Homeಮುಖಪುಟಮಹಾತ್ಮ ಗಾಂಧಿಯವರನ್ನು ಗೌರವಿಸುತ್ತೇನೆ: ನನ್ನ ಹೇಳಿಕೆಯನ್ನು ವಿರೂಪಗೊಳಿಸಲಾಗಿದೆ: ಪ್ರಗ್ಯಾ ಠಾಕೂರ್‌

ಮಹಾತ್ಮ ಗಾಂಧಿಯವರನ್ನು ಗೌರವಿಸುತ್ತೇನೆ: ನನ್ನ ಹೇಳಿಕೆಯನ್ನು ವಿರೂಪಗೊಳಿಸಲಾಗಿದೆ: ಪ್ರಗ್ಯಾ ಠಾಕೂರ್‌

- Advertisement -
- Advertisement -

ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆಯನ್ನು “ದೇಶಭಕ್ತ” ಎಂದು ಕರೆದಿದ್ದಕ್ಕಾಗಿ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಅವರು ಶುಕ್ರವಾರ ಲೋಕಸಭೆಯಲ್ಲಿ ಕ್ಷಮೆಯಾಚಿಸಿದ್ದಾರೆ. ತನ್ನ ಹೇಳಿಕೆಗೆ ಉತ್ತರಿಸಿದ ಅವರು, “ರಾಷ್ಟ್ರಕ್ಕೆ ಮಹಾತ್ಮ ಗಾಂಧಿಯವರ ಕೊಡುಗೆಯನ್ನು ಗೌರವಿಸುತ್ತೇನೆ” ಎಂದಿದ್ದಾರೆ.

ನನ್ನ ಹೇಳಿಕೆಯನ್ನು ವಿರೂಪಗೊಳಿಸಲಾಗಿದೆ ಮತ್ತು ನ್ಯಾಯಾಲಯವು ಖುಲಾಸೆಗೊಳಿಸಿದ್ದರೂ ನನ್ನನ್ನು ಭಯೋತ್ಪಾದಕಿ ಎಂದು ಕರೆಯಲಾಗಿದೆ ಎಂದು ಪ್ರಗ್ಯಾ ಠಾಕೂರ್ ಆರೋಪಿಸಿದ್ದಾರೆ.

“ಸದನದ ಸದಸ್ಯರೊಬ್ಬರು ನನ್ನನ್ನು‘ಭಯೋತ್ಪಾದಕಿ’ಎಂದು ಉಲ್ಲೇಖಿಸಿದ್ದಾರೆ. ಇದು ನನ್ನ ಘನತೆಯ ಮೇಲಿನ ಆಕ್ರಮಣವಾಗಿದೆ. ನನ್ನ ವಿರುದ್ಧ ಯಾವುದೇ ಆರೋಪಗಳು ನ್ಯಾಯಾಲಯದಲ್ಲಿ ಸಾಬೀತಾಗಿಲ್ಲ ಎಂದೂ ಸಹ ಅವರು ಹೇಳಿದ್ದಾರೆ.

ಸಂಸತ್ತಿನಲ್ಲಿ ಗಾಂಧಿ ಹಂತಕ ನಾಥೂರಾಂ ಗೊಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದಿಕ್ಕಾಗಿ ಅವರನ್ನು ಉಳಿದ ಚಳಿಗಾಲದ ಅಧಿವೇಶನಕ್ಕಾಗಿ ಪಕ್ಷದ ಸಂಸದರ ನಿಯಮಿತ ಸಭೆಯಲ್ಲಿ ಭಾಗವಹಿಸುವುದನ್ನು ನಿರ್ಬಂಧಿಸಿದೆ ಎಂದು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದರು.

ಅಷ್ಟು ಮಾತ್ರವಲ್ಲದೇ ಪ್ರಜ್ಞಾ ಠಾಕೂರ್ ಅವರನ್ನು ಇತ್ತೀಚೆಗೆ ಸೇರಿಸಿಕೊಂಡಿದ್ದ ರಕ್ಷಣಾ ಸಂಸದೀಯ ಸಮಿತಿಯಿಂದಲೂ ಸಹ ಹೊರಹಾಕಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗೋಡ್ಸೆ ಬಗ್ಗೆ ಹೇಳಿಕೆ: ಸಂಸತ್ತಿನ ರಕ್ಷಣಾ ಸಮಿತಿಯಿಂದ ಪ್ರಗ್ಯಾ ಠಾಕೂರ್‌ ಹೊರಕ್ಕೆ…

ಆ ನಂತರ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಪ್ರಗ್ಯಾರನ್ನು ಭಯೋತ್ಪಾದಕಿ ಎಂದು ಕರೆದಿದ್ದರು.

ಇದನ್ನೂ ಓದಿ: ಭಯೋತ್ಪಾದಕಿ ಪ್ರಗ್ಯಾ ಠಾಕೂರ್‌ , ಭಯೋತ್ಪಾದಕ ಗೋಡ್ಸೆಯನ್ನು ದೇಶಭಕ್ತ ಎಂದಿದ್ದಾರೆ: ರಾಹುಲ್‌ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ನೀವು ಯಾಕೆ ಗೋಡ್ಸೆ ಗೆ ಮರ್ಯಾದಿಕೊಟ್ಟು “ಗೋಡ್ಸೆ ಅವರನ್ನು” ಅಂತ ಬರ್ದಿರೋದು.. ?

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...