Homeಮುಖಪುಟಕಾನೂನು ಬಾಹಿರವಾಗಿ ಪತ್ರಕರ್ತನ ಮನೆ ಕೆಡವಿದ ಪ್ರಕರಣ : ಮಾಜಿ ಜಿಲ್ಲಾಧಿಕಾರಿ ಸೇರಿ 26 ಮಂದಿಯ...

ಕಾನೂನು ಬಾಹಿರವಾಗಿ ಪತ್ರಕರ್ತನ ಮನೆ ಕೆಡವಿದ ಪ್ರಕರಣ : ಮಾಜಿ ಜಿಲ್ಲಾಧಿಕಾರಿ ಸೇರಿ 26 ಮಂದಿಯ ವಿರುದ್ಧ ಎಫ್‌ಐಆರ್

- Advertisement -
- Advertisement -

ಹಿರಿಯ ಪತ್ರಕರ್ತರೊಬ್ಬರ ಮನೆಯನ್ನು ಬುಲ್ಡೋಝರ್ ಬಳಸಿ ಕಾನೂನು ಬಾಹಿರವಾಗಿ ಕೆಡವಿದ ಆರೋಪದ ಮೇಲೆ ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಪೊಲೀಸರು ಮಾಜಿ ಜಿಲ್ಲಾಧಿಕಾರಿ (ಜಿಲ್ಲಾ ದಂಡಾಧಿಕಾರಿ), ಪೊಲೀಸ್ ಅಧಿಕಾರಿಗಳು ಸೇರಿದಂತೆ 26 ಮಂದಿಯ ವಿರುದ್ದ ಎಫ್‌ಐಆರ್ ದಾಖಲಿಸಿದ್ದಾರೆ.

ಹಿರಿಯ ಪತ್ರಕರ್ತ ಮನೋಜ್ ತಿಬ್ರೆವಾಲ್ ಆಕಾಶ್ ಅವರ ಪೂರ್ವಜರ ಮನೆಯನ್ನು ಕಾನೂನು ಬಾಹಿರವಾಗಿ ಕೆಡವಲಾಗಿತ್ತು. ಇದಕ್ಕೆ ಕಾರಣರಾದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿತ್ತು. ನ್ಯಾಯಾಲಯದ ಆದೇಶ ಬಂದ ಎರಡು ತಿಂಗಳ ಬಳಿಕ ತಪ್ಪಿತಸ್ಥರ ವಿರುದ್ದ ಎಫ್‌ಐಆರ್ ದಾಖಲಾಗಿದೆ.

2019ರಲ್ಲಿ ಪತ್ರಕರ್ತ ಮನೋಜ್ ಅವರ ಮನೆಯನ್ನು ರಸ್ತೆ ವಿಸ್ತರಣೆಯ ನೆಪದಲ್ಲಿ ಕೆಡವಲಾಗಿತ್ತು. ಆಗ ಮಹಾರಾಜ್‌ಗಂಜ್‌ನ ಜಿಲ್ಲಾಧಿಕಾರಿಯಾಗಿದ್ದ ಐಎಎಸ್‌ ಅಧಿಕಾರಿ ಅಮರ್ ನಾಥ್ ಉಪಾಧ್ಯಾಯ ಸೇರಿದಂತೆ 26 ಆರೋಪಿಗಳ ವಿರುದ್ಧ ಕ್ರಿಮಿನಲ್ ಪಿತೂರಿ, ನಕಲಿ ದಾಖಲೆ ಸೃಷ್ಟಿ, ನಿಯಮಗಳ ಉಲ್ಲಂಘನೆ ಸೇರಿದಂತೆ 16 ಅಪರಾಧಗಳನ್ನು ಹೊರಿಸಲಾಗಿದೆ

ಮುಖ್ಯ ನ್ಯಾಯಮೂರ್ತಿಯಾಗಿದ್ದ ಡಿ.ವೈ ಚಂದ್ರಚೂಡ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು 2024ರ ನವೆಂಬರ್ 6 ರಂದು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಆದೇಶದಲ್ಲಿ, ಪತ್ರಕರ್ತ ಮನೋಜ್ ಅವರ ಪೂರ್ವಜರ ಎರಡು ಅಂತಸ್ತಿನ ಮನೆ ಅಂಗಡಿಯನ್ನು ಕಾನೂನು ಬಾಹಿರವಾಗಿ ನೆಲಸಮಗೊಳಿಸಿದ್ದ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳುವಂತೆ ಮತ್ತು ಸಂತ್ರಸ್ತ ಮನೋಜ್ ಅವರಿಗೆ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸೂಚಿಸಿತ್ತು.

ಮನೋಜ್ ಅವರ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆದೇಶಿಸುವ ವೇಳೆ “ಬುಲ್ಡೋಝರ್ ನ್ಯಾಯ ಸ್ವೀಕಾರ್ಹವಲ್ಲ” ಎಂದು ಸುಪ್ರೀಂ ಕೋರ್ಟ್ ಒತ್ತಿ ಹೇಳಿತ್ತು.

ಮಹಾರಾಜ್‌ಗಂಜ್‌ನ ಮೊಹಲ್ಲಾ ಹಮೀದ್ ನಗರದಲ್ಲಿದ್ದ ತನ್ನ ಮನೆಯನ್ನು ಕಾನೂನುಬಾಹಿರವಾಗಿ ನೆಲಸಮಗೊಳಿಸಲಾಗಿದೆ ಎಂದು 2019ರ ಅಕ್ಟೋಬರ್‌ನಲ್ಲಿ ಪತ್ರಕರ್ತ ಮನೋಜ್ ಅವರು ಸುಪ್ರೀಂ ಕೋರ್ಟ್‌ಗೆ ಪತ್ರ ಬರೆದು ದೂರು ನೀಡಿದ್ದರು. ಈ ದೂರನ್ನು ಸ್ವಯಂಪ್ರೇರಿತ ರಿಟ್ ಅರ್ಜಿಯಾಗಿ ಪರಿಗಣಿಸಿದ ನ್ಯಾಯಾಲಯ 2020ರಲ್ಲಿ ಮಹಾರಾಜ್‌ಗಂಜ್‌ನ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧೀಕ್ಷಕರಿಗೆ ನೋಟಿಸ್ ಜಾರಿ ಮಾಡಿತ್ತು.

ಬಳಿಕ 6 ನವೆಂಬರ್ 2024ರಂದು ನೀಡಿದ ಆದೇಶದಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮಕೈಗೊಳ್ಳುವಂತೆ ಮತ್ತು ಸಂತ್ರಸ್ತನಿಗೆ ಪರಿಹಾರ ನೀಡುವಂತೆ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿತ್ತು.

ಇದನ್ನೂ ಓದಿ : ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ಖಾಸಗಿ ಕಾಲೇಜು ಮಾಲೀಕನ ಮಗನನ್ನು ಬಂಧಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...