Homeಕರ್ನಾಟಕಹಿಂದೂ ದೇವತೆಗಳ ಅವಹೇಳನ: ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಎಫ್‌ಐಆರ್

ಹಿಂದೂ ದೇವತೆಗಳ ಅವಹೇಳನ: ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಎಫ್‌ಐಆರ್

- Advertisement -
- Advertisement -

ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಶಾಸಕ ನಿರಾಣಿ ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪೋಸ್ಟ್‌ನ ಸ್ಕ್ರೀನ್‌ಶಾಟ್ ವಾಟ್ಸ್ಯಾಪ್ ಗ್ರೂಪ್‌ನಲ್ಲಿ ವೈರಲ್ ಆಗಿತ್ತು. ಇದಾದ ನಂತರ, ರಾಜ್ ಕುಮಾರ್ ಕಟುಬ ಎಂಬುವವರು ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಜುಲೈ ತಿಂಗಳಲ್ಲಿ ನ್ಯಾಯಾಲಯದ ಮೊರೆಹೋಗಿದ್ದರು. ಪ್ರಕರಣ ಆಲಿಸಿದ ಸಿಸಿಎಚ್ 82 ನ್ಯಾಯಾಲಯವು ಡಿಸಂಬರ್ 26 ರಂದು ಎಫ್‌ಐಆರ್ ದಾಖಲಿಸುವಂತೆ ಕೊಡಿಗೇಹಳ್ಳಿ ಪೊಲೀಸರಿಗೆ ಸೂಚನೆ ನೀಡಿತ್ತು.

ಹಿಂದೂ ದೇವತೆಗಳ ಅವಹೇಳನ: ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಎಫ್‌ಐಆರ್

ಇದನ್ನೂ ಓದಿ: ಹಿಂದೂ ದೇವರುಗಳ ಅವಹೇಳನದ ವಾಟ್ಸಾಪ್ ಸಂದೇಶ: ಮುರುಗೇಶ್ ನಿರಾಣಿ ಕ್ಷಮೆಯಾಚನೆ

ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 153A, 294 (A), 295 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆ ಸಾಮಾಜಿಕ ಮಾಧ್ಯಮಗಳಲ್ಲಿ ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿಯಾದ ಪೋಸ್ಟ್‌ ಅನ್ನು ಹಂಚಿಕೊಂಡಿದ್ದರು. ನಂತರ ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರುಗಳ ಬಗ್ಗೆ ಅವಹೇಳನಕಾರಿ ಪೊಸ್ಟ್‌ ಮಾಡಿರುವ ಶಾಸಕ ಮುರುಗೇಶ ನಿರಾಣಿಯನ್ನು ಬಿಜೆಪಿಯಿಂದ ಉಚ್ಚಾಟಿಸುವಂತೆ ಶ್ರೀರಾಮ ಸೇನೆ ಆಗ್ರಹಿಸಿತ್ತು.


ಇದನ್ನೂ ಓದಿ: ಅವ್ಯವಹಾರದ ದಾಖಲೆಗಳು ಮುರುಗೇಶ್ ನಿರಾಣಿ ಪೆನ್‌ಡ್ರೈವ್‌ನಲ್ಲಿವೆಯಂತೆ, ಕಲೆಕ್ಟ್ ಮಾಡಿಕೊಳ್ಳಿ: ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...