Homeಕರ್ನಾಟಕಆ್ಯನಿಮೇಟೆಡ್ ವಿಡಿಯೋ ಹಂಚಿಕೆ: ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ಆ್ಯನಿಮೇಟೆಡ್ ವಿಡಿಯೋ ಹಂಚಿಕೆ: ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ಕಾಂಗ್ರೆಸ್ ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲಿದೆ ಎಂಬ ಸಂದೇಶ ಸಾರುವ ಆ್ಯನಿಮೇಟೆಡ್ ವಿಡಿಯೋ ಪೋಸ್ಟ್ ಮಾಡಿರುವುದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ದ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಮೇ 4, 2024ರಂದು ಬಿಜೆಪಿ ರಾಜ್ಯ ಘಟಕ ಮೀಸಲಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ಆ್ಯನಿಮೇಟೆಡ್ ವಿಡಿಯೋ ಪೋಸ್ಟ್ ಮಾಡಿತ್ತು. ಇದರ ವಿರುದ್ದ ಭಾರೀ ಖಂಡನೆ ವ್ಯಕ್ತವಾಗಿತ್ತು.

ವಿಡಿಯೋ ಪೋಸ್ಟ್ ಮಾಡಿರುವುದರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ದ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

“ಎಚ್ಚರ..ಎಚ್ಚರ..ಎಚ್ಚರ.. ಎಂಬ ತಲೆ ಬರಹದಲ್ಲಿ ಬಿಜೆಪಿ ವಿಡಿಯೋವನ್ನು ಹಂಚಿಕೊಂಡಿದ್ದು, ಇದರಲ್ಲಿ ರಾಹುಲ್‌ ಗಾಂಧಿ ಮತ್ತು ಸಿದ್ದರಾಮಯ್ಯ ಅವರ ಕಾರ್ಟೂನ್‌ಗಳಿವೆ. ಈ ಇಬ್ಬರು ಎಸ್ಸಿ,ಎಸ್‌ಟಿ, ಒಬಿಸಿ ಎಂದು ಬರೆದ ಮೊಟ್ಟೆ ಬಳಿ ಮುಸ್ಲಿಂ ಎಂದು ಬರೆದ ದೊಡ್ಡ ಮೊಟ್ಟೆಯನ್ನು ತಂದು ಇಡುತ್ತಾರೆ. ಈ ಮೊಟ್ಟೆಯಿಂದ ಹೊರಬಂದ ಮುಸ್ಲಿಂ ಎಂದು ಬರೆದ ಹಕ್ಕಿಗೆ ರಾಹುಲ್‌ ಗಾಂಧಿ ಆಹಾರವನ್ನು ತಂದು ಸುರಿಯುವುದು, ಬಳಿಕ ಎಸ್ಸಿ, ಎಸ್‌ಟಿ ಒಬಿಸಿ ಎಂದು ಬರೆದ ಹಕ್ಕಿಯನ್ನು ಮುಸ್ಲಿಂ ಎಂದು ಬರೆದ ಹಕ್ಕಿ ಹೊರದಬ್ಬುವ ದ್ವೇಷ ಪೂರಿತ ಅಂಶಗಳು ಆ್ಯನಿಮೇಟೆಡ್ ವಿಡಿಯೋದಲ್ಲಿ  ಇದೆ.

ಇದನ್ನೂ ಓದಿ : ಮುಸ್ಲಿಮರ ಬಗ್ಗೆ ಅವಹೇಳನಾಕಾರಿಯಾಗಿ ಅನಿಮೇಟೆಡ್ ವೀಡಿಯೊ ಹಂಚಿಕೊಂಡ ಬಿಜೆಪಿ: ‘ಎಕ್ಸ್‌’ ಬಳಕೆದಾರರು ತರಾಟೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read