Homeಕರ್ನಾಟಕ'ಅಮೇರಿಕಾದ ರೀತಿಯಲ್ಲಿ ಪ್ರತಿಭಟನೆ ಮಾಡಬೇಕು' ಎಂದ ಲೇಖಕ ಆಕಾರ್ ಪಟೇಲ್ ವಿರುದ್ದ FIR

‘ಅಮೇರಿಕಾದ ರೀತಿಯಲ್ಲಿ ಪ್ರತಿಭಟನೆ ಮಾಡಬೇಕು’ ಎಂದ ಲೇಖಕ ಆಕಾರ್ ಪಟೇಲ್ ವಿರುದ್ದ FIR

- Advertisement -
- Advertisement -

ಅಮೆರಿಕಾದ ‘ಬ್ಲಾಕ್ ಲೈಫ್ ಮ್ಯಾಟ್ಟೆರ್ಸ್’ ಆಂದೋಲನವನ್ನು ಹೋಲುವ ರೀತಿಯಲ್ಲಿ ಭಾರತದ ದಲಿತರು, ಮುಸ್ಲಿಮರು, ಆದಿವಾಸಿಗಳು, ಬಡವರು ಹಾಗೂ ಮಹಿಳೆಯರು ಪ್ರತಿಭಟನೆ ಮಾಡಬೇಕು ಎಂದು ಹೇಳಿಕೆ ನೀಡಿದ ಕಾರಣಕ್ಕೆ ಬರಹಗಾರ-ಪತ್ರಕರ್ತ ಹಾಗೂ ಅಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾದ ಮಾಜಿ ಮುಖ್ಯಸ್ಥರಾದ ಆಕಾರ್ ಪಟೇಲ್ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆಕಾರ್ ಅವರ ಟ್ವೀಟಿಗೆ ಸ್ವಯಂ ಪ್ರೇರಿತ ದೂರು ದಾಖಲಿಸಿರುವ ಜೆಸಿ ನಗರದ ಪೊಲೀಸರು, ಅಮೆರಿಕಾದಲ್ಲಿ ನಡೆದ ರೀತಿಯ ಪ್ರತಿಭಟನೆ ಮಾಡುವಂತೆ ಕರೆ ಕೊಟ್ಟಿರುವ ಅವರು ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮೇ 25 ರಂದು ಅಮೆರಿಕಾದ ಮಿನಿಯಾಪೊಲಿಸ್ ನಲ್ಲಿ ಕರಿಯ ಜನಾಂಗದ ಫ್ಲಾಯ್ಡ್ ಎಂಬ ವ್ಯಕ್ತಿಯನ್ನು ಪೊಲೀಸ್ ಒಬ್ಬರು ಕತ್ತಿನ ಮೇಲೆ ಮೊಣಕಾಲಿಟ್ಟು ಕೊಂದು ಹಾಕಿದ್ದರು. ಇದನ್ನು ವಿರೋಧಿಸಿ ಅಮೆರಿಕಾದಾದ್ಯಂತ ಭಾರಿ ಪ್ರತಿಭಟನೆಗಳು ಭುಗಿಲೆದ್ದಿವೆ.

ಆಕಾರ್ ಅವರ ಟ್ವಿಟ್ಟರ್ ಪೋಸ್ಟ್ ನಲ್ಲಿ “ನಮಗೂ ಇಂತದೇ ಪ್ರತಿಭಟನೆಗಳು ಬೇಕು. ದಲಿತ, ಮುಸ್ಲಿಂ, ಆದಿವಾಸಿ, ಬಡವ ಹಾಗೂ ಮಹಿಳೆಯರ ಕಡೆಯಿಂದ, ಆಗ ವಿಶ್ವ ಗಮನಿಸುತ್ತದೆ. ಪ್ರತಿಭಟನೆ ಕೂಡಾ ಕರಕುಶಲ” ಎಂದು ಹೇಳಿದ್ದಾರೆ.

“ಎಫ್‌ಐಆರ್‌ನ ವಿಷಯಗಳು ನನಗೆ ತಿಳಿದಿಲ್ಲ. ಎಫ್‌ಐಆರ್ ದಾಖಲಿಸಲಾಗಿದೆ ಎಂದು ನಾನು ಮಾಧ್ಯಮಗಳಲ್ಲಿ ನೋಡುತ್ತಿದ್ದೇನೆ. ನಾನು ಹೇಳಿರುವುದರಲ್ಲಿ ಯಾವುದೇ ಅಪರಾಧವಿಲ್ಲ, ಅವರು ಯಾಕೆ ಕೇಸು ದಾಖಲಿಸಿದರು ಎಂದು ನನಗೆ ತಿಳಿದಿಲ್ಲ.” ಎಂದು ಆಕಾರ್ ಪಟೇಲ್ ಹೇಳಿದ್ದಾರೆಂದು ‘ದಿ ಪ್ರಿಂಟ್’ ವರದಿ ಮಾಡಿದೆ.

ಅಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾ ಆಕಾರ್ ಪಟೇಲ್ ಅವರನ್ನು ಬೆಂಬಲಿಸಿ “ದೇಶದಲ್ಲಿ ಭಿನ್ನಾಭಿಪ್ರಾಯದ ಹಕ್ಕನ್ನು ಹೇಗೆ ಅಪರಾಧೀಕಣ ಮಾಡಲಾಗುತ್ತಿದೆ ಎಂಬುದಕ್ಕೆ ಪೊಲೀಸರ ಈ ಎಫ್ಐಆರ್ ಮತ್ತೊಂದು ಉದಾಹರಣೆಯಾಗಿದೆ.” ಎಂದು ಹೇಳಿದೆ.


ಓದಿ: ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ಪೊಲೀಸರ ಪ್ರಕಾರ ಪ್ರತಿಭಟನೆಯ ಅರ್ಥ “ಶಾಂತಿ ಕದಡುವ ಯತ್ನ”. ವಾಹ್! ಎಂತೆಂತಹ ಪ್ರತಿಬಾವಂತರಿದ್ದಾರೆ ನಮ್ಮ ಪೊಲೀಸ್ ಇಲಾಖೆಯಲ್ಲಿ.
    ಆಕಾರ್ ಪಟೇಲ್ ವಿರುದ್ಧ ಎಫ್.ಐ.ಆರ್. ದಾಕಲಿಸಿರುವುದು ಕಂಡನಾರ್ಹ. ಈ ಎಫ್.ಐ.ಆರ್. ಅನ್ನು ಈ ಕೂಡಲೇ ರದ್ದುಪಡಿಸಬೇಕು.
    ಮಾನವತೆಯ ಪರ ಇರುವವರ ಬಾಯಿ ಮುಚ್ಚಿಸಲು ಮಾಡುತ್ತಿರುವ ಈ ಸರ್ವಾಧಿಕಾರಿ ದೋರಣೆಗೆ ದಿಕ್ಕಾರ.

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...