Homeಮುಖಪುಟತೆಲಂಗಾಣ: ‘ಸಮಾನತೆಯ ಪ್ರತಿಮೆ’ ವಿರುದ್ಧ ಪ್ರಕರಣ ದಾಖಲು

ತೆಲಂಗಾಣ: ‘ಸಮಾನತೆಯ ಪ್ರತಿಮೆ’ ವಿರುದ್ಧ ಪ್ರಕರಣ ದಾಖಲು

ಫೆಬ್ರವರಿ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸಮಾನತೆಯ ಪ್ರತಿಮೆಯನ್ನು ಉದ್ಘಾಟನೆ ಮಾಡಿದ್ದರು.

- Advertisement -
- Advertisement -

‘ಪ್ರಸಾದ’ದ ಪ್ಯಾಕೆಟ್‌ಗಳ ಮೇಲೆ ಉತ್ಪನ್ನದ ತೂಕ, ಉತ್ಪಾದನಾ ದಿನಾಂಕ, ಮುಕ್ತಾಯ ದಿನಾಂಕ ಮತ್ತು ತೂಕದ ಪ್ರಮಾಣವನ್ನು ತೋರಿಸಿಲ್ಲ ಎಂದು ಗ್ರಾಹಕರು ನೀಡಿದ ದೂರಿನ ಮೇರೆಗೆ ತೆಲಂಗಾಣದ ಸಮಾನತೆಯ ಪ್ರತಿಮೆಯ ವಿರುದ್ಧ ಕಾನೂನು ಮಾಪನಶಾಸ್ತ್ರ ಇಲಾಖೆ ಪ್ರಕರಣ ದಾಖಲು ಮಾಡಿದೆ.

11ನೇ ಶತಮಾನದ ಸಮಾಜ ಸುಧಾರಕ ರಾಮಾನುಜಾಚಾರ್ಯರ 216 ಅಡಿ ಪ್ರತಿಮೆಯನ್ನು ಸಮಾನತೆಯ ಪ್ರತಿಮೆ ಎಂದು ಹೆಸರಿಸಲಾಗಿದೆ. ಈ ಪ್ರತಿಮೆಯು ಶಂಶಾಬಾದ್ ಬಳಿಯ 45 ಎಕರೆ ಜಾಗದಲ್ಲಿ, ರಂಗಾ ರೆಡ್ಡಿ ಜಿಲ್ಲೆಯ ಮುಚಿಂತಲ್‌ನಲ್ಲಿರುವ ಚಿನ್ನಾ ಜೀಯರ್ ಟ್ರಸ್ಟ್‌ನ ಆವರಣದಲ್ಲಿದೆ.

ಈ ಹಿಂದೆ ಮೇ 26ರಂದು ವಿನಯ್ ವಂಗಾಲ ಎಂಬವರು ದೂರು ನೀಡಿದ್ದರು. ಪ್ರಸಾದದ ಪ್ಯಾಕೆಟ್‌ಗಳಲ್ಲಿ ತೂಕ, ಉತ್ಪಾದನೆ ಮತ್ತು ಮುಕ್ತಾಯ ದಿನಾಂಕ ನಮೂದಿಸದ ಕಾರಣ ಸಮಾನತೆಯ ಪ್ರತಿಮೆ ವಿರುದ್ಧ ಕಾನೂನು ಮಾಪನಶಾಸ್ತ್ರ ಇಲಾಖೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದರು.

ದೂರಿನ ಆಧಾರದ ಮೇಲೆ, ರಂಗಾರೆಡ್ಡಿ ವಲಯದ ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕರು ಪ್ರಕರಣ ದಾಖಲು ಮಾಡಿರುವುದಾಗಿ ಜೂ.21 ರಂದು ತೆಲಂಗಾಣದ ಕಾನೂನು ಮಾಪನಶಾಸ್ತ್ರದ ನಿಯಂತ್ರಕರಿಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ, ಜೂನ್ 20ರಂದು ಸಮಾನತೆಯ ಪ್ರತಿಮೆ ಆವರಣವನ್ನು ಪರಿಶೀಲಿಸಲಾಯಿತು. ಅದರ ಆಧಾರದ ಮೇಲೆ, ಕಾನೂನು ಮಾಪನಶಾಸ್ತ್ರ ಕಾಯಿದೆ, 2009ರ ಕಲಂ 10, 11, 12 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಫೆಬ್ರವರಿ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸಮಾನತೆಯ ಪ್ರತಿಮೆಯನ್ನು ಉದ್ಘಾಟನೆ ಮಾಡಿದ್ದರು.

ಸಮಾನತೆಯ ಪ್ರತಿಮೆ ಸ್ಥಳದ ಪ್ರವೇಶ ದರವೂ ಹೆಚ್ಚಾಗಿದೆ ಎಂಬ ಆರೋಪಗಳು ಬಂದಿವೆ. ವಯಸ್ಕರಿಗೆ 200 ಮತ್ತು ಮಕ್ಕಳಿಗೆ 125 ರೂ.ಗಳನ್ನು ಚಿನ್ನ ಜೀಯರ್ ಸ್ವಾಮಿಯ ಸಂಸ್ಥೆಯು ವಿಧಿಸುತ್ತಿದೆ.

“ಇತರ ಚಟುವಟಿಕೆಗಳು ಈ ಪ್ರದೇಶದಲ್ಲಿ ನಡೆಯುತ್ತಿದ್ದು, ಅವುಗಳನ್ನು ನಿರ್ವಹಿಸಲು ಶುಲ್ಕ ವಿಧಿಸಲಾಗಿದೆ” ಎಂದು ಸಂಸ್ಥೆ ಹೇಳಿಕೊಂಡಿದೆ. “ಒಂದಿಷ್ಟು ಪ್ರವೇಶ ಶುಲ್ಕವನ್ನು ಇರಿಸದ ಹೊರತು, ಗುಂಪನ್ನು ನಿಯಂತ್ರಿಸುವುದು ಕಷ್ಟ. ಅಂತಹ ಸ್ಥಳಗಳಿಗೆ ಸಾಮಾನ್ಯವಾಗಿ ಸಾವಿರಾರು ರೂಪಾಯಿಗಳ ಪ್ರವೇಶ ದರವಿದೆ, ಆದರೆ ನಾವು ಸ್ಥಳದ ನಿರ್ವಹಣೆಗೆ ಅಗತ್ಯವಿರುವ ಶುಲ್ಕವನ್ನು ಮಾತ್ರ ಇರಿಸಿದ್ದೇವೆ” ಎಂದು ಪ್ರತಿಕ್ರಿಯೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...