Homeಮುಖಪುಟಸದನದ ಕಲಾಪ ಚಿತ್ರೀಕರಣ; ಕಾಂಗ್ರೆಸ್‌ ಸಂಸದೆ ರಜನಿ ಪಾಟೀಲ್ ಅಮಾನತು

ಸದನದ ಕಲಾಪ ಚಿತ್ರೀಕರಣ; ಕಾಂಗ್ರೆಸ್‌ ಸಂಸದೆ ರಜನಿ ಪಾಟೀಲ್ ಅಮಾನತು

- Advertisement -
- Advertisement -

ಸದನದ ಕಲಾಪಗಳನ್ನು ಚಿತ್ರೀಕರಿಸಿದ ಆರೋಪದ ಮೇಲೆ ಕಾಂಗ್ರೆಸ್ ಸಂಸದೆ ರಜನಿ ಪಾಟೀಲ್ ಅವರನ್ನು, ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳದಂತೆ ಶುಕ್ರವಾರ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ರಜನಿ ಅವರನ್ನು ಅಮಾನತುಗೊಳಿಸುವಂತೆ ಕೋರಿ ಸಭಾನಾಯಕ ಹಾಗೂ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಮನವಿ ಸಲ್ಲಿಸಿದರು. “ನಿನ್ನೆ ದುರದೃಷ್ಟಕರ ಘಟನೆಯೊಂದು ನಡೆದಿದೆ. ಸಂಸತ್ತಿನ ಹಿರಿಯ ಸದಸ್ಯರನ್ನು ಕಳಪೆಯಾಗಿ ತೋರಿಸುವಂತೆ ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಸದನದಲ್ಲಿ ರೆಕಾರ್ಡ್ ಮಾಡಿದ ವೀಡಿಯೊವನ್ನು ನಾವು ಸಾಮಾಜಿಕ ಮಾಧ್ಯಮದಲ್ಲಿ ನೋಡುತ್ತಿದ್ದೇವೆ” ಎಂದು ಹೇಳಿದರು.

ಗುರುವಾರ ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಪ್ರತ್ಯುತ್ತರ ನೀಡುತ್ತಿದ್ದಾಗ ಉಂಟಾದ ಗದ್ದಲದ ವಿಡಿಯೋವನ್ನು ರಜನಿ ಪೋಸ್ಟ್ ಮಾಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಅದಾನಿ ಗ್ರೂಪಿನ ಹಗರಣವನ್ನು ತನಿಖೆ ಮಾಡುವಂತೆ ಆಗ್ರಹಿಸಿ ವಿರೋಧ ಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಆದರೆ ಸದನದ ಕಲಾಪಗಳ ದೃಶ್ಯಗಳನ್ನು ಒದಗಿಸುವ ಏಕೈಕ ಮಾಧ್ಯಮವಾಗಿರುವ ರಾಜ್ಯಸಭಾ ಟಿವಿಯು ಪ್ರತಿಪಕ್ಷಗಳ ಪ್ರತಿಭಟನೆಯ ಕೆಲವು ದೃಶ್ಯಗಳನ್ನು ಮಾತ್ರ ತೋರಿಸಿದೆ. ಮೋದಿಯವರನ್ನು ಹೆಚ್ಚು ಕೇಂದ್ರೀಕರಿಸಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಸದನದ ಕಲಾಪಗಳನ್ನು ವರದಿ ಮಾಡುವಲ್ಲಿ ರಾಜ್ಯಸಭಾ ಟಿವಿ ಪಕ್ಷಪಾತಿಯಾಗಿದೆ ಎಂದು ಪ್ರತಿಪಕ್ಷಗಳ ಸಂಸದರು ರಜನಿ ಅವರನ್ನು ಶುಕ್ರವಾರ ಸಮರ್ಥಿಸಿಕೊಂಡರು. ಆದಾಗ್ಯೂ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್‌ ಅವರು ಪಟ್ಟು ಬದಲಿಸದೆ, “ಈ ಅಹಿತಕರ ಚಟುವಟಿಕೆಯಲ್ಲಿ ತೊಡಗಿದ್ದಾರೆ” ಎಂದು ಆರೋಪಿಸಿ ರಜನಿ ಅವರನ್ನು ಅಮಾನತುಗೊಳಿಸಿದ್ದಾರೆ.

ರಾಜ್ಯಸಭೆಯ ವಿಶೇಷಾಧಿಕಾರ ಸಮಿತಿಯು ಈ ವಿಷಯವನ್ನು ಪರಿಶೀಲಿಸುತ್ತದೆ ಎಂದು ಧನಕರ್‌ ಅವರು ಸದನಕ್ಕೆ ತಿಳಿಸಿದ್ದಾರೆ.

“ಟ್ರಜರಿ ಪೀಠದ ಒತ್ತಡದ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ” ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು.

“ಮೊದಲು ವಿಚಾರಣೆ ನಡೆಯಬೇಕು. ಸದಸ್ಯರು ತಪ್ಪಿತಸ್ಥರಾಗಿದ್ದರೆ, ನೀವು ಎಚ್ಚರಿಸಬಹುದು, ಇದು ಮೊದಲ ಬಾರಿಗೆ ಆಗಿದೆ. ನೀವು ಕ್ಷಮಿಸಬಹುದು, ನೀವು ಎಚ್ಚರಿಕೆ ನೀಡಬಹುದು. ಆದ್ದರಿಂದ, ಈ ವಿಷಯವನ್ನು ಮತ್ತಷ್ಟು ಮುಂದುವರಿಸಬೇಡಿ ಎಂದು ನಾನು ನಿಮ್ಮಲ್ಲಿ ಕೋರಿತ್ತೇನೆ” ಎಂದು ಮನವಿ ಮಾಡಿದರು.

ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಮಾತನಾಡಿ, “ಇದೇ ರೀತಿಯ ಘಟನೆಗಳು ಹಲವಾರು ಬಾರಿ ಸಂಭವಿಸಿವೆ” ಎಂದರು. “ಪರ್ವತಗಳೇನೂ ಕೆಳಗುದುರಿ ಬೀಳುವುದಿಲ್ಲ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಡಿ ಎಂದು ನಾನು ನಿಮ್ಮನ್ನು ಪ್ರಾರ್ಥಿಸುತ್ತೇನೆ” ಎಂದರು.

ಆಮ್‌ ಆದ್ಮಿ ಪಕ್ಷದ ಸಂಸದರಾಗಿದ್ದ ಭಗವಂತ್ ಮಾನ್ ಅವರು ಸಾಮಾಜಿಕ ಮಾಧ್ಯಮದ ಮೂಲಕ ಸಂಸತ್ತಿನ ನೇರ ಪ್ರಸಾರವನ್ನು ಮಾಡಿದ್ದಾಗ 2016ರಲ್ಲಿ ಕ್ರಮ ಕೈಗೊಳ್ಳಲಾಗಿತ್ತು. ಆ ಕ್ರಮಗಳನ್ವಯ ರಜನಿ ಅವರನ್ನೂ ಅಮಾನತುಗೊಳಿಸಲಾಗಿದೆ ಎಂದು ಧನಕರ್‌ ಸಮರ್ಥಿಸಿಕೊಂಡರು.

ಭಾರತೀಯ ಜನತಾ ಪಕ್ಷದ ಮಾಜಿ ಸಂಸದ ಕಿರಿತ್ ಸೋಮಯ್ಯ ಮತ್ತು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಅವರನ್ನೊಳಗೊಂಡ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಮಾನ್ ಅವರನ್ನು ಇಡೀ ಅಧಿವೇಶನದಿಂದ ಹೊರಗಿಡಲಾಗಿತ್ತು. (ಮಾನ್ ಈಗ ಪಂಜಾಬ್ ಮುಖ್ಯಮಂತ್ರಿಯಾಗಿದ್ದಾರೆ.)

ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿರುವ ರಜನಿ ಪಾಟೀಲ್, “ಯಾವ ತಪ್ಪಿಗಾಗಿ ಈ ಶಿಕ್ಷೆ ನೀಡಲಾಗಿದೆ? ನನ್ನನ್ನು ಅಮಾನತು ಮಾಡಿರುವುದು ಪ್ರಾಯೋಜಿತ ಕಾರ್ಯಕ್ರಮದ ಭಾಗವಾಗಿದೆ. ವಿರೋಧ ಪಕ್ಷದ ಸಂಸದರು ಹಲವಾರು ಬಾರಿ ಘೋಷಣೆಗಳನ್ನು ಕೂಗುತ್ತಾ ಮೋದಿಯವರ ಭಾಷಣವನ್ನು ವಿರೋಧಿಸಿದ್ದರಿಂದ ಅಮಾನತು ಮಾಡಿದ್ದಾರೆ” ಎಂದು ದೂರಿದ್ದಾರೆ.

“ಚರ್ಚೆ ನಡೆಯುತ್ತಿರುವ ರೀತಿ, ಯಾರೋ ತಿಳಿಯದೆ ತಪ್ಪು ಮಾಡಿದ್ದಾರೆ ಎಂದು ನನಗನಿಸಿತ್ತು. ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಿಂದ ಬಂದವರಿಗೆ, ಇಲ್ಲಿ ಇರಲು ಯಾವುದೇ ಹಕ್ಕು ಇಲ್ಲವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...