Homeಮುಖಪುಟಚಿತ್ರ ನಟ ಕಲಾತಪಸ್ವಿ ರಾಜೇಶ್ ನಿಧನ: ಗಣ್ಯರ ಸಂತಾಪ

ಚಿತ್ರ ನಟ ಕಲಾತಪಸ್ವಿ ರಾಜೇಶ್ ನಿಧನ: ಗಣ್ಯರ ಸಂತಾಪ

- Advertisement -
- Advertisement -

ಹಿರಿಯ ಚಿತ್ರನಟ, ಕಲಾತಪಸ್ವಿ ಎಂದೇ ಖ್ಯಾತರಾದ ರಾಜೇಶ್‌ರವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮೂಲತಃ ಬೆಂಗಳೂರಿನವರಾದ ರಾಜೇಶ್‌ರವರು ರಂಗಭೂಮಿ ಕಲಾವಿದರು. ನಾಟಕ ಮಂಡಳಿಯೊಂದನ್ನು ರಚಿಸಿ ಹಲವಾರು ನಾಟಕಗಳನ್ನು ಪ್ರದರ್ಶಿಸಿದ್ದಾರೆ. ನಂತರ ಸಿನಿಮಾ ರಂಗಕ್ಕೆ ಕಾಲಿಟ್ಟು ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಬೃಂದಾವನ, ಕಪ್ಪುಬಿಳುಪು, ಎರಡು ಮುಖ, ದೇವರ ಮನೆ, ತವರು ಮನೆ ಅವರು ನಟಿಸಿದ ಪ್ರಮುಖ ಚಿತ್ರಗಳು.

ರಾಜೇಶ್‌ರವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು, ಸಿನಿಮಾ ಕ್ಷೇತ್ರದ ದಿಗ್ಗಜರು ಸಂತಾಪ ಸೂಚಿಸಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟರಾದ ಶ್ರೀ ರಾಜೇಶ್ ಅವರು ನಿಧನರಾದ ವಿಷಯ ತುಂಬಾ ನೋವುಂಟುಮಾಡಿದೆ. ಅಗಲಿದ ಹಿರಿಯ ಕಲಾ ಚೇತನದ ಆತ್ಮಕ್ಕೆ ಶಾಂತಿ ನೀಡಿ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿದ್ದಾರೆ.

ಕನ್ನಡದ ಹಿರಿಯ ನಟ ರಾಜೇಶ್ ಸಾವು ಅನಿರೀಕ್ಷಿತ ಅಷ್ಟೇ ಆಘಾತಕಾರಿ. ದೀರ್ಘಕಾಲದಿಂದ ನನ್ನ ಸ್ನೇಹಿತರಾಗಿದ್ದ ರಾಜೇಶ್ ಹುಟ್ಟು ಪ್ರತಿಭೆ ಮತ್ತು ಸ್ವಂತ ಪರಿಶ್ರಮದಿಂದ ಬೆಳೆದು ನಮ್ಮನ್ನೆಲ್ಲ ರಂಜಿಸಿದವರು. ಅವರ ಕುಟುಂಬದ ಸದಸ್ಯರಷ್ಟೇ ನಾನು ದುಃಖಿತನಾಗಿದ್ದೇನೆ. ಅಗಲಿದ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದಾರೆ.

ಅಗಲಿದ ರಾಜೇಶ್‌ರವರ ಪಾರ್ಥೀವ ಶರೀರರವರನ್ನು ಸಂಜೆ 6.30ರವರೆಗೆ ಅವರ ವಿದ್ಯರಣ್ಯಪುರದ ನಿವಾಸದಲ್ಲಿ ಇಟ್ಟು, ನಂತರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.


ಇದನ್ನೂ ಓದಿ :ಮಕ್ಕಳ ಹಕ್ಕುಗಳ ಉಲ್ಲಂಘನೆ: ತಪ್ಪೊಪ್ಪಿಗೆ ಬರೆದುಕೊಟ್ಟ ಶಿವಮೊಗ್ಗ ಪತ್ರಕರ್ತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...