Homeಮುಖಪುಟಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಉಪ್ಪಿನಂಗಡಿ ಅರಣ್ಯ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿರುವ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ. ಈ ಕುರಿತು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದು,  ಶಾಸಕ ಹರೀಶ್‌ ಪೂಂಜಾ ವಿರುದ್ಧ ಐಪಿಸಿ 1860(U/s-143,353,504,149)ರಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬೆಳ್ತಂಗಡಿಯ ಕಳೆಂಜ ಗ್ರಾಮದ ಸರ್ವೇ ನಂಬ್ರ 309ರಲ್ಲಿ ಲೋಲಾಕ್ಷ ಗೌಡ ಎಂಬವರು ಮೀಸಲು ಅರಣ್ಯ ಪ್ರದೇಶವನ್ನು ಅತಿಕ್ರಮಣ ಮಾಡಿ ಮನೆ ನಿರ್ಮಿಸುತ್ತಿದ್ದರು. ಇಲಾಖೆಯ ಅಧಿಕಾರಿಗಳ ಸೂಚನೆಯಂತೆ ಅ.9ರಂದು ಬೆಳಗ್ಗೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಮನೆ ನಿರ್ಮಿಸಲು ಫೌಂಡೇಶನ್ ಹಾಕಿದ್ದು ಕಂಡು ಬಂದಿದೆ. ಅದನ್ನು ತೆರವು ಮಾಡುವಂತೆ ಲೋಲಾಕ್ಷ ಗೌಡರಿಗೆ ಸೂಚಿಸಿದೆವು. ಆದರೆ ಅವರು ತೆರವುಗೊಳಿಸದ ಕಾರಣ ಮನೆ ಫೌಂಡೇಶನನ್ನು ಅರಣ್ಯ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿ ಮುಖಾಂತರ ತೆರವುಗೊಳಿಸಲು ಮುಂದಾದೆವು. ಈ ವೇಳೆ ಶಾಸಕ ಹರೀಶ್ ಪೂಂಜಾ ತಮ್ಮ ಬೆಂಬಲಿಗರೊಂದಿಗೆ ಬಂದು ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅರಣ್ಯಾಧಿಕಾರಿ ಜೊತೆ ವಾಗ್ವಾದದ ವಿಡಿಯೋ ಕೂಡ ವೈರಲ್‌ ಆಗಿತ್ತು. ಇದೀಗ ಘಟನೆಗೆ ಸಂಬಂಧಿಸಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಇದನ್ನು ಓದಿ; ಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಬಡವರೂ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ, ಮುಸ್ಲಿಮರ ಬಗ್ಗೆ ಮಾತ್ರ ಏಕೆ ಮಾತನಾಡುತ್ತಾರೆ..’; ಪ್ರಧಾನಿ ಮೋದಿ...

0
'ದೇಶದ ಬಡವರು ಅವರ ಆರ್ಥಿಕ ಪರಿಸ್ಥಿತಿಯಿಂದಾಗಿ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಮುಸ್ಲಿಮರ ಬಗ್ಗೆ ಮಾತನಾಡುತ್ತಿದ್ದಾರೆ' ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಟೀಕಿಸಿದ್ದಾರೆ. 'ಪ್ರತಿಪಕ್ಷಗಳ ಇಂಡಿಯಾ...