Homeಮುಖಪುಟಪ.ಬಂಗಾಳ; ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಮೂವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

ಪ.ಬಂಗಾಳ; ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಮೂವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ರಾಜಭವನದ ಸಿಬ್ಬಂದಿಯನ್ನು ಅಕ್ರಮವಾಗಿ ತಡೆದ ಆರೋಪದ ಮೇಲೆ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ರಾಜಭವನದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ದಾಖಲಿಸಿದ ನಂತರ ಮೂವರು ಅಧಿಕಾರಿಗಳ ವಿರುದ್ಧ ಹರೇ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಮೇ 2ರಂದು ರಾಜಭವನದಿಂದ ನಿರ್ಗಮಿಸುವುದನ್ನು ಬಲವಂತವಾಗಿ ತಡೆದ ಆರೋಪದಲ್ಲಿ ಮೂವರ ಮೇಲೆ ಎಫ್‌ಐಆರ್ ದಾಖಲು ಮಾಡಲಾಗಿದೆ. ಇದರಲ್ಲಿ ಅವರ ಪಾತ್ರದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೇ 2ರಂದು ಪ.ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿ ಮಹಿಳೆಯೋರ್ವರು ಹರೇ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದರ ಬೆನ್ನಲ್ಲಿ ಪ.ಬಂಗಾಳದಲ್ಲಿ ಪ್ರಕರಣ ಭಾರೀ ಸದ್ದು ಮಾಡಿದೆ. ಈ ಕುರಿತು ಮಾತನಾಡಿದ ಕೇಂದ್ರ ವಿಭಾಗದ ಉಪ ಆಯುಕ್ತೆ ಇಂದಿರಾ ಮುಖರ್ಜಿ, ನಾವು ದೂರು ಸ್ವೀಕರಿಸಿದ್ದೇವೆ ಮತ್ತು ತನಿಖೆ ನಡೆಸುತ್ತಿದ್ದೇವೆ. ಕಾನೂನು ತಜ್ಞರೊಂದಿಗೆ ಈ ವಿಷಯದ ಬಗ್ಗೆ ಸಮಾಲೋಚಿಸುತ್ತಿದ್ದೇವೆ ಎಂದು ಹೇಳಿದ್ದರು. ಇದಾದ ಬಳಿಕ ಪೊಲೀಸರು ತನಿಖೆಗೆ ಸಮಿತಿಯನ್ನು ರಚಿಸಿದ್ದರು.

ಇದರ ಬೆನ್ನಲ್ಲಿ ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ರಾಜ್ಯಪಾಲರು ನಿಷೇಧ ವಿಧಿಸಿದ್ದರು. ತನ್ನ ವಿರುದ್ಧ ಸಾರ್ವಜನಿಕ ಹೇಳಿಕೆಯನ್ನು ನೀಡಿದ ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರಿಗೂ ನಿಷೇಧವನ್ನು ಹೇರಿದ್ದರು.

ರಾಜಭವನ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿತ್ತು, ಭಾರತದ ಸಂವಿಧಾನದ 361(2) ಮತ್ತು (3)ರ ಪ್ರಕಾರ, ಭಾರತದ ರಾಷ್ಟ್ರಪತಿ ಮತ್ತು ಯಾವುದೇ ರಾಜ್ಯದ ರಾಜ್ಯಪಾಲರು ತಮ್ಮ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆಯಿಂದ ಸಾಂವಿಧಾನಿಕ ವಿನಾಯಿತಿಯನ್ನು ಅನುಭವಿಸುತ್ತಾರೆ. ಆದ್ದರಿಂದ ರಾಜ್ಯ ಸರಕಾರವು ರಾಜ್ಯಪಾಲರ ವಿರುದ್ಧ ಯಾವುದೇ ರೀತಿಯ ಕ್ರಿಮಿನಲ್ ಮೊಕದ್ದಮೆಗಳ ತನಿಖೆ ಪ್ರಾರಂಭಿಸಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿತ್ತು.

ಪಶ್ಚಿಮ ಬಂಗಾಳದ ಗವರ್ನರ್ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಲ್ಲವೂ ಹೊರಬಿದ್ದಿಲ್ಲ, ನನಗೆ ಪೆನ್ ಡ್ರೈವ್ ಸಿಕ್ಕಿದೆ. ಆನಂದ ಬೋಸ್ ರಾಜೀನಾಮೆ ನೀಡಬೇಕು, ನಾನು ರಾಜಭವನಕ್ಕೆ ಹೋಗುವುದಿಲ್ಲ ಮತ್ತು ಬೋಸ್ ಅವರ ಪಕ್ಕದಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿದ್ದರು.

ಇದನ್ನು ಓದಿ: ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಮ್ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...