರೈತ ಹೋರಾಟಕ್ಕೆ ಅಮೆರಿಕದ 87 ಸಂಘಟನೆಗಳ ಬೆಂಬಲ

ಗಾಜಿಯಾಬಾದ್‌ನಿಂದ ದೆಹಲಿಗೆ ಪ್ರವೇಶಿಸುವ ವಾಹನಗಳನ್ನು ಪರ್ಯಾಯ ಗಡಿ ಮಾರ್ಗಗಳಾದ ಆನಂದ್ ವಿಹಾರ, ಸೂರ್ಯ ನಗರ, ಅಪ್ಸರಾ, ಭೋಪ್ರಾ , ಲೋನಿ, ಕೊಂಡ್ಲಿ, ಚಿಲ್ಲಾ, ನ್ಯೂ ಅಶೋಕ್ ನಗರ, ಡಿಎನ್‌ಡಿ, ಮತ್ತು ಕಾಳಿಂದಿ ಕುಂಜ್ ಮೂಲಕ ಕಳುಹಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಗಾಜಿಯಾಬಾದ್‌ನಿಂದ ಘಾಜಿಪುರ ವೃತ್ತದ ಮೂಲಕ ದೆಹಲಿಗೆ ಹೋಗುವ ರಾಷ್ಟ್ರೀಯ ಹೆದ್ದಾರಿ-24 ಅನ್ನು ಮುಕ್ತವಾಗಿರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯ ಗಡಿಗಳ ಸುತ್ತಲು ರೈತರು ನಡೆಸುತ್ತಿರುವ ಹೋರಾಟ ನಾಲ್ಕನೇ ತಿಂಗಳಿಗೆ ಕಾಲಿಟ್ಟಿದೆ. ಕೇಂದ್ರ ಸರ್ಕಾರದೊಂದಿಗೆ ರೈತರು ಇದುವರೆಗೂ ಹನ್ನೊಂದು ಸುತ್ತಿನ ಮಾತುಕತೆ ನಡೆಸಿದರೂ ಎಲ್ಲವು ಮುರಿದು ಬಿದ್ದಿದೆ. ರೈತರು ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುವ ತನಕ ಹೋರಾಟ ಮುಂದುವೆಯುತ್ತದೆ ಎಂದು ಹೇಳಿದ್ದಾರೆ.

ರೈತರ ಹೋರಾಟ ಇದೀಗ ಕೇವಲ ದೆಹಲಿ ಕೇಂದ್ರವಾಗಿ ಮಾತ್ರ ಉಳಿದಿಲ್ಲ. ಹರಿಯಾಣ, ಉತ್ತರ ಪ್ರದೇಶ, ಪಂಜಾಬ್, ರಾಜಸ್ಥಾನಗಳಲ್ಲಿ ಬೃಹತ್‌ ರೈತ ಮಹಾಪಂಚಾಯತ್‌ಗಳು ನಡೆಯುತ್ತಿದ್ದು ಉತ್ತರ ಭಾರತದ ಪ್ರತಿಯೊಂದು ಹಳ್ಳಿಯಲ್ಲೂ ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾನೂನಿನ ವಿರುದ್ದ ರೈತರನ್ನು ಸಂಘಟಿಲಾಗುತ್ತಿದೆ. ಅಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಲಕ್ಷಾಂತರ ಜನರು ಸೇರುತ್ತಿದ್ದು, ಆಂದೋಲನ ತಳ ಮಟ್ಟದಿಂದಲೇ ಗಟ್ಟಿಗೊಳ್ಳುತ್ತಿದೆ.

ಇದನ್ನೂ ಓದಿ: ರೈತ ಹೋರಾಟ: ಜಾತಿ ಕಟ್ಟುಪಾಡುಗಳನ್ನು ಮುರಿಯುತ್ತಿರುವ ಮಹಾಪಂಚಾಯತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...

ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ

ದೆಹಲಿಯ ರ‍್ಯಾಪಿಡೊ ಚಾಲಕನೊಬ್ಬ, ಪ್ರಯಾಣಿಕ ಮುಸ್ಲಿಂ ಎಂದು ಗೊತ್ತಾದ ಬಳಿಕ ಪ್ರಯಾಣಿಕನನ್ನು ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕನ ನಡೆಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ದೃಢೀಕೃತ ಬುಕಿಂಗ್ ಹೊರತಾಗಿಯೂ ಚಾಲಕ...

ಪಶ್ಚಿಮ ಏಷ್ಯಾ ಸಂಘರ್ಷ: 48 ಗಂಟೆಗಳ ಹಾರ್ಮುಜ್ ಎಚ್ಚರಿಕೆ ನೀಡಿದ್ದ ಟ್ರಂಪ್ ಅವರನ್ನು ‘ಕೆಲಸದಿಂದ ತೆಗೆದುಹಾಕಲಾಗಿದೆ’ ಎಂದು ಅಣಕಿಸಿದ ಇರಾನ್

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೋಮವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು "ನಿಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿದೆ" ಮತ್ತು "ನಿಮ್ಮ ದಯೆಯಿಂದ ಗಮನ...

ಅಮೆರಿಕದ ಯಾವುದೇ ದಾಳಿ ಎದುರಿಸಲು ನಾವು ಸಿದ್ದ : ಟ್ರಂಪ್ ಬೆದರಿಕೆ ಬೆನ್ನಲ್ಲೇ ಕ್ಯೂಬಾ ಹೇಳಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಕ್ಯೂಬಾವನ್ನು ವಶಪಡಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕ್ಯೂಬಾದ ಉಪ ವಿದೇಶಾಂಗ ಸಚಿವ ಕಾರ್ಲೋಸ್ ಫೆರ್ನಾಂಡಿಸ್ ಡಿ ಕೊಸ್ಸಿಯೊ, ಅಮೆರಿಕ ಯಾವುದೇ...

ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...