Homeಕರ್ನಾಟಕಸಂತ್ರಸ್ತೆ ಹೆಸರು ಬಹಿರಂಗ : ಶ್ರೀರಾಮುಲು ವಿರುದ್ಧ ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್

ಸಂತ್ರಸ್ತೆ ಹೆಸರು ಬಹಿರಂಗ : ಶ್ರೀರಾಮುಲು ವಿರುದ್ಧ ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್

- Advertisement -
- Advertisement -

ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಹೆಸರು ಬಹಿರಂಗಪಡಿಸಿದ ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ಬಳ್ಳಾರಿ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಮತ್ತು ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ಭಾನುವಾರ (ಜ.18) ಎಫ್‌ಐಆರ್‌ ದಾಖಲಾಗಿದೆ ಎಂದು ವರದಿಯಾಗಿದೆ.

ಬಳ್ಳಾರಿಯಲ್ಲಿ ಜ. 1ರಂದು ನಡೆದಿದ್ದ ಘರ್ಷಣೆ, ಕೊಲೆ ಖಂಡಿಸಿ ಬಿಜೆಪಿಯು ನಗರದ ಎಪಿಎಂಸಿ ಪ್ರಾಂಗಣದಲ್ಲಿ ಶನಿವಾರ (ಜ.17) ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀರಾಮುಲು ಲೈಂಗಿಕ ದೌರ್ಜನ್ಯ ಸಂತ್ರಸ್ತೆಯೊಬ್ಬರ ಗುರುತು ಬಹಿರಂಗಪಡಿಸಿದ್ದರು.

“ಶಾಸಕ ಭರತ್‌ ರೆಡ್ಡಿ ಯುವಕರನ್ನು ಯಾವ ಹಂತಕ್ಕೆ ಮಾದಕ ವ್ಯಸನಿಗಳನ್ನಾಗಿ ಮಾಡಿದ್ದಾರೆ ಎಂದರೆ, ನಾಲ್ಕೈದು ಮಂದಿ ವಿದ್ಯಾರ್ಥಿಗಳು ಡ್ರಗ್ಸ್‌ ತೆಗೆದುಕೊಂಡು ನಗರದ ಶಾಲೆಯೊಂದರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ್ದಾರೆ” ಎಂದಿದ್ದರು. ಮುಂದುವರಿದು, ಸಂತ್ರಸ್ತ ವಿದ್ಯಾರ್ಥಿನಿಯ ಹೆಸರು, ಶಾಲೆ, ತರಗತಿ ಮತ್ತು ಜಾತಿಯನ್ನೂ ಬಹಿರಂಗಪಡಿಸಿದ್ದರು.

ಈ ಹಿನ್ನೆಲೆ, ಭಾನುವಾರ ನಗರದ ಎಪಿಎಂಸಿ ಠಾಣೆ ಇನ್‌ಸ್ಪೆಕ್ಟರ್‌ ನೀಡಿದ ದೂರು ಆಧರಿಸಿ ಮಹಿಳಾ ಠಾಣೆ ಪೊಲೀಸರು ಪೊಕ್ಸೊ ಕಾಯ್ದೆಯ ಕಲಂ 23(1) (2) ಮತ್ತು ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯ ಸೆಕ್ಷನ್ 74ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...