Homeಕರ್ನಾಟಕಸುಳ್ಳು ಪೋಸ್ಟ್‌: ಬಿಜೆಪಿ ಕಾರ್ಯಕರ್ತೆ ಶಕುಂತಲಾ ವಿರುದ್ಧ ಪ್ರಕರಣ ದಾಖಲು

ಸುಳ್ಳು ಪೋಸ್ಟ್‌: ಬಿಜೆಪಿ ಕಾರ್ಯಕರ್ತೆ ಶಕುಂತಲಾ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಬೆಂಗಳೂರಿನ ಲುಲು ಶಾಪಿಂಗ್‌ ಮಾಲ್‌ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನದ ಬಾವುಟ ಹಾರಿಸಿದ್ದಾರೆ ಎಂದು ಸುಳ್ಳು ಪೋಸ್ಟ್‌ ಹಂಚಿಕೊಂಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್‌ ವಿರುದ್ಧ ಪೊಲೀಸರು ಗುರುವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಕುಂತಲಾ ನಟರಾಜ್‌, ಎಕ್ಸ್‌ ಖಾತೆಯಲ್ಲಿ ಹಾಕಿದ ಪೋಸ್ಟ್‌ನಲ್ಲಿ ಬೆಂಗಳೂರಿನ ಲುಲು ಶಾಪಿಂಗ್‌ ಮಾಲ್‌ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ ಎಂದು ಸುಳ್ಳು ಪೋಸ್ಟ್‌ ಹಂಚಿಕೊಂಡಿದ್ದರು. ಬಾಯ್ಕಾಟ್ ಲುಲುಮಾಲ್‌ ಎಂದು ಬರೆದಕೊಂಡಿದ್ದರು. ಪೋಸ್ಟ್‌ನ್ನು ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಟ್ಯಾಗ್‌ ಮಾಡಿದ್ದರು.

ಶಕುಂತಲಾ ನಟರಾಜ್‌ ಸುಳ್ಳು ಪೋಸ್ಟ್‌ ಹಾಕಿದ್ದಾರೆ ಮತ್ತು ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದಾರೆ ಎಂದು ಐಪಿಸಿ 153 (ಬಿ) ಅಡಿ ಇಲ್ಲಿಯ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಫೋಟೊವು ಉದ್ದೇಶಪೂರ್ವಕವಾಗಿ ತೊಂದರೆ ಸೃಷ್ಟಿಸುವುದಾಗಿದೆ ಮತ್ತು ಎಡಿಟ್ ಮಾಡಿದ್ದಾಗಿದೆ. ಪೋಸ್ಟ್ ಮೂಲಕ ಜನರನ್ನು ಕೆರಳಿಸುವ ಯತ್ನ ಮಾಡಲಾಗುತ್ತಿದೆ ಎಂದು ಪೊಲೀಸರು ಕಂಡುಕೊಂಡಿದ್ದಾರೆ ಎನ್ನಲಾಗಿದೆ.

ಈ ಹಿಂದೆ ಸಿಎಂ ಸಿದ್ದರಾಮಯ್ಯ ವಿರುದ್ಧ ಶಕುಂತಲಾ ಅವಹೇಳನಕಾರಿ ಪೋಸ್ಟ್‌ ಹಾಕಿದ್ದರು. ಪ್ರಕರಣದಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದರು.

ಇದನ್ನು ಓದಿ: ದಸರಾ ಉತ್ಸವದಲ್ಲಿ ಕಮಿಷನ್‌ ಕಾಟ: ಸರೋದ್‌ ವಾದಕ ಪಂ.ರಾಜೀವ್‌ ಬಳಿ ಪರ್ಸೆಂಟೇಜ್‌ಗೆ ಬೇಡಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...