Homeಕರ್ನಾಟಕಬೋವಿ ಸಮುದಾಯಕ್ಕೆ ಅವಮಾನ ಆರೋಪ: ಬಿಗ್ ಬಾಸ್ ಸ್ಪರ್ಧಿ ತನಿಷಾ ವಿರುದ್ಧ ಪ್ರಕರಣ ದಾಖಲು

ಬೋವಿ ಸಮುದಾಯಕ್ಕೆ ಅವಮಾನ ಆರೋಪ: ಬಿಗ್ ಬಾಸ್ ಸ್ಪರ್ಧಿ ತನಿಷಾ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಕಲರ್ಸ್ ಕನ್ನಡ ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ತನಿಷಾ ಕುಪ್ಪುಂಡ ವಿರುದ್ಧ ಬೋವಿ ಜನಾಂಗದ ಬಗ್ಗೆ ಅವಮಾನಕಾರಿ ಪದ ಬಳಕೆ ಮಾಡಿದ್ದಾರೆ ಎಂದು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಖಿಲ ಕರ್ನಾಟಕ ಬೋವಿ ಸಮಾಜದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪಿ. ಪದ್ಮಾ ಅವರು ತನಿಷಾ ಕುಪ್ಪುಂಡ ವಿರುದ್ಧ ದೂರನ್ನು ನೀಡಿದ್ದು, ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕುಂಬಳಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಿಗ್ ಬಾಸ್ ಸ್ಪರ್ಧಿ ಡ್ರೋಣ್ ಪ್ರತಾಪ್ ಜೊತೆ ತನಿಷಾ ಅವರು ಮಾತನಾಡುವಾಗ ಬೋವಿ ಸಮುದಾಯದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ಸಮುದಾಯದ ಭಾವನೆಗೆ ಧಕ್ಕೆ ತಂದಿದ್ದು, ಅವರ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು ಎಂದು ಪದ್ಮಾ ಅವರು ದೂರಿನಲ್ಲಿ ಒತ್ತಾಯಿಸಿದ್ದರು.

ನ.8ರಂದು ರಾತ್ರಿ ಕಲರ್ಸ್ ಕನ್ನಡ ಚಾನಲ್‌ ನಲ್ಲಿ ಪ್ರಸಾರವಾದ ಬಿಗ್‌ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ತನಿಷಾ ಕುಪ್ಪಂಡ ಡ್ರೋನ್‌ ಪ್ರತಾಪ್‌ ಅವರ ಬಗ್ಗೆ ಮಾತನಾಡುವಾಗ ಭೋವಿ ಜನಾಂಗದ ಕುರಿತು ಅವಹೇಳನಕಾರಿಯಾಗಿ ಮಾತನಾಡಿ ‘ಒಡ್ಡನೋ ನೀನು ಒಡ್ಡನ ತರ ಆಕ್ಟ್ ಮಾಡ್ತಿದೀಯಾ’ ಎಂಬ ಪದ ಬಳಕೆ ಮಾಡಿದ್ದಾರೆ. ಇವರು ಕರ್ನಾಟಕ ರಾಜ್ಯದ ಎಲ್ಲಾ ಭೋವಿ ಸಮುದಾಯದ ಜನಾಂಗವನ್ನು ಅವಮಾನ  ಮಾಡಿದ್ದಾರೆ. ತನಿಶಾ ಕುಪ್ಪಂಡರವರಿಗೆ ಭೋವಿ ಜನಾಂಗದ ಕುರಿತು ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಇವರ ಪರಿಶಿಷ್ಟ ಜಾತಿಯವರು ಎಂದು ತಿಳಿದು ಉದ್ದೇಶಪೂರ್ವಕವಾಗಿ ಅವಮಾನಕರವಾಗಿ ಮಾತನಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಬಿಗ್‌ ಬಾಸ್‌ ಕನ್ನಡ ಸೀಸನ್‌ 10ರ ಸ್ಪರ್ಧಿ ವರ್ತೂರು ಸಂತೋಷ್‌ನ್ನು ಈ ಮೊದಲು ಹುಲಿ ಉಗುರಿನ ಪೆಂಡೆಂಟ್‌ ಧರಿಸಿದ್ದ ಕಾರಣಕ್ಕಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ಒಂದು ವಾರಗಳ ಕಾಲ ಜೈಲಿಗೆ ಕಳುಹಿಸಿದ್ದರು. ಇದೀಗ ಬಿಗ್‌ ಬಾಸ್‌ನ ಇನ್ನೋರ್ವ ಸ್ಪರ್ಧಿ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: ಉಡುಪಿ: ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ; ಆರೋಪಿ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...