Homeಕರ್ನಾಟಕಮುಸ್ಲಿಂ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಕೆ: ಅಜಿತ್ ಹನುಮಕ್ಕನವರ್ ವಿರುದ್ಧ ಎಫ್‌ಐಆರ್‌

ಮುಸ್ಲಿಂ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಕೆ: ಅಜಿತ್ ಹನುಮಕ್ಕನವರ್ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಮುಸ್ಲಿಂ ಜನಸಂಖ್ಯೆಯನ್ನು ತೋರಿಸಲು ಪಾಕಿಸ್ತಾನ ಧ್ವಜವನ್ನು ಬಳಸಿದ್ದ ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಕೋಮು ದ್ವೇಷವನ್ನು ಹರಡಿದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಅದರ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಐಪಿಸಿ ಸೆಕ್ಷನ್ 505 (2) ಅಡಿಯಲ್ಲಿ ದ್ವೇಷವನ್ನು ಸೃಷ್ಟಿಸಿದ ಅಥವಾ ಉತ್ತೇಜಿಸಲು ಯತ್ನಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

 

 

ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿಯಲ್ಲಿ ದೇಶದಲ್ಲಿ ಹಿಂದೂಗಳ ಜನ ಸಂಖ್ಯೆ ಇಳಿಕೆಯಾಗಿದೆ. ಮುಸ್ಲಿಮರ ಜನಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ತಿಳಿಸಿತ್ತು. ಚುನಾವಣೆಯ ಹೊತ್ತಲ್ಲೇ ಬಿಡುಗಡೆ ಮಾಡಿರುವ ವರದಿ ದೇಶದಾದ್ಯಂತ ವಿವಾದದ ಕಿಡಿ ಹೊತ್ತಿಸಿದೆ. ಈ ವರದಿ ಆಧರಿಸಿ ಮೇ 9, 2024ರಂದು ರಾತ್ರಿ 8:30ಕ್ಕೆ ಸುವರ್ಣ ನ್ಯೂಸ್ ಸುದ್ದಿ ಪ್ರಕಟಿಸಿತ್ತು. ಅಜಿತ್ ಹನುಮಕ್ಕನವರ್ ಸುದ್ದಿ ವಿಶ್ಲೇಷಣೆ ಮಾಡಿದ್ದರು. ಸುದ್ದಿಯಲ್ಲಿ ಹಿಂದೂ ಮುಸ್ಲಿಮರ ಜನಸಂಖ್ಯೆ ತೋರಿಸುವಾಗ ಹಿಂದೂಗಳ ಜನಸಂಖ್ಯೆಗೆ ಭಾರತದ ಧ್ವಜ ಮತ್ತು ಮುಸ್ಲಿಮರ ಜನಸಂಖ್ಯೆಗೆ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಲಾಗಿದೆ. ಈ ಕುರಿತು ಸಾಮಾಜಿಕ ಕಾರ್ಯಕರ್ತರಾಗಿರುವ ತನ್ವೀರ್ ಅಹ್ಮದ್ ಎಂಬವರು ದೂರು ದಾಖಲಿಸಿದ್ದರು. ಈ ದೂರಿನ ಮೇರೆಗೆ ಹೈಗ್ರೌಂಡ್ಸ್‌ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಇದಲ್ಲದೆ ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಕೋಮು ದ್ವೇಷವನ್ನು ಹರಡಿದ ಆರೋಪದಲ್ಲಿ ಅಸೋಸಿಯೇಷನ್‌ ಫಾರ್‌‌ ಪ್ರೊಟೆಕ್ಷನ್ ಸಿವಿಲ್‌ ರೈಟ್ಸ್ ಸಂಘಟನೆಯ ನಿಯೋಗವು (ಎಪಿಸಿಆರ್) ಬೆಂಗಳೂರು ಸಹಾಯಕ ಪೊಲೀಸ್ ಆಯುಕ್ತರಿಗೆ ದೂರು ನೀಡಿತ್ತು. ದೂರಿನಲ್ಲಿ ರಾಷ್ಟ್ರೀಯ ಧ್ವಜಗಳನ್ನು ಧಾರ್ಮಿಕ ಸಮುದಾಯಗಳಿಗೆ ರೂಪಕಗಳಾಗಿ ಬಳಸುವುದು ತಪ್ಪುದಾರಿಗೆಳೆಯುವಂತಿದೆ, ಆದ್ದರಿಂದ ಸುವರ್ಣ ನ್ಯೂಸ್‌ ಮತ್ತು ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿತ್ತು.

ಲೋಕಸಭಾ ಚುನಾವಣೆಯ ನಡುವೆ ಹಿಂದೂ ಜನಸಂಖ್ಯೆಯಲ್ಲಿ ಇಳಿಕೆ ಮತ್ತು ಮುಸ್ಲಿಂ ಜನಸಂಖ್ಯೆಯಲ್ಲಿ ಗಣನೀಯ ಹೆಚ್ಚಳವನ್ನು ಎತ್ತಿ ತೋರಿಸಿರುವ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯ ವರದಿಯು ರಾಷ್ಟ್ರದಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಪಾಪ್ಯುಲೇಶನ್ ಫೌಂಡೇಶನ್ ಆಫ್ ಇಂಡಿಯಾ (ಪಿಎಫ್‌ಐ), ಈ ವರದಿಯನ್ನು ವಿಭಜನೆಯನ್ನು ಸೃಷ್ಟಿಸಲು ಬಳಸುತ್ತಿರುವ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿತ್ತು.

ಇದನ್ನು ಓದಿ: ಮುಸ್ಲಿಂ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಕೆ: ಸುವರ್ಣ ನ್ಯೂಸ್, ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ದೂರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಿಯಾಂಕ ಗಾಂಧಿ

ಗಾಜಾದಲ್ಲಿ ಇಸ್ರೇಲ್‌ನ ‘ಜನಾಂಗೀಯ ಕೃತ್ಯಗಳು’ ನಿಲ್ಲಬೇಕು: ಪ್ರಿಯಾಂಕಾ ಗಾಂಧಿ

0
ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ದಾಳಿಯನ್ನು ಸ್ವೀಕಾರಾರ್ಹವಲ್ಲ ಮತ್ತು ಹತ್ಯಾಕಾಂಡ ಎಂದು ಹೇಳಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಇದನ್ನು ಜಗತ್ತಿನ ಪ್ರತಿಯೊಂದು ಸರ್ಕಾರ ಖಂಡಿಸಬೇಕು ಎಂದು ಶುಕ್ರವಾರ ಕರೆ...