Homeಕರ್ನಾಟಕಬಾಕಿ ಬರ ಪರಿಹಾರಕ್ಕಾಗಿ ಹೋರಾಟ ಮುಂದುವರಿಯಲಿದೆ: ಸಿಎಂ ಸಿದ್ದರಾಮಯ್ಯ

ಬಾಕಿ ಬರ ಪರಿಹಾರಕ್ಕಾಗಿ ಹೋರಾಟ ಮುಂದುವರಿಯಲಿದೆ: ಸಿಎಂ ಸಿದ್ದರಾಮಯ್ಯ

"ಎನ್‌ಡಿಆರ್‌ಎಫ್ ನಿಯಮಾವಳಿ ಪ್ರಕಾರ ರಾಜ್ಯಕ್ಕೆ 18,171 ಕೋಟಿ ರೂ. ಬರ ಪರಿಹಾರ ನೀಡಬೇಕಾಗಿದ್ದರೂ, ಕೇಂದ್ರ ಸರ್ಕಾರ ಕೇವಲ 3,498.98 ಕೋಟಿ ರೂ.ಗೆ ಅನುಮೋದನೆ ನೀಡಿ, 3,454 ಕೋಟಿ ರೂ. ಬಿಡುಗಡೆ ಮಾಡಿದೆ".

- Advertisement -
- Advertisement -

ಎನ್‌ಡಿಆರ್‌ಎಫ್ ನಿಯಮವಾಳಿ ಪ್ರಕಾರ ರಾಜ್ಯಕ್ಕೆ 18,171 ಕೋಟಿ ರೂಪಾಯಿ ಬರ ಪರಿಹಾರ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ 3,498.98 ಕೋಟಿ ರೂ.ಗೆ ಅನುಮೋದನೆ ನೀಡಿ, 3,454 ಕೋಟಿ ರೂ. ಬಿಡುಗಡೆ ಮಾಡಿದೆ. ಬರಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3, 454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ ಎಂಬ ಸುದ್ದಿಯ ಬೆನ್ನಲ್ಲೇ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ, ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ ನಮ್ಮಲ್ಲಿನ ಬರ ಸ್ಥಿತಿಯನ್ನು ಮನವರಿಕೆ ಮಾಡಿ ಕೊಟ್ಟಿದ್ದೆವು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರವು ರಾಜಕೀಯ ದುರುದ್ದೇಶದಿಂದ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ. ನ್ಯಾಯಾಲಯ ವಿಚಾರಣೆ ವೇಳೆ ಚಾಟಿ ಬೀಸಿದ ನಂತರ ವಾರದ ಅವಧಿಯೊಳಗೆ ಬರ ಪರಿಹಾರ ನೀಡಲಾಗುವುದು ಎಂದು ಮೋದಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ವಚನ ನೀಡಿತ್ತು. ಅದನ್ನು ಪಾಲಿಸಲಿಕ್ಕಾಗಿ ಒಲ್ಲದ ಮನಸ್ಸಿನಿಂದ ಈ ಪರಿಹಾರ ನೀಡಿದೆ ಎಂದು ತಿಳಿಸಿದ್ದಾರೆ.

ಬರ ಪರಿಹಾರ ಬಿಡುಗಡೆಯಲ್ಲಿ ರಾಜ್ಯ ಬಿಜೆಪಿ ನಾಯಕರದ್ದಾಗಲಿ, ಕೇಂದ್ರ ಬಿಜೆಪಿ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಇದು ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಸುಪ್ರೀಂಕೋರ್ಟ್ ಇಟ್ಟುಕೊಂಡಿರುವ ಕಾಳಜಿಯ ಫಲ. ಸ್ವಲ್ಪವಾದರೂ ಪರಿಹಾರವನ್ನು ನೀಡದೆ ಇದ್ದರೆ ರೊಚ್ಚೆದ್ದಿರುವ ಕರ್ನಾಟಕದ ಜನ ಚುನಾವಣಾ ಪ್ರಚಾರಕ್ಕಾಗಿ ತಮ್ಮನ್ನು ರಾಜ್ಯಕ್ಕೆ ಕಾಲಿಡಲು ಬಿಡಲಾರರು ಎಂಬ ಭಯವೂ ಈ ಪರಿಹಾರ ಘೋಷಿಸಲು ಕಾರಣವಾಗಿದೆ. ಈ ಅಲ್ಪ ಪರಿಹಾರವನ್ನು ತಮ್ಮ ಸಾಧನೆ ಎಂದು ರಾಜ್ಯದ ಬಿಜೆಪಿ ನಾಯಕರು ಬಿಂಬಿಸಲು ಹೊರಟರೆ ರಾಜ್ಯದ ಜನ ಅವರಿಗೆ ತಕ್ಕ ಉತ್ತರ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ಈ ಬರ ಪರಿಹಾರ ಬಿಡುಗಡೆಯ ಹಿಂದಿನ ಕಾರಣಗಳೇನೇ ಇರಲಿ, ನೀಡಿರುವ ಪರಿಹಾರಕ್ಕಾಗಿ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಸಾಧ್ಯವಾದಷ್ಟು ಶೀಘ್ರ ಬಾಕಿ ಪರಿಹಾರದ ಹಣವನ್ನು ಬಿಡುಗಡೆಗೊಳಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತಿದ್ದೇನೆ. ಇದೇ ರೀತಿ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯವನ್ನು ಕೂಡಾ ಕೇಂದ್ರ ಸರ್ಕಾರ ಸರಿಪಡಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ನಾವು 13-9-2024ರಂದು ಘೋಷಿಸಿದ್ದೆವು. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದೆ. ಇದರಿಂದಾಗಿ 35,162 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ. ಕೇಂದ್ರ ಬಿಜೆಪಿ ಸರ್ಕಾರದಿಂದ ನಾವು ಪರಿಹಾರ ಕೇಳಿರುವುದು ಹೆಚ್ಚು ಕಡಿಮೆ ಅದರ ಅರ್ಧದಷ್ಟು. ಅಂದರೆ ರೂ.18,171 ಕೋಟಿ. ಉಳಿದ ಹಣವನ್ನು ರಾಜ್ಯ ಸರ್ಕಾರ ತನ್ನ ಸಂಪನ್ಮೂಲದಿಂದಲೆ ಭರಿಸುತ್ತಿದೆ. ಈಗ ಬಿಡುಗಡೆಯಾಗಿರುವುದು ರೂ. 3,454 ಕೋಟಿ ಮಾತ್ರ. ಉಳಿದ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಕೇಂದ್ರದ ಜೊತೆ ಜಟಾಪಟಿ ನಡೆಸಿ ರಾಜ್ಯಕ್ಕೆ ಬರ ಪರಿಹಾರ ತಂದ ಸಿದ್ದರಾಮಯ್ಯ ಸರಕಾರ: 3,454 ಕೋಟಿ ರೂ. ಬರ ಪರಿಹಾರ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...