Homeಮುಖಪುಟಉತ್ತರಾಖಂಡ: UCC ಕುರಿತ 750 ಪುಟಗಳ ಅಂತಿಮ ಕರಡು ವರದಿ ಸಲ್ಲಿಕೆ; ತ್ರಿವಳಿ ತಲಾಖ್‌ಗೆ ಕಠಿಣ...

ಉತ್ತರಾಖಂಡ: UCC ಕುರಿತ 750 ಪುಟಗಳ ಅಂತಿಮ ಕರಡು ವರದಿ ಸಲ್ಲಿಕೆ; ತ್ರಿವಳಿ ತಲಾಖ್‌ಗೆ ಕಠಿಣ ಶಿಕ್ಷೆ ಸೇರಿ ಹಲವು ಅಂಶಗಳು ಉಲ್ಲೇಖ

- Advertisement -
- Advertisement -

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕರಡು ರಚನೆಗಾಗಿ ರಚಿಸಲಾಗಿದ್ದ ಐವರು ಸದಸ್ಯರ ಸಮಿತಿಯು ಶುಕ್ರವಾರ ತನ್ನ ಅಂತಿಮ ಕರಡು ವರದಿಯನ್ನು ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಸಲ್ಲಿಕೆ ಮಾಡಿದೆ.

UCC ಕರಡು ನಾಲ್ಕು ಸಂಪುಟಗಳಲ್ಲಿ ಸುಮಾರು 750 ಪುಟಗಳನ್ನು ಒಳಗೊಂಡಿದೆ. ಇದನ್ನು ‘ಪೂರ್ಣ’ ಹಿಂದಿಯಲ್ಲಿ ಬರೆಯಲಾಗಿದೆ ಮತ್ತು ‘ಉರ್ದು’ ಅಥವಾ ಯಾವುದೇ ಇತರ ಭಾಷೆಯ ಒಂದು ಪದವನ್ನು ಹೊಂದಿಲ್ಲ. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಸಮಿತಿಯು ವರದಿಯನ್ನು ಸಿದ್ದಪಡಿಸಿದ್ದು, ಬಹುಪತ್ನಿತ್ವ ಸಂಪೂರ್ಣವಾಗಿ ನಿಷೇಧ, ಮುಸ್ಲಿಂ ವೈಯಕ್ತಿಕ ಕಾನೂನುಗಳಿಗೆ ಸಂಬಂಧಿಸಿದ ತ್ರಿವಳಿ ತಲಾಖ್ ಮತ್ತು ನಿಕಾಹಲಾಲಾ ಆಚರಣೆಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು, ಲಿವ್-ಇನ್ ಸಂಬಂಧದಲ್ಲಿರುವ ದಂಪತಿಗಳು ನೋಂದಾವಣೆ ಮಾಡಿಸಬೇಕು. ವಿವಾಹ ನೋಂದಣಿಗಳು ಕಡ್ಡಾಯವಾಗಿದೆ ಮತ್ತು ಬುಡಕಟ್ಟು ಸಮುದಾಯವನ್ನು ಯುಸಿಸಿ ವ್ಯಾಪ್ತಿಯಿಂದ ಹೊರಗಿಡಲು ಸಲಹೆ ನೀಡಿದೆ.

ಈ ಕುರಿತು ದೆಹಲಿಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, ಉತ್ತರಾಖಂಡ ಸರ್ಕಾರವು ಭರವಸೆಯಂತೆ ಯುಸಿಸಿ ಕಾನೂನನ್ನು ತರಲು ಸಿದ್ಧವಾಗಿದೆ. ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಕರಡು ಪ್ರತಿ ತಯಾರಿಸಲು ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರ ನೇತೃತ್ವದಲ್ಲಿ ನಾವು ತಜ್ಞರ ಸಮಿತಿಯನ್ನು ರಚಿಸಿದ್ದೇವೆ. 2022ರಲ್ಲಿ ಸರ್ಕಾರ ರಚಿಸಿದ ನಂತರ ನಾವು ನಮ್ಮ ಜನರಿಗೆ ನೀಡಿದ್ದ ನಮ್ಮ ಭರವಸೆ ಇದಾಗಿದೆ. ನಮ್ಮ ಬದ್ಧತೆಯನ್ನು ಈಡೇರಿಸುವಲ್ಲಿ ಇದು ಒಂದು ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಯುಸಿಸಿ ವರದಿಯನ್ನು ಫೆಬ್ರವರಿ 5 ರಿಂದ ರಾಜ್ಯ ವಿಧಾನಸಭೆಯಲ್ಲಿ ಚರ್ಚೆಗಾಗಿ ಮಂಡಿಸಲಾಗುವುದು ಮತ್ತು ಅಂತಿಮವಾಗಿ ಅನುಷ್ಠಾನದ ಮೊದಲು ಅದನ್ನು ವಿವರವಾಗಿ ಪರಿಶೀಲಿಸಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಇಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವರದಿ ಕುರಿತು ಚರ್ಚೆ ನಡೆಯಲಿದೆ.

ಅಂತಿಮ ಯುಸಿಸಿ ಕರಡು ಲಿಂಗ ಸಮಾನತೆ ಅಥವಾ ತಾರತಮ್ಯದ ನಿರ್ಮೂಲನೆ, ಆಸ್ತಿ ಹಕ್ಕುಗಳ ಮೇಲಿನ ಏಕರೂಪದ ಕಾನೂನುಗಳಿಂದ ದತ್ತು ನಿಯಮಗಳವರೆಗೆ ಎಲ್ಲವನ್ನೂ ಒಳಗೊಂಡಿದೆ. ಉರ್ದುವಿನ ಒಂದೇ ಒಂದು ಪದವನ್ನು ಕರಡು ಪ್ರತಿಯಲ್ಲಿ ಬಳಕೆ ಮಾಡಲಾಗಿಲ್ಲ. ಪರಿಶಿಷ್ಟ ಪಂಗಡಗಳು (ಎಸ್‌ಟಿಗಳು), ತೃತೀಯಲಿಂಗಿಗಳ ಹಕ್ಕುಗಳು, ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿ ಯಾವುದೇ ತಿದ್ದುಪಡಿ ಮಾಡಬಾರದು ಎಂದು ಕರಡು ಶಿಫಾರಸು ಮಾಡಿದೆ ಎಂದು ಯುಸಿಸಿ ಸಮಿತಿಯ ಸದಸ್ಯರೊಬ್ಬರು ತಿಳಿಸಿದ್ದಾರೆ.

ಉತ್ತರಾಖಂಡದಲ್ಲಿ ಬುಡಕಟ್ಟು ಜನಸಂಖ್ಯೆಯು ಒಟ್ಟು ಜನಸಂಖ್ಯೆಯ ಸುಮಾರು 2.9 ಪ್ರತಿಶತವನ್ನು ಹೊಂದಿದೆ, ಮೊದಲಿನಿಂದಲೂ UCCಯ ಬಗ್ಗೆ ಈ ಸಮುದಾಯ ಅಸಮಾಧಾನವನ್ನು ವ್ಯಕ್ತಪಡಿಸುತ್ತಾ ಬಂದಿದೆ.  ಚಕ್ರತಾ ಮತ್ತು ನಾನಕಮಟ್ಟಾ ಮುಂತಾದ ಸ್ಥಳಗಳಲ್ಲಿ ಈ ಸಮುದಾಯ ವಾಸಿಸುತ್ತಿದೆ.

ಏನಿದು ಏಕರೂಪ ನಾಗರಿಕ ಸಂಹಿತೆ?

ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮ ಜಾರಿಗೆ ತರುವುದು. ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ. ಏಕರೂಪ ನಾಗರಿಕ ಸಂಹಿತೆ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ.

ಏಕರೂಪ ಎನ್ನುವುದು ಭಾರತದ ಬಹುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಏಕರೂಪ ನಾಗರಿಕ ಸಂಹಿತೆಯು ಪ್ರಜಾಸತ್ತಾತ್ಮಕ ಜಾತ್ಯತೀತ ಮತ್ತು ಸಮಾಜವಾದಿ ತತ್ವಗಳ ಆಧಾರದ ಮೇಲೆ ಭಾರತೀಯ ಗಣರಾಜ್ಯವನ್ನು ಬಲಪಡಿಸುವ ಸಾಂವಿಧಾನಿಕ ಬದ್ಧತೆಯನ್ನು ಸೋಲಿಸುತ್ತದೆ.

2019ರ ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಮಾಡುವ ಆಶ್ವಾಸನೆ ನೀಡಿತ್ತು. ದೇಶದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂದು ಬಿಜೆಪಿ ಹೇಳಿತ್ತು. ಒಂದು ವೇಳೆ ಈ ಕಾಯ್ದೆ ಜಾರಿಗೆ ಬಂದರೆ, ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಯಾವುದೇ ಧರ್ಮಾಧಾರಿತ ಕಾನೂನುಗಳಿಗೆ ಬೆಲೆ ಇರುವುದಿಲ್ಲ. ವೈಯಕ್ತಿಕ ಕಾನೂನು, ಸಿವಿಲ್ ಕಾನೂನುಗಳು ರದ್ದುಗೊಳ್ಳುತ್ತದೆ.  ಹಿಂದೂ ವಿವಾಹ ಕಾಯ್ದೆ, ಮುಸ್ಲಿಂ ವಿವಾಹ ಕಾನೂನು ಹೀಗೆ ಆಯಾ ಧರ್ಮಕ್ಕೆ ಅವರದ್ದೇ ಆದ ಕಾನೂನು ಇದೆ. ವಿವಾಹ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ಕಾನೂನುಗಳು ಹಿಂದೂಗಳಿಗೆ ಒಂದು ರೀತಿ ಇದ್ದರೆ, ಮುಸ್ಲಿಮರಿಗೆ ಮತ್ತೊಂದು ರೀತಿ ಇದೆ. ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿಗೆ ಬಂದರೆ ಇದು ಬದಲಾಗುತ್ತದೆ.

ಸಂವಿಧಾನದ ಆರ್ಟಿಕಲ್ 25 ಹಾಗೂ 28ರ ಅಡಿ ದೇಶದ ಯಾವುದೇ ಪ್ರಜೆಗೆ ತನ್ನ ಧಾರ್ಮಿಕ ಆಚರಣೆಗಳನ್ನು ಪಾಲಿಸಲು ಸಂವಿಧಾನ ಅವಕಾಶ ನೀಡುತ್ತೆ. ಒಂದು ವೇಳೆ ಎಲ್ಲ ಧರ್ಮದವರಿಗೂ ಒಂದೇ ಕಾನೂನು ಜಾರಿ ಮಾಡಿದರೆ ವೈವಿಧ್ಯತೆಗೆ ಧಕ್ಕೆ ಬರಲಿದೆ.

ಇದನ್ನು ಓದಿ: ಕೇರಳದಲ್ಲಿ ‘ಪೌರತ್ವ ತಿದ್ದುಪಡಿ ಕಾಯ್ದೆ’ ಜಾರಿಗೊಳಿಸುವುದಿಲ್ಲ: ಪಿಣರಾಯ್‌ ವಿಜಯನ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...