Homeಕರೋನಾ ತಲ್ಲಣನಾನು ದೇಶಕ್ಕಾಗಿ ಹೋರಾಡಿದೆ, ಈ ವ್ಯವಸ್ಥೆ ಕೋವಿಡ್‌ನಿಂದ ಮಗನನ್ನು ರಕ್ಷಿಸಲಿಲ್ಲ: ಯುಪಿಯಲ್ಲಿ ಕಾರ್ಗಿಲ್ ಯೋಧನ ಅಳಲು

ನಾನು ದೇಶಕ್ಕಾಗಿ ಹೋರಾಡಿದೆ, ಈ ವ್ಯವಸ್ಥೆ ಕೋವಿಡ್‌ನಿಂದ ಮಗನನ್ನು ರಕ್ಷಿಸಲಿಲ್ಲ: ಯುಪಿಯಲ್ಲಿ ಕಾರ್ಗಿಲ್ ಯೋಧನ ಅಳಲು

- Advertisement -
- Advertisement -

ಕಾರ್ಗಿಲ್ ಯುದ್ಧದ ವೀರ ಸುಬೇದಾರ್ ಮೇಜರ್ (ನಿವೃತ್ತ) ಹರಿರಾಮ್ ದುಬೆಯವರ 31 ವರ್ಷದ ಮಗ ಕೋವಿಡ್ ಕಾರಣದಿಂದಾಗಿ ಉತ್ತರಪ್ರದೇಶದ ಕಾನ್ಪುರ ನಗರದಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಬೇದಾರ್ ದುಬೆಯವರು ತನ್ನ ಮಗನ ದೇಹವನ್ನು ಕೊನೆಯ ಬಾರಿಗೆ ನೋಡಲು ಸುಡುವ ಸೂರ್ಯನ ಕೆಳಗೆ ಗಂಟೆಗಳ ಕಾಲ ಕಾಯಬೇಕಾಯಿತು ಎಂದು ಅಳಲು ತೋಡಿಕೊಂಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಕಾನ್ಪುರ್ ಉತ್ತರ ಪ್ರದೇಶದ ಅತಿ ಹೆಚ್ಚು ಕೋವಿಡ್ ಪೀಡಿತ ನಗರಗಳಲ್ಲಿ ಒಂದಾಗಿದೆ.
ಇಂಡಿಯಾ ಟುಡೆ ಟಿವಿ ಜೊತೆ ಹ್ಯಾಲೆಟ್ ಆಸ್ಪತ್ರೆಯಲ್ಲಿ ಸುಬೇದಾರ್ ಮೇಜರ್ (ನಿವೃತ್ತ) ಹರಿರಾಮ್ ದುಬೆ ಮಾತನಾಡಿದ್ದಾರೆ.

“ನಾನು 1981ರಿಂದ 2011ರವರೆಗೆ ನನ್ನ ತಾಯಿನಾಡಿಗೆ ಸೇವೆ ಸಲ್ಲಿಸಿದ್ದೇನೆ. ಕಾರ್ಗಿಲ್ ಯುದ್ಧದ ವೇಳೆ ಭಾಗಿಯಾಗಿದ್ದೇನೆ. ನಂತರ ಬಾರಾಮುಲ್ಲಾ, ಲಡಾಖ್ ಮತ್ತು ಲುಕುಂಗ್ಗೆ ಪ್ರದೇಶಗಳಲ್ಲಿ ಹೋರಾಡಿದ್ದೇನೆ. ನಾನು ಬಾರಾಮುಲ್ಲಾದಲ್ಲಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಿದ್ದೇನೆ ಮತ್ತು ಕಾರ್ಗಿಲ್‌ನಲ್ಲಿ ಪಾಕಿಸ್ತಾನದ ವಿರುದ್ಧ ಹೋರಾಡಿದೆ. ಆದರೆ ಈ ದೇಶದ ವ್ಯವಸ್ಥೆಗೆ ನನ್ನ ಮಗನನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಮಂಗಳವಾರ ಸಂಜೆ ಕೋವಿಡ್‌ನಿಂದ ನಿಧನರಾದ ಮಗ ಅಮಿತಾಬ್ ನೆನೆದು ದುಃಖಿತರಾದರು.

ವೈದ್ಯಕೀಯ ಆಮ್ಲಜನಕ ಮತ್ತು ಆಮ್ಲಜನಕ ಸಿಲಿಂಡರ್‌ಗಳಿಗಾಗಿ ಹೆಣಗಾಡುತ್ತಿರುವ ನಗರದಾದ್ಯಂತದ ಆಸ್ಪತ್ರೆಗಳು ಕೋವಿಡ್ ರೋಗಿಗಳಿಂದ ತುಂಬಿವೆ. ಮೃತ ರೋಗಿಗಳ ಕುಟುಂಬ ಸದಸ್ಯರು ತಮ್ಮ ಪ್ರೀತಿಪಾತ್ರರ ಮೃತ ದೇಹಗಳನ್ನು ನೋಡಲು ಗಂಟೆಗಟ್ಟಲೆ ಕಾಯಬೇಕಾಗುತ್ತಿದೆ.

ಕಾನ್ಪುರದ ಭೈರವಘಾಟ್ ಪ್ರದೇಶದಲ್ಲಿನ ಸ್ಮಶಾನವನ್ನು ನೋಡಿದರೆ ಪರಿಸ್ಥಿತಿಯ ಭೀಕರತೆ ಅರ್ಥವಾಗುತ್ತದೆ. ಜನರ ಯಾತನೆ ಈಗ ಕೋಪಕ್ಕೆ ತಿರುಗಿದೆ. ದೇಶಕ್ಕೆ ಸೇವೆ ಸಲ್ಲಿಸಿದ ಅನುಭವಿಗಳು ಸಹ ಅಸಹಾಯಕರಾಗಿದ್ದಾರೆ.

ಇನ್ನೂ ಒಂದು ಸ್ಯನಿಕ ಕುಟುಂಬದ ಅಸಹಾಯಕತೆ…

‘ನಾನು ಶ್ರೀನಗರದಲ್ಲಿ ಸೇವೆ ಸಲ್ಲಿಸಿದ್ದೇನೆ, ಯಾರೂ ನನ್ನ ತಂಗಿಯನ್ನು ನೋಡಿಕೊಳ್ಳಲಿಲ್ಲ’ ಎಂದು ಕಾನ್ಪುರದ ನಿವಾಸಿ ಚಂದ್ರಪಾಲ್ ಹೇಳಿದ್ದಾರೆ. ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಹಾಯಕ ಕಮಾಂಡೆಂಟ್ ಆಗಿ ಕೆಲಸ ಮಾಡಿ ಅವರು ನಿವೃತ್ತರಾಗಿದ್ದಾರೆ. ಕೋವಿಡ್ ಪೀಡಿತ ಅವರ ಸಹೋದರಿ ಸಾವಿತ್ರಿ ಬುಧವಾರ ಬೆಳಿಗ್ಗೆ ನಿಧನರಾದರು.

ವಾರ್ಡ್ ಹುಡುಗರು ತಮ್ಮ ಸಹೋದರಿಯ ನಿಧನದ ಬಗ್ಗೆ ಮಾಹಿತಿ ನೀಡಿದರು ಎಂದು ನಿವೃತ್ತ ಸೈನಿಕ ಹೇಳುತ್ತಾರೆ.

ಚಂದ್ರಪಾಲ್ ಅವರ ಕುಟುಂಬ ಸದಸ್ಯ ರಾಮಚಂದ್ರ ಕೂಡ ನಿವೃತ್ತ ಸೈನಿಕ. ಉಸಿರಾಟದ ತೊಂದರೆಯಿಂದಾಗಿ ಕುಟುಂಬವು ಏಪ್ರಿಲ್ 22 ರಂದು ಕಾನ್ಪುರದ ಹ್ಯಾಲೆಟ್ ಆಸ್ಪತ್ರೆಗೆ ಸಾವಿತ್ರಿ ಅವರನ್ನು ಕರೆತಂದಿತ್ತು ಎಂದು ಇಂಡಿಯಾ ಟುಡೆ ಟಿವಿಗೆ ತಿಳಿಸಿದರು.

“ಸಾವಿತ್ರಿ ಅವರನ್ನು ಹ್ಯಾಲೆಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಯೋಗಕ್ಷೇಮದ ಬಗ್ಗೆ ಯಾರಿಂದಲೂ ಮಾಹಿತಿ ಸಿಗಲಿಲ್ಲ. ನಾನು ಶ್ರೀನಗರದಲ್ಲಿ ಸೇವೆ ಸಲ್ಲಿಸಿದ್ದೇನೆ ಆದರೆ ಯಾರೂ ನನ್ನ ತಂಗಿಯನ್ನು ನೋಡಿಕೊಳ್ಳಲಿಲ್ಲ. ಅವರು ನಿಧನರಾದರು ಎಂದು ನಮಗೆ ಇಂದು ತಿಳಿದುಬಂದಿದೆ” ಎಂದು ರಾಮಚಂದ್ರ ಹೇಳಿದರು.

ಮಹಿಳೆಯ ದುಃಖಿತ ಮಗ, ಆಮ್ಲಜನಕದ ಮಟ್ಟವು ತೀವ್ರವಾಗಿ ಕುಸಿಯಿತು ಮತ್ತು ತಾಯಿಯನ್ನು ಬೈಪಾಪ್ (ಬಿಲೆವೆಲ್ ಪಾಸಿಟಿವ್ ಏರ್‌ವೇ ಪ್ರೆಶರ್) ನಲ್ಲಿ ಇರಿಸಲಾಗಿದೆ ಎಂದು ಹೇಳಿದರು. ಆದರೆ ಯಾವುದೂ ನೆರವಾಗಲಿಲ್ಲ ಎಂದರು.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...