Homeಮುಖಪುಟಅಪ್ರಾಪ್ತ ಪುತ್ರನಿಂದ ಮತ ಚಲಾಯಿಸಿದ ಬಿಜೆಪಿ ನಾಯಕ: ಎಫ್‌ಐಆರ್ ದಾಖಲು, ಬೂತ್ ಅಧಿಕಾರಿ ಅಮಾನತು

ಅಪ್ರಾಪ್ತ ಪುತ್ರನಿಂದ ಮತ ಚಲಾಯಿಸಿದ ಬಿಜೆಪಿ ನಾಯಕ: ಎಫ್‌ಐಆರ್ ದಾಖಲು, ಬೂತ್ ಅಧಿಕಾರಿ ಅಮಾನತು

- Advertisement -
- Advertisement -

ಅಪ್ರಾಪ್ತ ಪುತ್ರನಿಂದ ಮತ ಚಲಾವಣೆ ಮಾಡಿಸಿದ್ದಲ್ಲದೆ, ಅದನ್ನು ವಿಡಿಯೋ ಮಾಡಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ಮಧ್ಯಪ್ರದೇಶದ ಭೋಪಾಲ್‌ನ ಬಿಜೆಪಿ ನಾಯಕ ವಿನಯ್ ಮೆಹರ್ ವಿರುದ್ದ ಎಫ್‌ಐಆರ್ ದಾಖಲಾಗಿದೆ. ಮತಗಟ್ಟೆಯ ಅಧಿಕಾರಿ ಸಂದೀಪ್ ಸೈನಿ ಅವರನ್ನು ಅಮಾನತುಗೊಳಿಸಲಾಗಿದೆ.

ಮಂಗಳವಾರ (ಮೇ 7) ನಡೆದ 3ನೇ ಹಂತದ ಮತದಾನದ ವೇಳೆ, ಭೋಪಾಲ್‌ನ ಬೆರಾಸಿಯಾ ಮತಗಟ್ಟೆಯಲ್ಲಿ ತಮ್ಮ ಪುತ್ರನ ಮೂಲಕ ಮೆಹರ್ ಅವರು ಮತ ಚಲಾವಣೆ ಮಾಡಿಸಿದ್ದರು. ಅದನ್ನು ವಿಡಿಯೋ ಮಾಡಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದರು. ವಿಡಿಯೋ ವೈರಲ್ ಆಗಿದ್ದು, ಆಕ್ಷೇಪಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆ, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

14 ಸೆಕೆಂಡುಗಳ ವಿಡಿಯೋ ಹಂಚಿಕೊಂಡು, ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರ ಮಾಧ್ಯಮ ಸಲಹೆಗಾರ ಪಿಯೂಷ್ ಬಾಬೆಲೆ, “ಬಿಜೆಪಿಯ ಜಿಲ್ಲಾ ಪಂಚಾಯತ್ ಸದಸ್ಯ ವಿನಯ್ ಮೆಹರ್ ಅವರು ತಮ್ಮ ಅಪ್ರಾಪ್ತ ಮಗ ಮತ ಚಲಾಯಿಸುವಂತೆ ಮಾಡಿದ್ದಾರೆ. ಅದನ್ನು ವಿಡಿಯೋ ಮಾಡಿ, ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಅವರ ವಿರುದ್ಧ ಏನಾದರು ಕ್ರಮ ಕೈಗೊಳ್ಳುತ್ತಾರಾ” ಎಂದು ಪ್ರಶ್ನಿಸಿದ್ದರು.

ವಿಡಿಯೋ ರೆಕಾರ್ಡ್‌ ಮಾಡಲು ಮತಗಟ್ಟೆಗೆ ಮೊಬೈಲ್ ಕೊಂಡೊಯ್ಯಲು ಹೇಗೆ ಅನುಮತಿ ನೀಡಲಾಯಿತು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಘಟನೆ ಕುರಿತು ಪರಿಶೀಲಿಸುವುದಾಗಿ ಬಿಜೆಪಿ ಭರವಸೆ ನೀಡಿದೆ. ದಿ ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿರುವ ಮಧ್ಯ ಪ್ರದೇಶ ಬಿಜೆಪಿ ವಕ್ತಾರ ನರೇಂದ್ರ ಸಲೂಜಾ ಅವರು “ನಾವು ಘಟನೆಯನ್ನು ಪರಿಶೀಲಿಸುತ್ತೇವೆ. ಮತ ಹಾಕಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡುತ್ತೇವೆ. ಅಕ್ರಮ ನಡೆದಿದ್ದರೆ ಕ್ರಮ ಜರುಗಿಸಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ : ಮತಗಟ್ಟೆಗೆ ನುಗ್ಗಿ ನಕಲಿ ಮತದಾನ, ನೇರ ಪ್ರಸಾರ: ಇಬ್ಬರು ಬಿಜೆಪಿಗರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...