Homeಕರ್ನಾಟಕವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ನರೇಗಾ ಉಳಿಸಿ ಆಂದೋಲನದ ಪೂರ್ವ ಸಿದ್ಧತೆ ಸಭೆಯಲ್ಲಿ ಅವರು ಮಾತನಾಡಿದರು.

ಇದು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಆಗುವ ಆಂದೋಲನ. ಉತ್ತರ ಭಾರತದಲ್ಲಿ ಕಾಯ್ದೆಗಳ ಬದಲಾವಣೆಗೆ ರೈತರು ಹೋರಾಡಿದಂತೆ ಹೋರಾಟ ಮಾಡಬೇಕು ಎಂದು ಸಿಎಂ ಹೇಳಿದರು.

ಕಳೆದ ತಿಂಗಳು ಎಐಸಿಸಿ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ. ನರೇಗಾ ರದ್ದು ಮಾಡಿರುವುದನ್ನು ಪಕ್ಷ ಬಹಳ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಸರ್ಕಾರ ನರೇಗಾ ರದ್ದು ಮಾಡಿ ವಿಬಿ-ಜಿ ರಾಮ್ ಜಿ ಎಂಬ ಹೊಸ ಕಾಯ್ದೆಯನ್ನು ರೂಪಿಸಿದೆ. ಮಹಾತ್ಮ ಗಾಂಧಿ ಹೆಸರು ಎಂದರೆ ಅವರಿಗೆ ಅಲರ್ಜಿ ಎಂದರು.

ನರೇಗಾದಿಂದ 12.16 ಕೋಟಿ ಕಾರ್ಮಿಕರಿಗೆ ಕೆಲಸ

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನರೇಗಾ ಕಾಯ್ದೆಯನ್ನು ಗ್ರಾಮೀಣ ಪ್ರದೇಶದ ಬಡವರಿಗೆ ಕೆಲಸದ ಹಕ್ಕು ನೀಡಲೆಂದು ಮೂಲಭೂತ ಹಕ್ಕನ್ನಾಗಿಸಿದರು. ನಿರುದ್ಯೋಗ, ಆಹಾರ, ಮಾಹಿತಿ, ಕಾಡಿನಲ್ಲಿ ವಾಸಿಸುವ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನ ಮಾಡಿದರು. ಆಹಾರ ಭದ್ರತಾ ಕಾಯ್ದೆ, ಉದ್ಯೋಗ ಖಾತ್ರಿ, ಮಾಹಿತಿ ಹಕ್ಕು, ಶಿಕ್ಷಣದ ಹಕ್ಕು, ಅರಣ್ಯ ವಾಸಿಗಳ ಹಕ್ಕು ಒದಗಿಸುವ ಕಾಯ್ದೆಗಳನ್ನು ರೂಪಿಸಿದರು. ಕಳೆದ 20 ವರ್ಷಗಳಿಂದ ಜಾರಿಯಲ್ಲಿದ್ದ ಕಾಯ್ದೆಯಡಿ 12.16 ಕೋಟಿ ಕಾರ್ಮಿಕರು ದೇಶದಲ್ಲಿ ಕೆಲಸ ಮಾಡುತ್ತಿದ್ದು, 6.21ಕೋಟಿ ಮಹಿಳೆಯರು ಕೆಲಸಮಾಡುತ್ತಿದ್ದಾರೆ ಎಂದು ತಿಳಿಸಿದರು.

ವಿಬಿ-ಜಿ ರಾಮ್ ಜಿ ಮೂಲಕ ಮತ್ತೊಮ್ಮೆ ಮಹಾತ್ಮ ಗಾಂಧೀಯ ಕೊಲೆ

ನರೇಗಾದಿಂದ ಗ್ರಾಮೀಣ ಪ್ರದೇಶದಲ್ಲಿ 365 ದಿನಗಳ ಕಾಲ ಕೆಲಸ ಕೇಳಬಹುದಾಗಿತ್ತು. ಕಾರ್ಮಿಕರು ಅವರ ಊರಿನಲ್ಲಿ, ಅವರ ಜಮೀನಿನಲ್ಲಿಯೇ ಕೆಲಸ ಮಾಡಬಹುದಾಗಿತ್ತು. ಇದನ್ನು ಬದಲಾಯಿಸಿ ಮೋದಿ ಸರ್ಕಾರ ವಿಬಿ-ಜಿ ರಾಮ್ ಜಿ ಕಾಯ್ದೆ ಜಾರಿಗೆ ತಂದಿದೆ. ದಶರಥ ರಾಮ, ಸೀತಾ ರಾಮ ಅಥವಾ ಕೌಶಲ್ಯ ರಾಮನಲ್ಲ. ಮಹಾತ್ಮಾ ಗಾಂಧಿ ಕೊಂದ ನಾಥೂರಾಮ ಇದು. ಗಾಂಧಿಯವರನ್ನು ಮೊತ್ತೊಮ್ಮೆ ಕೊಲ್ಲುತ್ತಿದ್ದಾರೆ. ನರೇಗಾ ಕಾಯ್ದೆಯಡಿ ಕೆಲಸ ಕೊಡಲಿಲ್ಲ ಎಂದು ನ್ಯಾಯಾಲಯಕ್ಕೆ ಕೂಡ ಹೋಗಬಹುದಿತ್ತು ಎಂದರು.

ನರೇಗಾ ಉಳಿಸಿ ಜನಾಂದೋಲನವಾಗಬೇಕು

ಈಗ ಕೇಂದ್ರ ಸರ್ಕಾರ ಅಧಿಸೂಚನೆ ಮೂಲಕ ಇಂಥ ಕಡೆ ಕೆಲಸ ಎಂದು ನಿಗದಿ ಮಾಡುತ್ತದೆ, ಅಲ್ಲಿ ಕೆಲಸ ಮಾಡಬೇಕು. ರಾಜ್ಯಗಳು ಶೇಕಡ 40ರಷ್ಟು ವೆಚ್ಚವನ್ನು ಭರಿಸಬೇಕಿದೆ. 2,500 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಕೊಡಬೇಕಾಗುತ್ತದೆ. ಅದಕ್ಕಾಗಿಯೇ ನರೇಗಾ ಉಳಿಸಿ ಆಂದೋಲನವನ್ನು ರೂಪಿಸಲಾಗಿದೆ. ಇದು ಜನಾಂದೋಲನವಾಗಿ ಪರಿವರ್ತನೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...