Homeಮುಖಪುಟಸರಸ್ವತಿ ಬದಲು ಸಾವಿತ್ರಿಭಾಯಿ ಫುಲೆ ವಿದ್ಯಾದೇವಿ ಎಂದ ದಲಿತ ಶಿಕ್ಷಕಿಯ ವಿರುದ್ಧ ಎಫ್‍ಐಆರ್

ಸರಸ್ವತಿ ಬದಲು ಸಾವಿತ್ರಿಭಾಯಿ ಫುಲೆ ವಿದ್ಯಾದೇವಿ ಎಂದ ದಲಿತ ಶಿಕ್ಷಕಿಯ ವಿರುದ್ಧ ಎಫ್‍ಐಆರ್

- Advertisement -
- Advertisement -

ನಿಜವಾದ ವಿದ್ಯಾದೇವತೆ ಸರಸ್ವತಿ ಅಲ್ಲ. ಸಾವಿತ್ರಿಭಾಯಿ ಫುಲೆ ಎಂದು ವಾದಿಸಿದ ರಾಜಸ್ಥಾನದ ಸರ್ಕಾರಿ ಶಾಲೆಯ ದಲಿತ ಶಿಕ್ಷಕಿಯೊಬ್ಬರ ವಿರುದ್ಧ ಎಫ್‍ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.

ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆ ವೇಳೆ ರಾಜಸ್ಥಾನದ ನಹರ್‌ಗಢದ ಲಕ್ಡಾಯಿ ಸರ್ಕಾರಿ ಶಾಲೆಯಲ್ಲಿ ಸರಸ್ವತಿ ಪೂಜೆ ಮಾಡುವಂತೆ ಗುಂಪೊಂದು ಆಗ್ರಹಿಸಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಶಿಕ್ಷಕಿ ಹೇಮಲತಾ ಬಿರ್ವಾ, “ಮಕ್ಕಳ ವಿದ್ಯಾದೇವಿ ಸಾವಿತ್ರಿಭಾಯಿ ಫುಲೆಯೇ ಹೊರತು ಸರಸ್ವತಿ ಅಲ್ಲ” ಎಂದಿದ್ದರು. ಇದನ್ನು ವಿರೋಧಿಸಿದ ಗುಂಪನ್ನು ಧೈರ್ಯವಾಗಿ ಎದುರಿಸಿದ ಶಿಕ್ಷಕಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿದ್ದರು.

ಶಿಕ್ಷಕಿ ಹೇಮಲತಾ ಅವರ ವಿಡಿಯೋ ವೈರಲ್‌ ಅಗಿ ಹಲವು ದಲಿತ ಮತ್ತು ಹಿಂದುಳಿದ ಸಮುದಾಯಗಳ ಸಂಘಟನೆಗಳು ಅಕೆಗೆ ಬೆಂಬಲ ವ್ಯಕ್ತಪಡಿಸಿದ್ದವು. ಬಲಪಂಥೀಯ ಸಂಘಟನೆಯವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಶಿಕ್ಷಕಿಯ ನಡೆಯಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆಪಾದಿಸಿದ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದರು. ಇದೀಗ ಎರಡೂ ಕಡೆಯವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವರದಿಗಳ ಪ್ರಕಾರ, ಶಾಲೆಯಲ್ಲಿ ಗಣರಾಜ್ಯೋತ್ಸವದಂದು ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಮಹಾತ್ಮಗಾಂಧಿಯ ಪೋಟೋಗಳನ್ನು ವೇದಿಕೆಯಲ್ಲಿ ಇರಿಸಲಾಗಿತ್ತು. ಇದರ ಜೊತೆ ಸರಸ್ವತಿ ಫೋಟೋ ಕೂಡ ಇಡುವಂತೆ ಇಬ್ಬರು ಶಿಕ್ಷಕರು ಬಲವಂತಪಡಿಸಿದ್ದರು. ಆದರೆ, ಇದಕ್ಕೆ ಹೇಮಲತಾ ನಿರಾಕರಿಸಿದ್ದರು. ಕೆಲ ಗ್ರಾಮಸ್ಥರನ್ನು ಗುಂಪು ಸೇರಿಸಿದ ಆ ಶಿಕ್ಷಕರು ಹೇಮಲತಾ ಮೇಲೆ ಒತ್ತಡ ತರುವ ಪ್ರಯತ್ನ ಮಾಡಿದರು ಎನ್ನಲಾಗಿದೆ. ಈ ಕುರಿತ ವಿಡಿಯೋ ವೈರಲ್ ಆಗಿತ್ತು.

ಶಿಕ್ಷಕಿಯ ನಡೆಯಿಂದ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಸ್ಥಳೀಯ ಬಲಪಂಥೀಯ ಗುಂಪು ದೂರು ದಾಖಲಿಸಿದೆ. ಈ ದೂರು ಆಧರಿಸಿ ಶಿಕ್ಷಕಿ ಹೇಮಲತಾ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಇತ್ತ ಶಿಕ್ಷಕಿ ಕೂಡ ಪ್ರತಿದೂರು ನೀಡಿದ್ದು, ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದ ನನಗೆ ಗ್ರಾಮಸ್ಥರು ಕಿರುಕುಳ ನೀಡಿದ್ದಾರೆ. ಜಾತಿ ಆಧಾರಿತ ತಾರತಮ್ಯ ಮಾಡಿದ್ದಾರೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಜಾತಿ ಸೂಚಕಗಳನ್ನು ಬಳಸಿ ನಿಂದಿಸಿ ನನ್ನ ಉದ್ಯೋಗ ಭದ್ರತೆಗೆ ಬೆದರಿಕೆ ಹಾಕಿದ್ದಾರೆ. ಶಿಕ್ಷಕರ ಮೂಲಭೂತ ಹಕ್ಕಿನ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಮಹಿಳೆಯರ ಗೌರವಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಯಾವುದೇ ಶಿಕ್ಷೆಯಾಗಿಲ್ಲ, ಜಾಮೀನೂ ಇಲ್ಲ: ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ಶರ್ಜೀಲ್ ಇಮಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...