Homeಮುಖಪುಟಅಂತ್ಯಕ್ರಿಯೆಗೆ ಆರ್ಥಿಕ ಸಂಕಷ್ಟ: ತಾಯಿಯ ಶವದೊಂದಿಗೆ ವಾರ ಕಳೆದ ಯುವತಿಯರು

ಅಂತ್ಯಕ್ರಿಯೆಗೆ ಆರ್ಥಿಕ ಸಂಕಷ್ಟ: ತಾಯಿಯ ಶವದೊಂದಿಗೆ ವಾರ ಕಳೆದ ಯುವತಿಯರು

- Advertisement -
- Advertisement -

ತೆಲಂಗಾಣದ ಸಿಕಂದರಾಬಾದ್‌ನಲ್ಲಿ ಇಬ್ಬರು ಯುವತಿಯರು ಆರ್ಥಿಕ ಸಂಕಷ್ಟದಿಂದಾಗಿ ಸುಮಾರು ಒಂದು ವಾರದವರೆಗೆ ತಮ್ಮ ತಾಯಿಯ ಶವವನ್ನು ಮನೆಯಲ್ಲಿಯೇ ಇಟ್ಟಿದ್ದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.

ವಾರದ ಬಳಿಕ ಅಧಿಕಾರಿಗಳು ಮಧ್ಯಪ್ರವೇಶದಿಂದ ಅಂತ್ಯಕ್ರಿಯೆ ನಡೆಸಲಾಗಿದೆ. ವಾರಸಿಗುಡ ನಿವಾಸಿಯಾಗಿದ್ದ ಸಿ ಲಲಿತಾ ಕಳೆದ ವಾರ ಅನಾರೋಗ್ಯದಿಂದ ನಿಧನರಾದರು. ಅವರ ಹೆಣ್ಣುಮಕ್ಕಳಾದ 25 ವರ್ಷದ ರಾವಲಿಕಾ ಮತ್ತು 22 ವರ್ಷದ ಅಶ್ವಿತಾ ಅವರಿಗೆ ಅಂತ್ಯಕ್ರಿಯೆ ಖರ್ಚನ್ನು ಭರಿಸಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.

ವರದಿಗಳ ಪ್ರಕಾರ, ಅವರ ತಂದೆ 2020 ರಲ್ಲಿ ಜಗಳಗಳ ನಂತರ ಕುಟುಂಬವನ್ನು ತೊರೆದಿದ್ದರು, ಇದರಿಂದಾಗಿ ಅವರಿಗೆ ಯಾವುದೇ ಆರ್ಥಿಕ ಸಹಾಯವಿರಲಿಲ್ಲ. ತಾಯಿಯ ಮರಣದ ನಂತರ ಸಹೋದರಿಯರು ಪ್ರತ್ಯೇಕ ಕೋಣೆಯಲ್ಲಿ ಉಳಿದಿದ್ದರು, ಶವವು ಮತ್ತೊಂದು ಕೋಣೆಯಲ್ಲಿತ್ತು.

ದುರ್ವಾಸನೆ  ಗಮನಿಸಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿತು. ನಂತರ ಅಧಿಕಾರಿಗಳು ಶುಕ್ರವಾರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಿದರು.

ಸಹೋದರಿಯರು ತಮ್ಮ ತಾಯಿಯ ಅಂತ್ಯಕ್ರಿಯೆಗಾಗಿ ಸ್ಥಳೀಯ ಬಹುಪಯೋಗಿ ಸಭಾಂಗಣದಿಂದ ಸಹಾಯವನ್ನು ಕೋರಿದ್ದರು. ಸಭಾಂಗಣದ ಅಧಿಕಾರಿಗಳು ಚಿಲ್ಕಲ್ಗುಡ ಪೊಲೀಸರನ್ನು ಸಂಪರ್ಕಿಸಿದರು, ನಂತರ ಅವರು ಬೌಧನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಪೊಲೀಸ್ ತಂಡ ಸ್ಥಳಕ್ಕೆ ಹೋಗಿ ತನಿಖೆ ಆರಂಭಿಸಿದ್ದಾರೆ

ವರದಿಗಳ ಪ್ರಕಾರ, ಕುಟುಂಬವು ಎರಡು ತಿಂಗಳ ಹಿಂದೆಯೇ ವಾರಸಿಗುಡಕ್ಕೆ ಸ್ಥಳಾಂತರಗೊಂಡಿತ್ತು. ಇಬ್ಬರು ಸಹೋದರಿಯರು ಸಹಾಯಕ್ಕಾಗಿ ಅಂಬರ್‌ಪೇಟೆಯಲ್ಲಿರುವ ಸಂಬಂಧಿಕರನ್ನು ಸಂಪರ್ಕಿಸಿದ್ದರು. ಆದರೆ, ಅವರು ಅವರ ಕರೆಗಳಿಗೆ ಪ್ರತಿಕ್ರಿಯಿಸಲಿಲ್ಲ ಎಂದು ವರದಿಯಾಗಿದೆ. ಈ ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ; ಕ್ರಿಮಿನಲ್ ಪ್ರಕರಣ ಬಾಕಿ; ಬಿಜೆಪಿ ನಾಯಕನ ಪಾಸ್‌ಪೋರ್ಟ್ ನವೀಕರಣಕ್ಕೆ ಬಾಂಬೆ ಹೈಕೋರ್ಟ್ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Financial distress might not be the only reason for keeping dead body till it’s decayed. There are so many
    Voluntary organisations to help the
    needy and deserved. They might have not approached properly .
    By knowing this neighbors could have come forward.

LEAVE A REPLY

Please enter your comment!
Please enter your name here

- Advertisment -

ಖಮೇನಿ ಪುತ್ರ ಮೊಜ್ತಬಾ ಅವರನ್ನು ಸರ್ವೋಚ್ಚ ನಾಯಕನನ್ನಾಗಿ ಹೆಸರಿಸಿದ ಇರಾನ್ ತಜ್ಞರ ಸಭೆ?

ದಿವಂಗತ ಅಯತೊಲ್ಲಾ ಅಲಿ ಖಮೇನಿಯವರ ಪುತ್ರ 56 ವರ್ಷದ ಮೊಜ್ತಬಾ ಖಮೇನಿ ಅವರನ್ನು ತಜ್ಞರ ಸಭೆಯು ಇರಾನ್‌ನ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಇರಾನ್ ಅಂತಾರಾಷ್ಟ್ರೀಯ...

ಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ

ಹದಿನೆಂಟನೇ ಲೋಕಸಭೆ ರಚನೆಯಾಗಿ ಸುಮಾರು ಎರಡು ವರ್ಷಗಳ ನಂತರ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಮಾ.3) ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಸದನ ಮತ್ತು ಅದರ ಸದಸ್ಯರ ಹಕ್ಕುಚ್ಯುತಿಗೆ...

ಪಶ್ಚಿಮ ಬಂಗಾಳ : ಚುನಾವಣೆ ಹೊಸ್ತಿಲಲ್ಲಿ ತ್ವರಿತಗೊಂಡ ಸಿಎಎ ಜಾರಿ ಪ್ರಕ್ರಿಯೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಕ್ರಿಯೆಯು ಅತ್ಯಂತ ವೇಗ ಪಡೆದುಕೊಂಡಿದೆ. ಇತ್ತೀಚಿನ ಬೆಳವಣಿಗೆಗಳು ರಾಜ್ಯದ ರಾಜಕೀಯ ಸಮೀಕರಣಗಳನ್ನು ಬದಲಿಸುವ ಮುನ್ಸೂಚನೆ ನೀಡುತ್ತಿವೆ. ಕೇಂದ್ರ ಗೃಹ ಸಚಿವಾಲಯವು...

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...