Homeಕರ್ನಾಟಕಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಕೃಷ್ಣ ಬೈರೇಗೌಡ

ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಕೃಷ್ಣ ಬೈರೇಗೌಡ

- Advertisement -
- Advertisement -

• ಜಿಲ್ಲಾಧಿಕಾರಿಗಳ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ
• ಅಕ್ರಮಗಳನ್ನು ಕಂಡು ಸರ್ಕಾರ ಸುಮ್ಮನೆ ಕೂರಲಾಗದು
• ಮಾಲೀಕತ್ವದ ಗ್ಯಾರಂಟಿಗೆ ದರ್ಖಾಸ್ತು ಪೋಡಿ ಅಭಿಯಾನ..!
• ನಗರ ವ್ಯಾಪ್ತಿಯಲ್ಲಿ ಇ-ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ-ಖಾತಾ.!

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, “ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು 59 ಸಾವಿರ ಕೋಟಿ ರೂ. ಸಾಲ ನೀಡಿವೆ. ಅಲ್ಲದೆ, ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಸಲುವಾಗಿ ಆರ್ಬಿಐ ಗೈಡ್ಲೈನ್ಸ್ ಉಲ್ಲಂಘಿಸಿ ಸಾಲ ನೀಡುತ್ತಿವೆ. ಸಾಲ ನೀಡುವಾಗ ಸಾಲ ಪಡೆದವರ ಆರ್ಥಿಕ ಸಾಮರ್ಥ್ಯವನ್ನು ಕಡೆಗಣಿಸಲಾಗುತ್ತಿರುವುದು ಅಹಿತಕರ ಪ್ರಸಂಗಗಳಿಗೆ ಕಾರಣವಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಓರ್ವ ವ್ಯಕ್ತಿಗೆ 2ಲಕ್ಷಕ್ಕಿಂತ ಹೆಚ್ಚು ಸಾಲ ನೀಡಬಾರದು ಎಂದು ಆರ್ಬಿಐ ಗೈಡ್ಲೈನ್ಸ್ ಇದೆ. ಇದನ್ನು ಯಾರೂ ಅನುಸರಿಸುತ್ತಿಲ್ಲ. ಓರ್ವ ವ್ಯಕ್ತಿಗೆ 5-6 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಈ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ. ಸಾಲ ಮರುಪಾವತಿ ಮಾಡದಿದ್ದರೆ ಮೈಕ್ರೋ ಫೈನಾನ್ಸ್ ಕಂಪೆನಿಗಳ ಅಸ್ಥಿತ್ವಕ್ಕೂ ತೊಂದರೆಯಾಗಲಿದೆ. ಹೀಗಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳು ಈ ವಾರದೊಳಗೆ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಜೊತೆಗೆ ಸಭೆ ನಡೆಸಿ ಸಾಲ ವಸೂಲಾತಿಗೆ ಆರ್ಬಿಐ ನಿಗದಿಪಡಿಸಿರುವ ಮಾದರಿ ಕಾರ್ಯಾಚರಣೆಯನ್ನು ಪಾಲನೆ ಮಾಡಲು ಹಾಗೂ ಬೇಜಾಬ್ದಾರಿಯಿಂದ ಸಾಲ ನೀಡುವುದನ್ನೂ ನಿಗ್ರಹಿಸಲು ಸೂಚಿಸಲಾಗಿದೆ ಎಂದರು.

ಮೈಕ್ರೋ ಫೈನಾನ್ಸ್ ಕಂಪೆನಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಕೇಂದ್ರ ಸರ್ಕಾರ ಯಾವುದೇ ವಿಶೇಷ ಅಧಿಕಾರ ನೀಡಿಲ್ಲ. ಆದರೆ, ರಾಜ್ಯ ಸರ್ಕಾರವೇ ತನ್ನ ಅಧಿಕಾರದ ಮಿತಿಯಲ್ಲಿ ಬೇರೆ ಬೇರೆ ಕಾನೂನುಗಳ ಮೂಲಕ ಮೈಕ್ರೋ ಫೈನಾನ್ಸ್ಗಳ ಅಕ್ರಮಗಳಿಗೆ ಕಡಿವಾಣ ಹಾಕಲಿದೆ. ಇಂತಹ ಕಂಪೆನಿಗಳ ಅವ್ಯಾಹತ ಅಕ್ರಮಗಳನ್ನು ಕಂಡು ರಾಜ್ಯ ಸರ್ಕಾರ ಸುಮ್ಮನೆ ಕೂರಲು ಸಾಧ್ಯವಿಲ್ಲ. ಇದನ್ನು ಹೀಗೆ ಬಿಟ್ರೆ ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಮಟ್ಟದ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ತಿಳಿಸಿದರು.

ನಗರ ವ್ಯಾಪ್ತಿಯಲ್ಲಿ ಇ-ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ-ಖಾತಾ.!

ಬೆಂಗಳೂರು ಹೊರತುಪಡಿಸಿ ರಾಜ್ಯದ ಬೇರೆ ಬೇರೆ ಸ್ಥಳೀಯ ಸಂಸ್ಥೆಗಳ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 55 ಲಕ್ಷ ನಿವೇಶನಗಳಿವೆ. ಈ ಪೈಕಿ 22 ಲಕ್ಷ ನಿವೇಶನ ಮಾಲೀಕರು ಇ- ಖಾತಾ ಮಾಡಿಸಿದ್ದಾರೆ. ಆದರೆ, 30 ರಿಂದ 32 ಲಕ್ಷ ನಿವೇಶನ ಆಸ್ತಿಗಳಿಗೆ ಯಾವುದೇ ರೀತಿಯಾದ ಇ-ದಾಖಲೆ ಇರುವುದಿಲ್ಲ. ಈ ಎಲ್ಲರಿಗೂ ಒನ್ಟೈಮ್ ಮಾದರಿಯಲ್ಲಿ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸಿಎಂ ಸಿದ್ದರಾಮಯ್ಯನವರು ಜನವರಿ.7 ರಂದು ಸಭೆ ನಡೆಸಿ ಫೆ.10 ರಿಂದ ದಾಖಲೆ ಇಲ್ಲದ ನಿವೇಶನಗಳ ಮಾಲೀಕರಿಗೆ ಒಮ್ಮೆ ಇ-ಆಸ್ತಿ ನಮೂದಿಸಿ ಬಿ-ಖಾತಾ ಸಮಾನಾಂತರ ದಾಖಲೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಹೀಗಾಗಿ ಇಂದು ಜಿಲ್ಲಾಧಿಕಾರಿಗಳ ಸಭೆ ನಡೆಸಿ ಸರ್ಕಾರ ಮುಖ್ಯ ಕಾರ್ಯದರ್ಶಿಗಳ ಸಮ್ಮುಖದಲ್ಲಿ ಫೆ.10ರೊಳಗೆ ಸುತ್ತೋಲೆ ಹೊರಡಿಸಿ ಗರಿಷ್ಠ ಮೂರು ತಿಂಗಳ ಒಳಗೆ ಅಭಿಯಾನ ಮಾದರಿಯಲ್ಲಿ ಬಾಕಿ ಇರುವ ಎಲ್ಲಾ ಆಸ್ತಿಗಳಿಗೆ ಬಿ-ಖಾತಾ ಮಾಡಿಕೊಡಬೇಕು ಎಂದು ಸೂಚಿಸಲಾಗಿದೆ ಎಂದರು.

ಅನದೀಕೃತ ನಿವೇಶನಗಳ ಬಗ್ಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಇದೀಗ ನಾವು ಅದನ್ನು ಪಾಲಿಸಲೇಕಾದ ತುರ್ತು ಎದುರಾಗಿದೆ. ಹೀಗಾಗಿ ಎಷ್ಟು ನಿವೇಶನ ಇವೆ ಎಂದು ಗುರುತಿಸಿ ಸರ್ಕಾರವೇ ಬಿ-ಖಾತಾ ಮಾಡಿಕೊಡಲಿದೆ. ಇದಾದ ಮೇಲೆ ರಾಜ್ಯದಲ್ಲಿ ಬಿ-ಖಾತಾ ಇರುವುದಿಲ್ಲ. ಎ-ಖಾತಾ ಮಾತ್ರ ಇರಲಿದ್ದು, ಮುಂದಿನ ದಿನಗಳಲ್ಲಿಅನದೀಕೃತ ನಿವೇಶನಗಳಿಗೆ ಅವಕಾಶವೇ ಇಲ್ಲ. ನಗರ ವ್ಯಾಪ್ತಿಯಲ್ಲಿ ಈ ಅಭಿಯಾನ ಮುಗಿಯುತ್ತಿದ್ದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಇದೇ ಮಾದರಿಯನ್ನು ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.

ತಹಶೀಲ್ದಾರ್-ಎಸಿ ಕೋರ್ಟ್ ಕೇಸ್ ಮುಗಿಸಲು 6 ತಿಂಗಳ ಗಡುವು..!

ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಇರುವ ಎಲ್ಲಾ ಪ್ರಕರಣಗಳ ಇತ್ಯರ್ಥಕ್ಕೆ ಆರು ತಿಂಗಳ ಗಡುವು ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ತಕರಾರು ಪ್ರಕರಣಗಳನ್ನು ತಹಶೀಲ್ದಾರ್ ನ್ಯಾಯಾಲಯಗಳು 90 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಎಂಬ ನಿಯಮವಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅವಧಿ ಮೀರಿದ 10,774 ಪ್ರಕರಣಗಳಿದ್ದವು. ಪ್ರಸ್ತುತ ಈ ಸಂಖ್ಯೆಯನ್ನು 369ಕ್ಕೆ ಇಳಿಸಲಾಗಿದೆ. ಈ ಹಿಂದೆ ಪ್ರತಿ ಪ್ರಕರಣಗಳ ಇತ್ಯರ್ಥಕ್ಕೆ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಸರಾಸರಿ 7 ತಿಂಗಳಿಗಿಂತ ಹೆಚ್ಚು ಸಮಯ ವ್ಯಯವಾಗುತ್ತಿತ್ತು. ಆದರೆ, ಪ್ರಸ್ತುತ 67 ದಿನಕ್ಕೆ ಪ್ರಕರಣಗಳನ್ನು ವಿಲೇ ಮಾಡಲಾಗುತ್ತಿದೆ ಎಂದರು.

ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ 62,857 ಪ್ರಕರಣಗಳು ಬಾಕಿ ಇದ್ದವು. ಆದರೆ, ಇದೀಗ ಆ ಸಂಖ್ಯೆಯನ್ನು 26,726ಕ್ಕೆ ಇಳಿಸಲಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ 36,131 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ನಾವು ಅಧಿಕಾರ ಸ್ವೀಕರಿಸುವಾಗ ಐದು ವರ್ಷಕ್ಕೆ ಮೇಲ್ಪಟ್ಟ 32777 ಪ್ರಕರಣಗಳಿದ್ದವು, ಈ ಸಂಖ್ಯೆಯನ್ನು 6,602ಕ್ಕೆ ಇಳಿಸಲಾಗಿದೆ. ಮುಂದಿನ ಆರು ತಿಂಗಳಲ್ಲಿ ಉಳಿದ ಪ್ರಕರಣಗಳನ್ನೂ ಇತ್ಯರ್ಥಪಡಿಸಲು ಸೂಚಿಸಲಾಗಿದೆ. ಇದರಿಂದ ಜನರು ಅನಗತ್ಯವಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ ಎಂದು ತಿಳಿಸಿದರು.

ಮಾಲೀಕತ್ವದ ಗ್ಯಾರಂಟಿಗೆ ದರ್ಖಾಸ್ತು ಪೋಡಿ ಅಭಿಯಾನ..!

ದಶಕಗಳ ಹಿಂದೆ ಜಮೀನು ಮಂಜೂರು ಆಗಿದ್ದರೂ ಸಹ ಸರಿಯಾದ ದಾಖಲೆ ಇಲ್ಲದವರಿಗೆ ಜಮೀನಿನ ಮಾಲೀಕತ್ವದ ಗ್ಯಾರಂಟಿ ನೀಡುವ ಸಲುವಾಗಿ ದರ್ಖಾಸ್ತು ಪೋಡಿ ಕಾರ್ಯಕ್ರಮವನ್ನು ಅಭಿಯಾನ ಮಾದರಿಯಲ್ಲಿ ಜಾರಿಗೊಳಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಡಿಸೆಂಬರ್ ಮೊದಲ ವಾರದಿಂದಲೇ ದರ್ಖಾಸ್ತು ಪೋಡಿ ಅಭಿಯಾನ ಶುರುವಾಗಿದ್ದು, 26ಸಾವಿರ ಮಂಜೂರಿದಾರರ ಜಮೀನುಗಳನ್ನು ಸರ್ವೇಗೆ ಅಂಕಿತ ಹಾಕಲಾಗಿದೆ. ಈ ಪೈಕಿ 5 ಸಾವಿರ ಜನರಿಗೆ ಈಗಾಗಲೇ ಸರ್ವೇ ಮುಗಿಸಿದ್ದೇವೆ. ಈ ಎಲ್ಲರಿಗೂ ಹೊಸ ಆರ್ಟಿಸಿ, ಪಹಣಿ ಹಾಗೂ ನಕ್ಷೆ ನೀಡಲಾಗುವುದು. ಇದು ಜಮೀನಿನ ಮಾಲೀಕತ್ವದ ಗ್ಯಾರಂಟಿಯಾಗಿದ್ದು, ಈ ಅಭಿಯಾನಕ್ಕೆ “ನನ್ನ ಭೂಮಿ” ಎಂದು ಹೆಸರಿಡಲಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ಮೂರು ವರ್ಷದಲ್ಲಿ 5 ಸಾವಿರ ಜನರಿಗೆ ಪೋಡಿ ಮಾಡಿಕೊಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರದ ಕಳೆದ ಎರಡು ತಿಂಗಳಲ್ಲಿ 5 ಸಾವಿರ ಜನರಿಗೆ ಪೋಡಿ ದುರಸ್ಥಿ ಮಾಡಲಾಗಿದೆ. ನಮ್ಮ ಗುರಿ ದೊಡ್ಡದಿದೆ. ಕನಿಷ್ಟ 5 ರಿಂದ 7 ಲಕ್ಷ ಕುಟುಂಬಗಳಿಗೆ ಪೋಡಿ ದುರಸ್ಥಿಗೊಳಿಸಬೇಕು ಎಂಬುದು ನಮ್ಮ ಗುರಿಯಾಗಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಅಭಿಯಾನ ಮಾದರಿಯಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಆಧಾರ್ ಸೀಡಿಂಗ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ರಾಜ್ಯದಲ್ಲಿ 2.12 ಕೋಟಿ ಜಮೀನುಗಳನ್ನು ಆರ್ಟಿಸಿ ಜೊತೆಗೆ ಆಧಾರ್ ಜೋಡಿಸಲಾಗಿದೆ. ಇದನ್ನೆಲ್ಲಾ ಮಾಡಿದ್ದು ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರು. ಇವರು ಫೀಲ್ಡ್ಗೆ ಹೋಗಿ ಈ ಕೆಲಸ ಮಾಡದಿದ್ದರೆ ಆಧಾರ್ ಸೀಡಿಂಗ್ ಸಾಧ್ಯವೇ ಇರುತ್ತಿರಲಿಲ್ಲ. ಹಲವರು ತಮ್ಮ ಕೈಯಿಂದ ಖರ್ಚು ಮಾಡಿ ಆಧಾರ್ ಸೀಡಿಂಗ್ ಮಾಡಿದ್ದಾರೆ. ಹೀಗಾಗಿ ಗ್ರಾಮ ಸಹಾಯಕರು ಹಾಗೂ ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೊತ್ಸಾಹ ಧನ ನೀಡಬೇಕು ಎಂದು ತೀರ್ಮಾನಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಹಾಗೂ ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಉಪಸ್ಥಿತರಿದ್ದರು.

ಮುಡಾ ವಿವಾದ: ಹೈಕೋರ್ಟ್‌ ಧಾರವಾಡ ಪೀಠಕ್ಕೆ ತನಿಖಾ ವರದಿ ಸಲ್ಲಿಸಿದ ಲೋಕಾಯುಕ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...