Homeಕರ್ನಾಟಕದೇವನಹಳ್ಳಿ| ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ; ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ

ದೇವನಹಳ್ಳಿ| ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ; ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ

- Advertisement -
- Advertisement -

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು (ಕೆಐಎಡಿಬಿ) ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿರುವ ಭೂಮಿಗೆ ಅಂತಿಮ ಅಧಿಸೂಚನೆ ಹೊರಡಿಸಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ತಮ್ಮ ಭೂಮಿ ಉಳಿಸಿಕೊಳ್ಳುವ ಸಲುವಾಗಿ ಕಳೆದ 1118 ದಿನಗಳಿಂದ ಚನ್ನರಾಯಪಟ್ಟಣ ನಾಡ ಕಚೇರಿ ಮುಂಭಾಗ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರು, ಸ್ವಾಧೀನ ಕೈಬಿಡುವಂತೆ ಹಿಂದಿನ ಬಿಜೆಪಿ ಸರ್ಕಾರ ಹಾಗೂ ಈಗಿನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳು ಹಾಗೂ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಚನ್ನರಾಯಪಟ್ಟಣ, ದೇವನಹಳ್ಳಿ ಪಟ್ಟಣ, ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಫ್ರೀಂಡಂ ಪಾರ್ಕಿನಲ್ಲಿ ಹಲವು ರೀತಿಯ ಹೋರಾಟ ಮಾಡಿದ್ದರೂ, ಅಧಿಕಾರಿಗಳು ಹಾಗೂ ಸರ್ಕಾರದ ಮನಸ್ಸು ಮಾತ್ರ ಕರಗಿಲ್ಲ.

ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಭೂಸ್ವಾಧೀನ ಕೈಬಿಡುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮಾತು ತಪ್ಪಿದ್ದಾರೆ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ. ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಜೊತೆಗೆ ನೇರವಾಗಿ ಎರಡು ಸಭೆಗಳಾಗಿದ್ದು, ರೈತರ ನಾಯಕ ರಾಕೇಶ್ ಟಿಕಾಯತ್ ಸೇರಿದಂತೆ ಹಲವು ನಾಯಕರ ಜೊತೆಗೆ ಹಲವಾರು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಆದರೆ, ಇದ್ಯಾವುದಕ್ಕೂ ಸ್ಪಂಧಿಸದ ಸರ್ಕಾರ ದಿ.16-0402025 ರಂದು ಮೂರು ಹಳ್ಳಿಗಳನ್ನು ಕೈಬಿಟ್ಟು (ಚನ್ನರಾಯಪಟ್ಟಣ, ಮಟ್ಟಬಾರ್ಲು, ತೆಲ್ಲೋಹಳ್ಳಿ) ಅಂತಿಮ ಅಧಿಸೂಚನೆ ಹೊರಡಿಸಿದೆ.

“ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ದೇವನಹಳ್ಳಿ ಶಾಸಕರಾದ ಕೆಎಚ್ ಮುನಿಯಪ್ಪ ಈ ವಿಚಾರದಲ್ಲಿ ಅಸಹಾಯಕರಾಗಿದ್ದಾರೆ. ಕೈಗಾರಿಕಾ ಸಚಿವರಾದ ಎಂಬಿ ಪಾಟೀಲ್ ನಮ್ಮ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಪಟ್ಟು ಹಿಡಿದಿದ್ದಾರೆ. ಹಿಂದಿನ ಸಚಿವರಾದ ಮುರುಗೇಶ್ ನಿರಾಣಿ ಕೂಡ ಇದೇ ರೀತಿ ವರ್ತಿಇಸಿದ್ದರು. ರೈತರ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರವು ಬಿಜೆಪಿ ಸರ್ಕಾರಕ್ಕಿಂತ ಭಿನ್ನವಾಗೇನೂ ಇಲ್ಲ” ಎಂದು ಚನ್ನರಾಯಪಟ್ಟಣ ರೈತರು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯ ಸರ್ಕಾರದ ಹೇಡಿತನದ ಕೃತ್ಯ: ಕೆಪಿಆರ್‌ಎಸ್‌ ಕಟು ಟೀಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಬಲವಂತ ಹಾಗೂ ಅನ್ಯಾಯದ ಕೆಐಎಡಿಬಿ ಭೂ ಸ್ವಾಧೀನಕ್ಕೆ ರೈತರ ಪ್ರಬಲ ವಿರೋಧ ಧಿಕ್ಕರಿಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರಾಜ್ಯ ಸರ್ಕಾರದ ಹೇಡಿತನದ ಕೃತ್ಯ ಎಂದು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌) ಕರ್ನಾಟಕ ರಾಜ್ಯ ಸಮಿತಿ ಕಟುವಾಗಿ ಟೀಕಿಸಿದೆ.

ಕಳೆದ 1118 ದಿನಗಳಿಂದ; ಅಂದರೆ, ಸುಮಾರು ನಾಲ್ಕು ವರ್ಷಗಳಿಂದ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ರೈತರು ನಾಡ ಕಚೇರಿ ಮುಂದೆ ಅನಿರ್ದಿಷ್ಟ ಪ್ರತಿಭಟನೆ ನಡೆಸುತ್ತಿದ್ದಾರೆ . ಶೇಕಡಾ 80 ರಷ್ಟು ರೈತರು ಲಿಖಿತವಾಗಿ ಭೂ ಸ್ವಾಧೀನಕ್ಕೆ ತಮ್ಮ ಅಸಮ್ಮತಿ ಹಾಗೂ ವಿರೋಧವನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿದ್ದರೂ ,
ಬಲವಂತದ ಭೂ ಸ್ವಾಧೀನಕ್ಕೆ ಕ್ರಮವಹಿಸಿರುವುದು, ಭೂ ಸ್ವಾಧೀನ ಕಾಯ್ದೆ – 2013 ರ ಸ್ಪಷ್ಠ ಉಲ್ಲಂಘನೆಯಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಕರ್ನಾಟಕ ರಾಜ್ಯ ಸಮಿತಿ ಖಂಡಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಕೆಪಿಆರ್‌ಎಸ್‌, “ಈ ರೈತರು ವಿವಿಧೆಡೆ ನಡೆಸಿದ ಪ್ರತಿಭಟನಾ ಧರಣಿ ಸ್ಥಳಗಳಿಗೆ ಈಗಿನ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕರಾಗಿ ಭೇಟಿ ಕೊಟ್ಟು ತಾನೂ ಅಧಿಕಾರಕ್ಕೆ ಬಂದರೆ ಅನ್ಯಾಯ ಹಾಗೂ ಬಲವಂತದ ಭೂ ಸ್ವಾಧೀನ ವನ್ನು ರದ್ದುಪಡಿಸುವುದಾಗಿ ಸಾರ್ವಜನಿಕ ಘೋಷಣೆ ಮಾಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ, ಈಗ ಉಸ್ತುವಾರಿ ಸಚಿವರಾಗಿರುವ ಕೆಎಚ್ ಮುನಿಯಪ್ಪ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಬಲವಂತವಾಗಿ ಭೂ ಸ್ವಾಧೀನಕ್ಕೆ ಅವಕಾಶ ನೀಡುವುದಿಲ್ಲ ಎಂದು ಈ ರೈತರ ಮತ ಕೇಳಿದ್ದರು. ಆದರೆ ಈ ಇಬ್ಬರೂ ಅಧಿಕಾರಕ್ಕೆ ಬಂದು ಎರಡುವರೆ ವರ್ಷಗಳಾದರೂ ತಮ್ಮ ವಚನಕ್ಕೆ ವಿರುದ್ದವಾಗಿ ವರ್ತಿಸಿ ವಚನಭ್ರಷ್ಟರು ಎಂದು ಸಾಬೀತು ಮಾಡಿಕೊಂಡಿದ್ದಾರೆ. ಇದು ಸಾರ್ವಜನಿಕ ಹುದ್ದೆಗೆ ಮತ್ತು ನಡವಳಿಕೆಗೆ ಯೋಗ್ಯವಲ್ಲದ್ದು” ಆಕ್ರೋಶ ಹೊರಹಾಕಿದೆ.

“ಇತ್ತೀಚಿಗಿನ ಸಭೆಯೂ ಸೇರಿದಂತೆ ಕಳೆದ ನಾಲ್ಕು ವರ್ಷಗಳಲ್ಲಿ ರೈತರ ಪ್ರತಿಭಟನಾ ಒತ್ತಡ ಹೆಚ್ಚಿದ ಸಂದರ್ಭದಲ್ಲೆಲ್ಲಾ ಮುಖ್ಯಮಂತ್ರಿ ನೇತೃತ್ವದಲ್ಲಿ ನಾಲ್ಕಾರು ಸಭೆಗಳು, ಉಸ್ತುವಾರಿ ಮಂತ್ರಿ ನೇತೃತ್ವದಲ್ಲಿ ಹತ್ತಾರು ಸಭೆಗಳು ಅಲ್ಲದೇ ಸ್ವತಃ ಉಸ್ತುವಾರಿ ಮಂತ್ರಿ ಹತ್ತಾರು ಬಾರಿ ಧರಣಿ ಸ್ಥಳಕ್ಕೆ ಭೇಟಿ ಕೊಟ್ಟು ರೈತರ ಪರವಾಗಿ ತೀರ್ಮಾನ ಮಾಡುವುದಾಗಿ ಹೇಳಿ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ರೈತರ ಒಪ್ಪಿಗೆ ಇಲ್ಲದೇ ಭೂಸ್ವಾಧೀನ ಮುಂದುವರೆಸುವುದಿಲ್ಲ ಎಂದು ಸಾರ್ವಜನಿಕವಾಗಿ ಹಲವಾರು ಬಾರಿ ಸ್ಪಷ್ಟ ಪಡಿಸಿದ್ದಾರೆ. ಈ ರೀತಿ ಭರವಸೆ ನೀಡಿ ಒಳಗೊಳಗೆ ಭೂ ಸ್ವಾಧೀನದ ಪ್ರಕ್ರಿಯೆ ಮುಂದುವರೆಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರೈತರಲ್ಲಿ ಹತಾಶೆ -ನಿರಾಶೆ ಉಂಟು ಮಾಡಿ ಒಡಕು ಉಂಟು ಮಾಡುವ ಹೀನ ಕುತಂತ್ರವಲ್ಲದೇ ಬೇರೇನೂ ಅಲ್ಲ” ಎಂದು ಹೇಳಿದೆ.

“ಸಾರ್ವಜನಿಕವಾಗಿ ಒಂದು ಮುಖ ತೋರಿ, ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಇನ್ನೊಂದು ರೀತಿಯಲ್ಲಿ ಆದೇಶ ನೀಡಿ ರೈತ ಸಮುದಾಯವನ್ನು ಹಾಗೂ ರೈತ ಹೋರಾಟವನ್ನು ಸಿದ್ದರಾಮಯ್ಯ ರವರ ನೇತೃತ್ವದ ರಾಜ್ಯ ಸರ್ಕಾರ ಅಪಮಾನಿಸಿದೆ. ಚನ್ನರಾಯಪಟ್ಟಣ ಹೋಬಳಿ ರೈತರ ಧರಣಿ ಸ್ಥಳಕ್ಕೆ ಈ ನಾಲ್ಕು ವರ್ಷಗಳಲ್ಲಿ ಅಖಿಲ ಭಾರತ ಕಿಸಾನ್ ಸಭಾ ಅಧ್ಯಕ್ಷರು, ಸಿಪಿಐಎಂ ಪಾಲಿಟ್ ಬ್ಯೂರೋ ಸದಸ್ಯರು, ಸಂಯುಕ್ತ ಕಿಸಾನ್ ಮೋರ್ಚಾ ನಾಯಕರೂ ಆಗಿರುವ ಡಾ.ಅಶೋಕ್ ಧವಳೆ, ಅಖಿಲ ಭಾರತ ಕಿಸಾನ್ ಸಭಾದ ಅಖಿಲ ಭಾರತ ಹಣಕಾಸು ಕಾರ್ಯದರ್ಶಿ ಮಾಜಿ ಶಾಸಕ ಕೃಷ್ಣಪ್ರಸಾದ್ ,ಭಾರತೀಯ ಕಿಸಾನ್ ಯೂನಿಯನ್ ನ ರಾಕೇಶ್ ಟಿಕಾಯತ್ ಸೇರಿದಂತೆ ರಾಷ್ಟ್ರೀಯ ರೈತ ನೇತಾರರು ಭೇಟಿ ಕೊಟ್ಟು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಡೀ ರಾಜ್ಯದ ಎಲ್ಲಾ ರೈತ ಚಳವಳಿಗಳ ಹಾಗೂ ಬುದ್ಧಿಜೀವಿ, ಸಾಹಿತಿಗಳ ಬೆಂಬಲ ಮತ್ತು ಅನುಕಂಪ ಈ ಭೂ ಸ್ವಾಧೀನ ವಿರೋಧಿ ರೈತರ ಮೇಲೆ ಇದೆ. ಮೇಲಾಗಿ ತಮ್ಮ ತೀವ್ರ ಅನಾರೋಗ್ಯದ ನಡುವೆಯೂ ಈ ರೈತರ ಹೋರಾಟಕ್ಕೆ ನೇತೃತ್ವ ನೀಡುತ್ತಿದ್ದ ಜಿಸಿ ಬಯ್ಯಾರೆಡ್ಡಿರವರು ಈ ಹೋರಾಟದ ಬೇಡಿಕೆಯನ್ನು ಪುನರುಚ್ಚರಿಸುತ್ತಾ ಮರಣವನ್ನಪ್ಪಿದ್ದಾರೆ” ಎಂದು ವಿವರಿಸಿದೆ.

“ಇಷ್ಟೆಲ್ಲಾ ಇದ್ದರೂ, ಬಹುರಾಷ್ಟ್ರೀಯ ಸಂಸ್ಥೆಗಳು, ರಿಯಲ್ ಎಸ್ಟೇಟ್ ಮಾಫಿಯಾಗಳ ಒತ್ತಡಕ್ಕೆ ಮಣಿದಿರುವ
ರಾಜ್ಯ ಸರ್ಕಾರ ಬಲವಂತದ ಹಾಗೂ ಅನ್ಯಾಯದ ಭೂ ಸ್ವಾಧೀನ ಮಾಡೇ ತೀರುವ ಹಠ ಸರ್ವಾಧಿಕಾರಿ ಮನೋಭಾವದ್ದು. ಇಂತಹ ಭೂಸ್ವಾಧೀನ ವಿರೋಧಿ ಹೋರಾಟವನ್ನು ರಾಜ್ಯಾದ್ಯಂತ ಸಂಪೂರ್ಣ ಮಟ್ಟ ಹಾಕುವ ಫ್ಯಾಸಿಸ್ಟ್ ದುರುದ್ದೇಶದ್ದು. ಈ ದುರುದ್ದೇಶ ಈಡೇರುವುದಕ್ಕೆ ರಾಜ್ಯದ ರೈತ ಸಮುದಾಯ ಅವಕಾಶ ನೀಡುವುದಿಲ್ಲ. ಚನ್ನರಾಯಪಟ್ಟಣ ರೈತರ ಹೋರಾಟಕ್ಕೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯದ ಎಲ್ಲಾ ಭೂ ಸ್ವಾಧೀನದ ಭೀತಿ ಎದುರಿಸುತ್ತಿರುವ ಎಲ್ಲಾ ರೈತರನ್ನು ಒಗ್ಗೂಡಿಸಿ ಚನ್ನರಾಯಪಟ್ಟಣ ಭೂ ಸ್ವಾಧೀನಕ್ಕೆ ಪ್ರಬಲ ವಿರೋಧವನ್ನು ಇನ್ನೂ ಹೆಚ್ಚಿನ ಹೋರಾಟದ ಶಕ್ತಿಯೊಂದಿಗೆ ಮುಂದುವರೆಸುತ್ತೇವೆ” ಎಂದು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ: ಮೈಸೂರು ವಿಭಾಗದಲ್ಲಿ ₹3,647 ಕೋಟಿಯ ಯೋಜನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...