Homeಕರ್ನಾಟಕ'ಬಿಜೆಪಿ-ಜೆಡಿಎಸ್‌ನ ಸೇಡಿನ ರಾಜಕೀಯದ ವಿರುದ್ಧ ಹೋರಾಟ ಮುಂದುವರಿಯಲಿದೆ..'; ಹೈಕೋರ್ಟ್‌ ತೀರ್ಪಿನ ಕುರಿತು ಸಿಎಂ ಪ್ರತಿಕ್ರಿಯೆ

‘ಬಿಜೆಪಿ-ಜೆಡಿಎಸ್‌ನ ಸೇಡಿನ ರಾಜಕೀಯದ ವಿರುದ್ಧ ಹೋರಾಟ ಮುಂದುವರಿಯಲಿದೆ..’; ಹೈಕೋರ್ಟ್‌ ತೀರ್ಪಿನ ಕುರಿತು ಸಿಎಂ ಪ್ರತಿಕ್ರಿಯೆ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ತಮ್ಮ ಪತ್ನಿ ಹೆಸರಿಗೆ ನಿವೇಶನಗಳನ್ನು ಮಂಜೂರು ಮಾಡಿಸಿದ ಆರೋಪದ ಮೇಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್‌ ವಜಾ ಇಂದು ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, “ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ವಿಸ್ತೃತವಾದ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ” ಎಂದಿದ್ದಾರೆ.

“ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ. ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ಎಸ್ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು” ಎಂದು ಅವರು ವಿವರಿಸಿದ್ದಾರೆ.

“ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ಎಸ್ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ” ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಇದು ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ” ಎಂದಿದ್ದಾರೆ.

“ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು, ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ.
ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ. ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ” ಎಂದು ಹೇಳಿದರು.

“ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ. ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ಮನವಿ ಮಾಡುತ್ತೇನೆ. ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ. ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ” ಎಂದು ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಇಂದು ನನ್ನ ವಿರುದ್ಧ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್‌ಸಿಎಸ್‌ಪಿ/ಟಿಎಸ್‌‌ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ. ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು.
ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ” ಎಂದು ಅವರು ವಾಗ್ದಾಳಿ ನಡೆಸಿದರು.

“ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ; ಮುಡಾ ಪ್ರಕರಣ: ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌, ಸಿದ್ದರಾಮಯ್ಯ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...