Homeಮುಖಪುಟಮಹಿಳೆಗೆ ಹಲ್ಲೆ ನಡೆಸಿ, ಅಶ್ಲೀಲವಾಗಿ ನಿಂದಿಸಿದ ಬಿಜೆಪಿ ಮುಖಂಡನ ಮೇಲೆ ಎಫ್‌ಐಆರ್‌‌; ಆರೋಪಿ ಪರಾರಿ

ಮಹಿಳೆಗೆ ಹಲ್ಲೆ ನಡೆಸಿ, ಅಶ್ಲೀಲವಾಗಿ ನಿಂದಿಸಿದ ಬಿಜೆಪಿ ಮುಖಂಡನ ಮೇಲೆ ಎಫ್‌ಐಆರ್‌‌; ಆರೋಪಿ ಪರಾರಿ

- Advertisement -
- Advertisement -

ಉತ್ತರ ಪ್ರದೇಶದ ನೋಯ್ಡಾ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆಯೊಬ್ಬರಿಗೆ ಅಶ್ಲೀಲವಾಗಿ ನಿಂದಿಸಿ ಹಲ್ಲೆ ನಡೆಸಿದ್ದ ಬಿಜೆಪಿ ನಾಯಕ ಶ್ರೀಕಾಂತ್‌ ತ್ಯಾಗಿ ವಿರುದ್ಧ ಎಫ್‌ಐಆರ್ ದಾಖಲಿಸಿ ಅವರನ್ನು ಬಂಧಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಶನಿವಾರ ಹೇಳಿದೆ. ಆದರೆ ಆರೋಪಿಯು ಪರಾರಿಯಾಗಿದ್ದು, ಆತನ ಪತ್ತೆಗಾಗಿ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯು ನೋಯ್ಡಾದ ಗ್ರ್ಯಾಂಡ್ ಒಮ್ಯಾಕ್ಸ್ ಸೊಸೈಟಿ ಸೆಕ್ಟರ್ 93B ಅಪಾರ್ಟ್‌ಮೆಂಟ್‌ನಲ್ಲಿ ನಡೆದಿತ್ತು.

ಎನ್‌ಸಿಡಬ್ಲ್ಯೂ ಅಧ್ಯಕ್ಷೆ ರೇಖಾ ಶರ್ಮಾ ಅವರು ಉತ್ತರ ಪ್ರದೇಶ ಡಿಜಿಪಿಗೆ ಪತ್ರ ಬರೆದು ಘಟನೆಯ ಬಗ್ಗೆ ನ್ಯಾಯಯುತ ಮತ್ತು ತ್ವರಿತ ತನಿಖೆಯನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಿದ್ದು, ದುಷ್ಕರ್ಮಿಯ ವಿರುದ್ಧ ಎಫ್‌ಐಆರ್ ದಾಖಲಿಸಿ ಅವನನ್ನು ಬಂಧಿಸುವಂತೆ ಕೋರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಪಾರ್ಟ್‌ಮೆಂಟ್‌ನ ಕಾಮನ್ ಏರಿಯಾ ಜಾಗವನ್ನು ಶ್ರಿಕಾಂತ್ ತ್ಯಾಗಿ ಅತಿಕ್ರಮಣ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು. ಈ ಕುರಿತು ಅಪಾರ್ಟ್‌ಮೆಂಟ್ ಆಡಳಿತ ಮಂಡಳಿಯ ಸದಸ್ಯರೊಂದಿಗೆ ಶ್ರೀಕಾಂತ್ ತ್ಯಾಗಿ ಬಳಿ ಚರ್ಚೆ ನಡೆಸುತ್ತಿದ್ದ ಸಂದರ್ಭದಲ್ಲಿ ಅಶ್ಲೀಲ ಶಬ್ದಗಳಿಂದ ಮಹಿಳೆಯನ್ನು ನಿಂದಿಸಿ ಹಲ್ಲೆ ನಡೆಸಿದ್ದನು. ದುಷ್ಕರ್ಮಿಯ ಶ್ರೀಕಾಂತ್ ತ್ಯಾಗಿ ವಿರುದ್ಧ ನೋಯ್ಡಾ ಪೊಲೀಸರು ಶುಕ್ರವಾರ ಆಗಸ್ಟ್ 5 ರಂದು ಮೊಕದ್ದಮೆ ದಾಖಲಿಸಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮಹಿಳೆಯ ಮೇಲೆ ಕೈ ಮಾಡಿ, ಅಶ್ಲೀಲ ಪದಗಳಲ್ಲಿ ನಿಂದಿಸಿದ ಬಿಜೆಪಿ ಮುಖಂಡ

ಘಟನೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಬಿಜೆಪಿ ನಾಯಕ ಶ್ರೀಕಾಂತ್ ತ್ಯಾಗಿ ಮಹಿಳೆಯನ್ನು ಕೆಟ್ಟದಾಗಿ ನಿಂದಿಸುವುದು ಮತ್ತು ಅವರನ್ನು ಕೈಯಿಂದ ತಳ್ಳುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ.

“ಶ್ರೀಕಾಂತ್ ತ್ಯಾಗಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 354 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಸರಿಯಾದ ತನಿಖೆಯ ನಂತರ ಮತ್ತಷ್ಟು ಆರೋಪಗಳನ್ನು ಸೇರಿಸಬಹುದು” ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತೆ (ಮಹಿಳಾ ಸುರಕ್ಷತೆ) ಅಂಕಿತಾ ಶರ್ಮಾ ಪಿಟಿಐಗೆ ತಿಳಿಸಿದ್ದಾರೆ.

ಶ್ರೀಕಾಂತ್ ತ್ಯಾಗಿ ಅವರು ಸೊಸೈಟಿ ಪಾರ್ಕ್ ಅನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಆತ ಅಕ್ರಮ ಕಟ್ಟಡ ಕಟ್ಟುತ್ತಿರುವುದು ಕಳೆದ ಎರಡು ವರ್ಷಗಳಿಂದ ಅಲ್ಲಿ ವಿವಾದವಾಗಿ ಮಾರ್ಪಟ್ಟಿದೆ. ಈ ಹಿಂದೆಯೂ ನೋಯ್ಡಾ ಆಡಳಿತವು ಆತನಿಗೆ ಅಕ್ರಮ ಕಟ್ಟಡ ತೆರವುಗೊಳಿಸುವಂತೆ ನೋಟಿಸ್ ಜಾರಿಗೊಳಿಸಿತ್ತು. ಆದರೆ ಆತ ಅದನ್ನು ಇಂದಿಗೂ ಮುಂದುವರೆಸಿಕೊಂಡು ಬಂದಿದ್ದಾರೆ. ಅದನ್ನು ಪ್ರಶ್ನಿಸಿ ಮಹಿಳಾ ನಿವಾಸಿಯ ಮೇಲೆ ಕೈಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೇಗೆ ನೇಮಕ ಮಾಡಲಾಗುತ್ತದೆ? | ಸಂಕ್ಷಿಪ್ತ ವಿವರಣೆ

ಈ ಶ್ರೀಕಾಂತ್ ತ್ಯಾಗಿ ಎಂಬುವವರು ಶಾಸಕನಲ್ಲದಿದ್ದರೂ ತನ್ನ ಕಾರಿಗೆ MLA ಎಂಬ ಸ್ಟಿಕ್ಕರ್ ಅಂಟಿಸಿಕೊಂಡು ವಸೂಲಿಗಿಳಿದಿದ್ದಾರೆ ಎಂದು ಹಲವು ಟ್ವಿಟರ್ ಬಳಕೆದಾರರು ಆರೋಪಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

0
ರಾಜ್ಯದ ಕಾನೂನು ಸಚಿವ ಮಾಧುಸ್ವಾಮಿ ಅವರ ಆಡಿಯೊವೊಂದು ಸೋರಿಕೆಯಾಗಿರುವ ಪರಿಣಾಮ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೊಳಗಾಗಿದ್ದು ಸರ್ಕಾರದೊಳಗೆ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ ನಾಯಕರು ಮಾಧುಸ್ವಾಮಿ ಹೇಳಿಕೆಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಮಾಧುಸ್ವಾಮಿಯವರೂ ಪ್ರಕರಣಕ್ಕೆ ಸಂಬಂಧಿಸಿದಂತೆ...