Homeಕರ್ನಾಟಕವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

ವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ (ಜ.27) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ವತಿಯಿಂದ ‘ನರೇಗಾ ಉಳಿಸಿ ಆಂದೋಲನ’ದ ಅಂಗವಾಗಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಮಾವೇಶ ಹಾಗೂ ರಾಜಭವನ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿಯವರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ರದ್ದು ಮಾಡಿ, ದುರುದ್ದೇಶದಿಂದ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಹೊಸ ಕಾಯ್ದೆಗೆ ವಿಕಸಿತ ಭಾರತ- ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಎಂಬ ಹೆಸರಿಟ್ಟಿದ್ದಾರೆ ಎಂದು ಸಿಎಂ ತಿಳಿಸಿದರು.

ಬಡವರ ಬಗ್ಗೆ ಕಾಂಗ್ರೆಸ್ ಪಕ್ಷ ಮಾತ್ರವೇ ಚಿಂತಿಸುತ್ತದೆ

2005ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ನರೇಗಾ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಅಂತೆಯೇ ಆಹಾರದ ಹಕ್ಕು, ಕೆಲಸದ ಹಕ್ಕು, ಶಿಕ್ಷಣದ ಹಕ್ಕು, ಮಾಹಿತಿ ಹಕ್ಕು, ಅರಣ್ಯ ಕಾಯ್ದೆ ಗಳು ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿಯೇ ಜಾರಿಗೆ ಬಂದವು. ಎಂದಿಗೂ ಮಹಿಳೆಯರು, ದಲಿತರು ಹಿಂದುಳಿದವರು, ಅಲ್ಪಸಂಖ್ಯಾತರು, ಸಣ್ಣ ರೈತರ ಬಗ್ಗೆ ಕೇವಲ ಕಾಂಗ್ರೆಸ್ ಪಕ್ಷ ಮಾತ್ರ ಚಿಂತನೆ ಮಾಡುತ್ತದೆ ಎಂದು ಸಿಎಂ ಹೇಳಿದರು.

ಬಡವರು ಸೇವಕರಾಗಿಯೇ ಇರಲು ಬಿಜೆಪಿ-ಆರ್‌ಎಸ್‌ಎಸ್ ಕುತಂತ್ರ

ಬಿಜೆಪಿಯವರು ಈ ಜನಪರ ಯೋಜನೆಗಳನ್ನು ನಾಶ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಉದ್ಯೋಗ ಸಿಗದಂತೆ ಮಾಡಲಾಗುತ್ತಿದೆ. ಸುಮಾರು ಶೇ. 53ರಷ್ಟು ಮಹಿಳೆಯರು, ಶೇ.28ರಷ್ಟು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರು ಮತ್ತು ಸುಮಾರು 5 ಲಕ್ಷ ಅಂಗವಿಕಲರು ಕೂಲಿ ಕೆಲಸದಲ್ಲಿ ನಿರತರಾಗಿದ್ದು, ನರೇಗಾ ಯೋಜನೆಯಿಂದ ಎಲ್ಲರಿಗೂ ಉದ್ಯೋಗ ಸಿಗುವಂತಾಗಿತ್ತು. ಆದರೆ, ಕೇಂದ್ರ ಸರ್ಕಾರದವರು ಆರ್‌ಎಸ್‌ಎಸ್‌ನವರ ಜೊತೆಗೂಡಿ ಬಡಜನರು ಸದಾ ಸೇವಕರಾಗಿಯೇ ಇರಬೇಕೆಂದು ಹುನ್ನಾರ ಮಾಡಿದ್ದಾರೆ ಎಂದರು.

ಬಡವರ ಕೆಲಸವನ್ನು ದಿಲ್ಲಿಯಲ್ಲಿ ನಿರ್ಧರಿಸುವುದು ತಪ್ಪು

ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಸಣ್ಣ ರೈತರು ನರೇಗಾ ಯೋಜನೆಯ ಮೂಲಕ ವರ್ಷದ ಯಾವುದೇ ದಿನಗಳಲ್ಲಿ ಕೆಲಸ ಮಾಡಬಹುದಿತ್ತು. ಗ್ರಾಮಸಭೆಗಳು ಹಾಗೂ ಗ್ರಾಮ ಪಂಚಾಯತಿಗಳು ಕೆಲಸವನ್ನು ನಿರ್ಧರಿಸುತ್ತಿತ್ತು. ಆದರೆ, ಈಗ ಬಡವರ, ಗ್ರಾಮೀಣ ಕೆಲಸವನ್ನು ಸ್ಥಳೀಯ ಗ್ರಾಮೀಣ ಆಡಳಿತ ಬಿಟ್ಟು, ದಿಲ್ಲಿಯಲ್ಲಿ ನಿರ್ಧರಿಸಲಾಗುತ್ತದೆ ಎಂದರು.

ನರೇಗಾದಿಂದ 100 ದಿನಗಳ ಕೆಲಸದ ಭರವಸೆಯಿತ್ತು

ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಬಡ ಕೂಲಿ ಕಾರ್ಮಿಕರಿಗೆ ಕೆಲಸ ಸಿಗುವ ಅವಕಾಶವಿಲ್ಲ. ನರೇಗಾ ಯೋಜನೆಯಿಂದ ಈ ಹಿಂದೆ ಕೂಲಿಗಾರರಿಗೆ 100 ದಿನಗಳ ಕೆಲಸ ಖಾತ್ರಿಯಾಗಿ ಸಿಗುತ್ತಿತ್ತು. ಬಡವರ ಕೆಲಸದ ಹಕ್ಕು ಸಂವಿಧಾನಬದ್ಧವಾದದ್ದು. ಆದರೆ, ವಿಬಿ-ರಾಮ್ ಜಿ ಯ ಜಾರಿಯಿಂದ ಈ ಹಕ್ಕನ್ನು ಕಸಿದುಕೊಳ್ಳಲಾಗಿದೆ. ಈ ಹಿಂದೆ ನರೇಗಾ ಅಡಿಯಲ್ಲಿ ವೆಚ್ಚಮಾಡಲಾಗುವ ಅನುದಾನವನ್ನು ಕೇಂದ್ರ ಸರ್ಕಾರವೇ ನೀಡುತ್ತಿತ್ತು. ಈಗ ಈ ಅನುದಾನವನ್ನು ನಿಲ್ಲಿಸಲಾಗಿದ್ದು, ಕೇಂದ್ರದ ಈ ಹೊಸ ಕಾಯ್ದೆಯಂತೆ ಶೇ. 40ರಷ್ಟು ಹಣವನ್ನು ರಾಜ್ಯ ಸರ್ಕಾರಗಳು ಕೊಡಬೇಕು, ಕೇಂದ್ರ ಶೇ.60ರಷ್ಟು ಮಾತ್ರ ಪಾವತಿಸುತ್ತವೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ

ಕೇಂದ್ರದ ಇಂತಹ ಜನವಿರೋಧಿ ನೀತಿಯಿಂದ ಹಲವು ರಾಜ್ಯಗಳು ಕಷ್ಟಕ್ಕೆ ಸಿಲುಕಿವೆ. ಆದ್ದರಿಂದ ನಮ್ಮ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ಕೇಂದ್ರದ ನೀತಿಯ್ನು ಪ್ರತಿಭಟಿಸುತ್ತಿದೆ. ಈ ಕಾಯ್ದೆಯನ್ನು ರದ್ದುಪಡಿಸಿ, ಪುನ: ನರೇಗಾ ವನ್ನು ಸ್ಥಾಪಿಸುವವರೆಗೂ ಇಡೀ ದೇಶದ ಜನರು ಈ ಹೋರಾಟ ಮುಂದುವರೆಸಬೇಕಿದೆ. ಈ ಬಾರಿ ರೈತರು, ಕಾರ್ಮಿಕರು, ಮಹಿಳೆಯರು ಈ ಹೋರಾಟದಲ್ಲಿ ಕೈಜೋಡಿಸಲಿದ್ದಾರೆ ಎಂದರು.

ವಿಬಿ-ಜಿ ರಾಮ್ ಜಿ ಆರ್‌ಎಸ್‌ಎಸ್ ಹುನ್ನಾರ

ವಿಬಿ-ಜಿ ರಾಮ್ ಜಿ ಕಾಯ್ದೆ ಬಡವರ ಹಕ್ಕನ್ನು ರಕ್ಷಿಸುವುದಿಲ್ಲ. ಈ ಹುನ್ನಾರದ ಹಿಂದೆ ಆರ್‌ಎಸ್‌ಎಸ್ ಇದೆ. ಬಡವರು ಬಲಯುತರಾಗದೇ, ಸೇವಕರಾಗಿಯೇ ಇರಬೇಕೆಂಬ ಕುತಂತ್ರ ಅವರದ್ದಾಗಿದೆ. ಸಮಾಜದಲ್ಲಿ ಅಸಮಾನತೆಯನ್ನು ಶಾಶ್ವತವಾಗಿಸುವುದೇ ಅರ್‌ಎಸ್‌ಎಸ್‌ ಹುನ್ನಾರ ಎಂದು ಹೇಳಿದರು.

ನರೇಗಾ ರದ್ಧತಿ ಬಗ್ಗೆ ವಿಶೇಷ ಅಧಿವೇಶನ- ಬಿಜೆಪಿ ಚರ್ಚಿಸುತ್ತಿಲ್ಲ

ಡಾ.ಬಿ.ಆರ್ ಅಂಬೇಡ್ಕರ್ ಹೇಳಿದಂತೆ ದೇಶದಲ್ಲಿ ಸಮಾನತೆ ಸ್ಥಾಪನೆಯಾಗಿಸಲು ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ಎಲ್ಲರಿಗೂ ದೊರೆಯಬೇಕು. ಮಹಾತ್ಮಾ ಗಾಂಧಿಯವರು ಗ್ರಾಮ ಸ್ವರಾಜ್ಯ ಪ್ರತಿಪಾದಿಸಿದರು. ಗೋಡ್ಸೆ ಮಹಾತ್ಮಾಗಾಂಧಿಯವರನ್ನು ಹತ್ಯೆ ಮಾಡಿದರೆ, ಬಿಜೆಪಿಯವರು ನರೇಗಾ ಯೋಜನೆಯನ್ನು ರದ್ದುಗೊಳಿಸುವ ಮೂಲಕ ಮಹಾತ್ಮಾ ಗಾಂಧಿಯವರನ್ನು ಮತ್ತೊಮ್ಮೆ ಹತ್ಯೆ ಮಾಡಿದಂತಾಗಿದೆ. ಬಿಜೆಪಿಯವರು ಈಗ ಸುಳ್ಳು ಹೇಳುತ್ತಿದ್ದಾರೆ. ಈ ಕಾಯ್ದೆಯ ರದ್ದತಿಯ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ಆದರೆ ಬಿಜೆಪಿಯವರು ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಆದರೆ, ರದ್ದತಿಯ ವಿರುದ್ಧ ಸರ್ಕಾರ ಖಂಡಿತ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದರು.

ಮುಂದಿನ ಬಜೆಟ್‌ನಲ್ಲಿ ಗ್ರಾಮಪಂಚಾಯತ್‌ಗಳಿಗೆ ಮಹಾತ್ಮಾ ಗಾಂಧಿ ಹೆಸರು

ನರೇಗಾ ಯೋಜನೆಯ ಪುನರ್ ಸ್ಥಾಪನೆ ಹಾಗೂ ವಿಬಿ-ಜಿ ರಾಮ್ ಜಿ ಯ ರದ್ದತಿಯನ್ನು ಒತ್ತಾಯಿಸಿ ರಾಜಭವನಕ್ಕೆ ಮನವಿಯನ್ನು ತಲುಪಿಸಲಾಗುವುದು. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪಾದಯಾತ್ರೆ ಪ್ರಾರಂಭಿಸಲಾಗಿದ್ದು, ರಾಜ್ಯದ ಪ್ರತಿಯೊಬ್ಬರೂ ಕಾಂಗ್ರೆಸ್‌ ಈ ಉದ್ದೇಶಕ್ಕೆ ಸಹಕರಿಸಬೇಕು. ಮುಂದಿನ ಬಜೆಟ್ ನಲ್ಲಿ ರಾಜ್ಯದ 6000 ಗ್ರಾಮ ಪಂಚಾಯತ್‌ ಕಚೇರಿಗಳಿಗೂ ಮಹಾತ್ಮಾ ಗಾಂಧಿಯವರ ಹೆಸರನ್ನು ಇಡುವ ಬಗ್ಗೆ ಘೋಷಿಸಲಾಗುವುದು ಎಂದು ಸಿಎಂ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಸೋನಭದ್ರಾದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು 

ಸೋನಭದ್ರ: ರಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಕ್ರವಾರ್ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಸೋಮವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕ್ರಾವರ್ ಗ್ರಾಮದ ಪಂಚಾಯತ್ ಕಟ್ಟಡದ ಬಳಿ...

ಬುಡಕಟ್ಟು ರೈತರ ಬೃಹತ್ ಮೆರವಣಿಗೆ: ಬೇಡಿಕೆಗಳ ಕುರಿತು ಸಿಪಿಐ(ಎಂ)-ಎಐಕೆಎಸ್ ನಿಯೋಗದೊಂದಿಗೆ ಮುಖ್ಯಮಂತ್ರಿ ಫಡ್ನವೀಸ್ ಮಾತುಕತೆ

ಬಾಕಿ ಇರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ(ಎಂ)-ಎಐಕೆಎಸ್ ನೇತೃತ್ವದಲ್ಲಿ ನಾಸಿಕ್‌ನಿಂದ ಮುಂಬೈಗೆ ಸಾವಿರಾರು ರೈತರು ಮತ್ತು ಬುಡಕಟ್ಟು ನಿವಾಸಿಗಳು ನಡೆಸಿದ ದೀರ್ಘ ಮೆರವಣಿಗೆ ಇಂದು ಜನವರಿ 27 ರಂದು ಮುಂಬೈನ ಮಂತ್ರಾಲಯ...

‘ಭಾರತದಲ್ಲಿ ಬಿಜೆಪಿ ದಾಳಿಯನ್ನು ಎದುರಿಸಲು ‘ದೀದಿ’ಗೆ ಮಾತ್ರ ಸಾಧ್ಯ’: ಅಖಿಲೇಶ್ ಯಾದವ್ 

ಕೋಲ್ಕತ್ತಾ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ "ಬಿಜೆಪಿಯ ದಾಳಿಯನ್ನು ಎದುರಿಸುವಲ್ಲಿನ ಧೈರ್ಯ"ಕ್ಕಾಗಿ ಟಿಎಂಸಿ ಮುಖ್ಯಸ್ಥೆಯನ್ನು ಶ್ಲಾಘಿಸಿದ್ದಾರೆ. ಉತ್ತರ ಪ್ರದೇಶದ ಮಾಜಿ...

ಬದರಿನಾಥ್-ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ ಸಾಧ್ಯತೆ

ಉತ್ತರಾಖಂಡದ ಹಿಮಾಲಯದ ಮಡಿಲಲ್ಲಿ ನೆಲೆಗೊಂಡಿರುವ ಶತಮಾನಗಳಷ್ಟು ಹಳೆಯದಾದ ಬದರಿನಾಥ್ ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶ ಅನುಮತಿಸಬಹುದು. ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಎರಡು ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು...

ಯುಸಿಸಿಯಲ್ಲಿ 18 ಬದಲಾವಣೆ ಮಾಡಿದ ಉತ್ತರಾಖಂಡ್ ಸರ್ಕಾರ; ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಜಾರಿಗೆ

ವಿವಾಹ, ವಿಚ್ಛೇದನ, ಲಿವ್-ಇನ್ ಸಂಬಂಧಗಳು ಮತ್ತು ಉತ್ತರಾಧಿಕಾರಕ್ಕೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸುವ ಗುರಿಯನ್ನು ಹೊಂದಿರುವ ಸುಮಾರು ಹದಿನೆಂಟು ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆಯ ಹಲವಾರು ನಿಬಂಧನೆಗಳನ್ನು ಮಾರ್ಪಡಿಸಲು ಉತ್ತರಾಖಂಡ ಸರ್ಕಾರ...

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮ ಗಾಂಧಿಯವರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕೇಂದ್ರ ಸರ್ಕಾರ ನರೇಗಾ ಬದಲಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ದ ಬೆಂಗಳೂರಿನ ಸ್ವಾತಂತ್ರ್ಯ...

ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ಇಬ್ಬರು ಬುಡಕಟ್ಟು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಗಿರಿದಿಹ್: ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಪಿರ್ತಾಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರ್ಲಾದಿಹ್ ಪ್ರದೇಶದಲ್ಲಿ ಈ ಘಟನೆ...

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ : ಪ್ರಬಲ ಜಾತಿಯವರಿಂದ ತೀವ್ರ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಪ್ರಬಲ ಜಾತಿಯವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಹೊಸ ನಿಯಮಗಳ 'ಜಾತಿ ಆಧಾರಿತ ತಾರತಮ್ಯ' ಎಂಬುವುದರ...

ಬಲವಂತದ ಮದುವೆಗೆ ಒಪ್ಪದ ಅಪ್ರಾಪ್ತ ಬಾಲಕಿಯ ಅಪಹರಣ: ಪೊಲೀಸ್ ನಿಷ್ಕ್ರಿಯತೆಯ ಬಗ್ಗೆ ತಾಯಿ ಆರೋಪ

ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ 17 ವರ್ಷದ ಬಾಲಕಿಯನ್ನು ಬಲವಂತದ ಮದುವೆಗೆ ಒತ್ತಡದ ನಡುವೆ ಅಪಹರಿಸಲಾಗಿದೆ ಎಂದು ಆರೋಪಿಸಲಾಗಿದೆ. ಪೊಲೀಸ್ ದೂರು ನೀಡಿ ಸಹಾಯಕ್ಕಾಗಿ ಪದೇ ಪದೇ ಮನವಿ ಮಾಡಿದರೂ ಸ್ಥಳೀಯ ಅಧಿಕಾರಿಗಳು...

ಶೇ. 50ಕ್ಕಿಂತ ಹೆಚ್ಚಿನ ಬೆಲೆಗೆ ಅದಾನಿಯಿಂದ ವಿದ್ಯುತ್ ಖರೀದಿಗೆ ಒಪ್ಪಿದ್ದ ಹಸಿನಾ

ಪ್ರಧಾನಮಂತ್ರಿ ಪಟ್ಟದಿಂದ ಪದಚ್ಯುತಗೊಂಡ ಶೇಖ್ ಹಸೀನಾ ಅವರ ಅವಧಿಯಲ್ಲಿ ಸಹಿ ಹಾಕಲಾದ ಒಪ್ಪಂದಗಳ ಬಗ್ಗೆ ತನಿಖೆ ಮಾಡಲು ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ರಚಿಸಿದ ಪರಿಶೀಲನಾ ಸಮಿತಿಯು, ಅದಾನಿ ಗ್ರೂಪ್‌ನೊಂದಿಗಿನ ವಿದ್ಯುತ್ ಖರೀದಿ ಒಪ್ಪಂದದಲ್ಲಿ...