Homeಕರ್ನಾಟಕ​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ 'ಹೋರಾಟ ಸಮಿತಿ'

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

- Advertisement -
- Advertisement -

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ ಮತ್ತು ಒಗ್ಗಟ್ಟಿನ ಫಲವಾಗಿ, ಸುಮಾರು ನಾಲ್ಕು ವರ್ಷಗಳ ಕಾಲ ನಡೆದ ಹೋರಾಟಕ್ಕೆ ಅಂತಿಮ ಜಯ ಲಭಿಸಿದೆ.

​ಸಂಪೂರ್ಣ ಭೂಸ್ವಾಧೀನ ಪ್ರಕ್ರಿಯೆಯನ್ನೇ ಕೈಬಿಡುವವುದಾಗಿ ಜುಲೈ 15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಐತಿಹಾಸಿಕ ಘೋಷಣೆ ಮಾಡಿದರು. ಆದರೆ, ಅದರ ನಂತರವೂ ಕೆಲವು ನಕಾರಾತ್ಮಕ ಬೆಳವಣಿಗೆಗಳು ನಡೆದು ರೈತರು ಆತಂಕಗೊಂಡಿದ್ದರು. ಮುಖ್ಯಮಂತ್ರಿಗಳ ಘೋಷಣೆಗೆ ವಿರುದ್ಧವಾಗಿ, 13 ಹಳ್ಳಿಗಳ ಪೈಕಿ ಎರಡು ಹಳ್ಳಿಗಳ ಭೂಮಿಗೆ ಬೆಲೆ ನಿಗದಿ ಸಭೆಯನ್ನು ಕರೆಯಲಾಗಿತ್ತು. ಈ ಸಭೆಗೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಲಾಯಿತು. ಅವರ ಲೆಕ್ಕಾಚಾರ ಫಲ ಕೊಡದಿದ್ದಾಗ, ಶಾಶ್ವತ ವಿಶೇಷ ಕೃಷಿ ವಲಯ ಘೋಷಣೆಯ ವದಂತಿಯನ್ನೂ ತೇಲಿಬಿಡಲಾಗಿತ್ತು.

​ಈ ಎಲ್ಲ ಬೆಳವಣಿಗೆಗಳ ನಡುವೆಯೇ, ನವೆಂಬರ್ 26 ರ ಬೃಹತ್ ‘ಬೆಂಗಳೂರು ಚಲೋ’ ಸಂದರ್ಭದಲ್ಲಿ, ಸಂಯುಕ್ತ ಹೋರಾಟದ ಮುಖಂಡರ ಜೊತೆಗೆ ಮುಖ್ಯಮಂತ್ರಿಗಳ ಜೊತೆ ನಡೆದ ಮಾತುಕತೆಯಂತೆ, ಡಿ. 4 ರ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿನೋಟಿಫಿಕೇಶನ್‌ಗೆ (ಭೂಸ್ವಾಧೀನ ಕೈಬಿಡಲು) ಸಮ್ಮತಿ ಸೂಚಿಸಿದೆ.

ಸುಮಾರು ನಾಲ್ಕು ವರ್ಷಗಳ ಕಾಲ ನಡೆದ ಈ ಸುದೀರ್ಘ ಹೋರಾಟದ ದಾರಿ ಸುಲಭವಾಗಿರಲಿಲ್ಲ. ಹೆಜ್ಜೆ ಹೆಜ್ಜೆಗೂ ಎದುರಾದ ತಿರುವುಗಳು, ಸರ್ಕಾರಗಳ ನಿರ್ಲಕ್ಷ್ಯ, ಕುತಂತ್ರಗಳು, ವಿರೋಧಿಗಳ ಬೆದರಿಕೆಗಳನ್ನೆಲ್ಲಾ ಮೀರಿ ಕೊನೆಗೂ ರೈತರು ಗೆದ್ದಿದ್ದಾರೆ.

ರೈತರ ಜೊತೆ ನಿಂತ ಜನಸಮುದಾಯಗಳಿಗೆ ಧನ್ಯವಾದ ತಿಳಿಸಿದ ಹೋರಾಟ ಸಮಿತಿ

​ರೈತರ ಹೋರಾಟದ ಕೊನೆಯ ದಿನಗಳಲ್ಲಿ ಇಡೀ ರಾಜ್ಯದ ಜನತೆ ದೇವನಹಳ್ಳಿ ರೈತರ ಜೊತೆಗೆ ನಿಂತರು. ದೇವನಹಳ್ಳಿ ಚಲೋ ನಂತರ, ಎಲ್ಲ ರೈತ, ಕಾರ್ಮಿಕ, ದಲಿತ, ಮಹಿಳಾ ಸಂಘಟನೆಗಳು ಸೇರಿದಂತೆ ರಾಜ್ಯದ ಜನಪರ ಸಂಘಟನೆಗಳು, ಪ್ರಗತಿಪರ ಚಿಂತಕರು, ಸಾಹಿತಿಗಳು, ಕಲಾವಿದರು, ಮಠಾಧೀಶರು, ಪ್ರಜ್ಞಾವಂತ ನಾಗರಿಕರು ಒಟ್ಟಾಗಿ ಬಂದು, ರೈತರ ಉಳಿವಿಗಾಗಿ ಜೊತೆ ನಿಂತಿದ್ದನ್ನು ಇಲ್ಲಿ ಸ್ಮರಿಸುತ್ತೇವೆ ಎಂದು ರೈತರು ಅಭಿಪ್ರಾಯಪಟ್ಟರು.

​ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೋರಾಟಗಾರರಾದ ಕಾರಳ್ಳಿ ಶ್ರೀನಿವಾಸ್‌, “ಭೂಸ್ವಾಧೀನ ಕೈಬಿಟ್ಟಿರುವ ಮುಖ್ಯಮಂತ್ರಿಗಳ ನೇತೃತ್ವದ ಸರ್ಕಾರಕ್ಕೆ ಅಭಿನಂದನೆಗಳು. ಈ ರೈತಪರ ನಿಲುವನ್ನು ಸಮಿತಿಯು ಸ್ವಾಗತಿಸುತ್ತದೆ. ಈ ಗೆಲುವಿನ ಹಿಂದೆ ಒಟ್ಟಾಗಿ ಹಗಲಿರುಳೆನ್ನದೆ ದುಡಿದ ರೈತರ ಶ್ರಮವಿದೆ. ಜೊತೆಗೆ ವಿವಿಧ ಜನಪರ ಸಂಘಟನೆಗಳು, ಪ್ರಗತಿಪರರು, ಸಾಹಿತಿಗಳು, ನಟರು ಸೇರಿದಂತೆ ಎಲ್ಲ ಜನಸಮುದಾಯಗಳ ಬೆಂಬಲ ದೊರೆತದ್ದು ಮತ್ತಷ್ಟು ಗೆಲುವಾಗಲು ಕಾರಣವಾಗಿದೆ. ಆದ್ದರಿಂದ ಅವರೆಲ್ಲರಿಗೂ ನಮ್ಮ ಸಮಿತಿಯು ಕೃತಜ್ಞತೆಗಳನ್ನು ಸಲ್ಲಿಸುತ್ತದೆ. ಇಲ್ಲಿ ಮಾತ್ರವಲ್ಲ, ತಮ್ಮ ಭೂಮಿಯನ್ನು ಪ್ರೀತಿಸುವ, ಭೂತಾಯಿಯನ್ನು ನಂಬಿ ಬದುಕಲು ಬಯಸುವ ಎಲ್ಲರಿಗೂ ಭೂಮಿ ಸಿಗಬೇಕು. ಈ ಎಲ್ಲ ಜನಸಮುದಾಯಗಳ ಜೊತೆ ನಾವಿರುತ್ತೇವೆ” ಎಂದರು.

​ಮುಖಂಡರಾದ ಮಾರೇಗೌಡ ಮಾತನಾಡಿ, “ನಮ್ಮ ಭೂಮಿ ಉಳಿದಿರುವ ಈ ಸಂತೋಷವನ್ನು, ನಮಗೆ ಬೆಂಬಲಿಸಿದ ಎಲ್ಲರಿಗೂ, ಜೊತೆಗೆ ನಿಂತ ಸಂಘಟನೆಗಳು, ಹೋರಾಟದ ಸಹಚರರು ಹಾಗೂ ನಾಡಿನ ಜನರೊಂದಿಗೆ ಹಂಚಿಕೊಳ್ಳಲು ಮತ್ತು ಅವರನ್ನು ಅಭಿನಂದಿಸಲು ನಾವು ಬಯಸುತ್ತೇವೆ. ಇದರ ಜೊತೆಗೆ ಈ ರೈತಪರ ನಿರ್ಣಯಕ್ಕೆ ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ಕಾರಣರಾದ ಜನಪ್ರತಿನಿಧಿಗಳು, ಅಧಿಕಾರಿಗಳು ಎಲ್ಲರಿಗೂ ಧನ್ಯವಾದಗಳು” ಎಂದು ಹೇಳಿದರು.

​ಪತ್ರಿಕಾಗೋಷ್ಠಿಯಲ್ಲಿ, ನಲ್ಲಪ್ಪನಹಳ್ಳಿ ನಂಜಪ್ಪ, ಅಶ್ವತ್ಥಪ್ಪ, ತಿಮ್ಮರಾಯಪ್ಪ, ವೆಂಕಟರಮಣಪ್ಪ, ಪಿಳ್ಳಣ್ಣ, ಮುನಿಕೃಷ್ಣಪ್ಪ, ನಂದೀಶ್, ಕೃಷ್ಣಪ್ಪ, ಮರಿಯಣ್ಣ, ಮೋಹನ್, ವೆಂಕಟೇಶ್, ಪಿಳ್ಳರಾಜು, ಗೋಪಿನಾಥ್, ಲಗುಮಣ್ಣ, ಮಂಜುನಾಥ್ ಮುಂತಾದವರು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಾಯುಮಾಲಿನ್ಯ : ಏರ್ ಪ್ಯೂರಿಫೈಯರ್‌ ಜಿಎಸ್‌ಟಿ ಕಡಿತಕ್ಕೆ ಕೇಂದ್ರ ಆಕ್ಷೇಪ

ಏರ್‌ಪ್ಯೂರಿಫೈಯರ್‌ ಸಾಧನಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವಂತೆ ಜಿಎಸ್‌ಟಿ ಮಂಡಳಿಗೆ ಆದೇಶಿಸಿದರೆ ಅದು ಅಂತಹ ಇನ್ನಷ್ಟು ಪ್ರಕರಣಗಳು ಹೆಚ್ಚಳವಾಗಲು ಕಾರಣವಾಗುತ್ತದೆ (Pandora Box)ಎಂದು ಕೇಂದ್ರ ಸರ್ಕಾರ ಶುಕ್ರವಾರ (ಡಿ.26) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ದೆಹಲಿ ಎನ್‌ಸಿಆರ್‌...

ಬಳ್ಳಾರಿ | ಪ್ರಭಾವ, ಗೂಂಡಾಗಿರಿ ಮೂಲಕ ಬಡ ಜನರ ಭೂ ಕಬಳಿಕೆ : ಬುಡಾ ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ

ಬಳ್ಳಾರಿ ನಗರಕ್ಕೆ ಹೊಂದಿಕೊಂಡಿರುವ ಕೌಲ್‌ ಬಜಾರಿನ ದಾನಪ್ಪಬೀದಿ ಮತ್ತು ಬಂಡಿಹಟ್ಟಿ ಏರಿಯಾಗಳ ಬಡ ಜನರಿಗೆ ಇನಾಂ ರದ್ದತಿಯ ಬಳಿಕ ನೀಡಲಾಗಿದ್ದ ಭೂಮಿಯನ್ನು ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರ (ಬುಡಾ) ದ ಮಾಜಿ ಅಧ್ಯಕ್ಷ ಎನ್‌....

ಕ್ರಿಸ್‌ಮಸ್‌ ದಿನ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರಿಂದ ಪ್ರತಿಭಟನೆ : ಹೊಸ ವರ್ಷದಂದು ಮತ್ತೊಂದು ಹೋರಾಟಕ್ಕೆ ಸಿದ್ದತೆ

ವರ್ಷಾಂತ್ಯದ ಎರಡು ಪ್ರಮುಖ ದಿನಗಳಾದ ಡಿಸೆಂಬರ್ 25ರ ಕ್ರಿಸ್‌ಮಸ್‌ ಮತ್ತು ಡಿಸೆಂಬರ್ 31ರ ಹೊಸ ವರ್ಷದ ಸಂಜೆ (ಮುನ್ನಾದಿನ) ದೇಶದಾದ್ಯಂತ ಪ್ರತಿಭಟನೆ ನಡೆಸಲು ಗಿಗ್ ಕಾರ್ಮಿಕರು ನಿರ್ಧರಿಸಿದ್ದಾರೆ. ಈಗಾಗಲೇ ಡಿಸೆಂಬರ್ 25ರ ಕ್ರಿಸ್‌ಮಸ್‌ ದಿನದಂದು...

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಪು ಹತ್ಯೆ : ಘಟನೆಗೆ ಕೋಮು ಆಯಾಮವಿಲ್ಲ ಎಂದ ಮಧ್ಯಂತರ ಸರ್ಕಾರ

ಬಾಂಗ್ಲಾದೇಶದ ರಾಜ್‌ಬರಿ ಜಿಲ್ಲೆಯಲ್ಲಿ ಸುಲಿಗೆ ಯತ್ನದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಗುಂಪೊಂದು ಥಳಿಸಿ ಕೊಂದಿದೆ. ಇದು ಇತ್ತೀಚೆಗೆ ಹಿಂದೂ ವ್ಯಕ್ತಿಯನ್ನು ಗುಂಪು ಹತ್ಯೆ ನಡೆಸಿರುವ ಎರಡನೇ ಘಟನೆಯಾಗಿದೆ. ಆದರೆ, ಅಲ್ಲಿನ ಮಧ್ಯಂತರ ಸರ್ಕಾರ...

ದೆಹಲಿ ವಾಯು ಮಾಲಿನ್ಯದಿಂದ ಸಾಂತಾ ಕ್ಲಾಸ್ ಮೂರ್ಛೆ ಹೋದ ವಿಡಿಯೋ ಹಂಚಿಕೆ : ಎಎಪಿಯ ಸೌರಭ್ ಭಾರದ್ವಾಜ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯದಿಂದ ಸಾಂತಾಕ್ಲಾಸ್ ವೇಷ ಧರಿಸಿದ ಪುರುಷರು ಮೂರ್ಛೆ ಹೋಗುತ್ತಿರುವುದನ್ನು ತೋರಿಸುವ ವಿಡಿಯೋ ಸ್ಕಿಟ್ (ಅಭಿನಯ) ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರಾದ...

ಕ್ರಿಸ್‌ಮಸ್‌ ವೇಳೆ ಶಾಲೆಗೆ ನುಗ್ಗಿ ದಾಂಧಲೆ : ವಿಹೆಚ್‌ಪಿ-ಬಜರಂಗದಳದ ನಾಲ್ವರ ಬಂಧನ

ನಲ್ಬರಿ ಜಿಲ್ಲೆಯ ಶಾಲೆಯೊಂದಕ್ಕೆ ನುಗ್ಗಿ ಕ್ರಿಸ್‌ಮಸ್ ಅಲಂಕಾರವನ್ನು ಧ್ವಂಸ ಮಾಡಿದ, ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ನಾಲ್ವರನ್ನು ಅಸ್ಸಾಂ ಪೊಲೀಸರು ಗುರುವಾರ (ಡಿ.25) ಬಂಧಿಸಿದ್ದಾರೆ. ಬಂಧಿತರನ್ನು ವಿಹೆಚ್‌ಪಿ ಜಿಲ್ಲಾ ಕಾರ್ಯದರ್ಶಿ ಭಾಸ್ಕರ್...

ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ಗುಂಡಿಕ್ಕಿ ಶಿಕ್ಷಕನ ಹತ್ಯೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ (ಎಎಂಯು)ದ ಶಿಕ್ಷಕರೊಬ್ಬರನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ (ಡಿ.24) ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಭೀತಿ ಮೂಡಿಸಿದೆ. ಮೃತರನ್ನು ಎಎಂಯುನ ಎಬಿಕೆ ಯೂನಿಯನ್ ಹೈಸ್ಕೂಲ್‌ನ ಶಿಕ್ಷಕ...

ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

ಬುಧವಾರ (ಡಿ.24) ಒಡಿಶಾದ ಸಂಬಾಲ್‌ಪುರದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 30 ವರ್ಷದ ವಲಸೆ ಕಾರ್ಮಿಕರೊಬ್ಬರನ್ನು ಗುಂಪು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಉನ್ನಾವೋ ಅತ್ಯಾಚಾರ ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಇಬ್ಬರು ಮಹಿಳಾ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ

ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟಿಸಿದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಓಂ ಪ್ರಕಾಶ್ ರಾಜ್‌ಭರ್ ಅಪಹಾಸ್ಯ ಮಾಡಿದ್ದು, "ಆಕೆಯ ಮನೆ ಉನ್ನಾವೋದಲ್ಲಿರುವಾಗ ದೆಹಲಿಯಲ್ಲಿ ಏಕಿದ್ದಾಳೆ?"...