Homeಕರ್ನಾಟಕಲವ್‌ ಯೂ ರಚ್ಚು ಶೂಟಿಂಗ್ ವೇಳೆ ದುರಂತ: ವಿದ್ಯುತ್ ತಂತಿ ತಗುಲಿ ಫೈಟರ್‌ ವಿವೇಕ್ ಸಾವು

ಲವ್‌ ಯೂ ರಚ್ಚು ಶೂಟಿಂಗ್ ವೇಳೆ ದುರಂತ: ವಿದ್ಯುತ್ ತಂತಿ ತಗುಲಿ ಫೈಟರ್‌ ವಿವೇಕ್ ಸಾವು

- Advertisement -
- Advertisement -

ಮಾಸ್ತಿಗುಡಿ ದುರಂತ ಇನ್ನು ಕನ್ನಡ ಸಿನಿಮಾಸಕ್ತರ ಮನಗಳಿಂದ ದೂರವಾಗುವ ಮುನ್ನವೇ ಮತ್ತೆ ಚಂದನವನದಲ್ಲಿ ದುರಂತವೊಂದು ಸಂಭವಿಸಿದೆ. ನಟಿ ರಚಿತಾ ರಾಮ್ ಮತ್ತು ನಟ ಅಜಯ್ ರಾವ್‌ ತಾರಾಂಗಣದಲ್ಲಿರುವ ಲವ್‌ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್‌ ವಿವೇಕ್ ಸಾವನ್ನಪ್ಪಿದ್ದಾರೆ.

ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣ ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿಯ ಖಾಸಗಿ ರೆಸಾರ್ಟ್ ಬಳಿ ನಡೆಯುತಿತ್ತು. ಸಾಹಸ ದೃಶ್ಯಗಳನ್ನು ಶೂಟ್ ಮಾಡುವಾಗ ದುರಂತ ಸಂಭವಿಸಿದೆ. ಫೈಟರ್‌ ವಿವೇಕ್ ಮತ್ತು ಸ್ಟಂಟ್ ಮ್ಯಾನ್ ‌ಈ ದೃಶ್ಯದ ಭಾಗವಾಗಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವೇಳೆ ತಮಿಳುನಾಡು ಮೂಲದ ಫೈಟರ್‌ ವಿವೇಕ್‌ಗೆ ಹೈ ಟೆನ್ಶನ್ ವೈರ್‌ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಕ್ಷಣ ಚಿತ್ರೀಕರಣದಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ವಿವೇಕ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ‘ಸಲಗ’ ಸಿನಿಮಾಕ್ಕೆ ಸಿದ್ದಿ ಜಾನಪದ ಹಾಡು!

ದುರಂತದ ಬಗ್ಗೆ ಮಾಹಿತಿ ನೀಡಿರುವ ನಾಯಕ ನಟ ಅಜಯ್​ ರಾವ್​, ಮೆಟಲ್​ ರೋಪ್​ ಬಳಸಿದ್ದರಿಂದ ದುರಂತ ಸಂಭವಿಸಿದೆ. ಈ ದೃಶ್ಯದ ಚಿತ್ರೀಕರಣದ ವೇಳೆ ನಾನು ಇರಲಿಲ್ಲ. ನಾನು ಫೈಟ್ ನಡೆಯುತ್ತಿದ್ದ ಸ್ಥಳದಿಂದ 200 ಮೀಟರ್ ದೂರದಲ್ಲಿ ಕುಳಿತಿದ್ದೆ. ಬೇರೆಯವರು ಬಂದು ವಿಷಯ ತಿಳಿಸಿದರು” ಎಂದು ಹೇಳಿದ್ದಾರೆ.

ಸಾಹಸ‌ ನಿರ್ದೇಶಕ ವಿನೋದ್ ಚಿತ್ರದ ದೃಶ್ಯಗಳನ್ನು ಸಂಯೋಜನೆ ಮಾಡುತ್ತಿದ್ದರು. ದುರಂತದ ಬಳಿಕ ಚಿತ್ರದ ನಿರ್ದೇಶಕ ಶಂಕರ್​ ರಾಜ್​, ಫೈಟ್ ಮಾಸ್ಟರ್‌ರನ್ನು ಬಿಡದಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.   ರಾಜರಾಜೇಶ್ವರಿ ಆಸ್ಪತ್ರೆಗೆ ಫೈಟರ್‌ ವಿವೇಕ್ ಮೃತದೇಹ ಸಾಗಿಸಲಾಗಿದೆ.

Image

 

ಶಂಕರ್ ಎಸ್​ ರಾಜ್​ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಗುರು ದೇಶಪಾಂಡೆ ಚಿತ್ರದ ನಿರ್ಮಾಪಕರಾಗಿದ್ದಾರೆ.

2016 ರ ನವೆಂಬರ್‌ನಲ್ಲಿ ದುನಿಯಾ ವಿಜಯ್ ನಟನೆಯ ‘ಮಾಸ್ತಿ ಗುಡಿ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ಖಳನಟರಾದ ಅನಿಲ್, ಉದಯ್ ಪ್ರಾಣ ಕಳೆದುಕೊಂಡಿದ್ದ ದುರ್ಘಟನೆ ರಾಮನಗರದ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ನಡೆದಿತ್ತು. ಹೆಲಿಕಾಫ್ಟರ್ ನಿಂದ 100ಕ್ಕೂ ಹೆಚ್ಚು ಅಡಿ ಎತ್ತರದಿಂದ ಹಾರಿದ್ದ ಅನಿಲ್ ಮತ್ತು ಉದಯ್ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಮುಳುಗಿ ದುರಂತ ಸಾವಿಗೀಡಾಗಿದ್ದರು.


ಇದನ್ನೂ ಓದಿ: ಪ್ರೇಕ್ಷಕನ ವ್ಯಾಖ್ಯಾನದಿಂದಲೇ ಸೃಷ್ಟಿಯಾಗುವ ಆಂಡ್ರೆಯವರ ಅಮೂರ್ತ ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...