- Advertisement -
- Advertisement -
ಕೊನೆಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ನೇಮಕ ಮಾಡಲಾಗಿದೆ. ಹಿರಿಯ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಎಐಸಿಸಿ ಅಧ್ಯಕ್ಷೆ ಸೋನಿಮಾ ಗಾಂಧಿ ಆದೇಶ ಹೊರಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಮತ್ತು ಪ್ರತಿಪಕ್ಷ ನಾಯಕರಾಗಿ ಮುಂದುವರಿಸಿ ಆದೇಶಿಸಲಾಗಿದೆ.
ಇದೇ ಮೊದಲ ಬಾರಿಗೆ ಮೂವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಡಿ.ಕೆ.ಶಿವಕುಮಾರ್ ಕಾರ್ಯಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ಈಗ ಈಶ್ವರ್ ಖಂಡ್ರೆ ಜೊತೆಗೆ ಸತೀಶ್ ಜಾರಕಿಹೊಳಿ ಮತ್ತು ಅಹಮದ್ ಸಲೀಂ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಕಾರ್ಯಾಧ್ಯಕ್ಷರ ಹುದ್ದೆಯನ್ನು ದಲಿತರು, ಲಿಂಗಾಯತರು ಮತ್ತು ಅಲ್ಪಸಂಖ್ಯಾತರಿಗೆ ನೀಡುವ ಮೂಲಕ ಪಕ್ಷದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳಲಾಗಿದೆ.


