Homeಮುಖಪುಟಹೈದರಾಬಾದ್: EFL ವಿವಿಯಲ್ಲಿ 'ಇಂಕ್ವಿಲಾಬ್ ಝಿಂದಾಬಾದ್' ಘೋಷಣೆಗೆ ವಿರೋಧ; ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್‌

ಹೈದರಾಬಾದ್: EFL ವಿವಿಯಲ್ಲಿ ‘ಇಂಕ್ವಿಲಾಬ್ ಝಿಂದಾಬಾದ್’ ಘೋಷಣೆಗೆ ವಿರೋಧ; ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಹೈದರಾಬಾದ್‌ನ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯದ (ಇಎಫ್‌ಎಲ್‌ಯು) ಆಡಳಿತದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ 17 ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದಲ್ಲದೆ ಕಾಲೇಜಿನಲ್ಲಿ ‘ಇಂಕ್ವಿಲಾಬ್ ಝಿಂದಾಬಾದ್’ ಘೋಷಣೆಗೆ ಆಡಳಿತವು ವಿರೋಧಿಸಿದೆ.

ಇಎಫ್‌ಎಲ್‌ಯು ರಿಜಿಸ್ಟಾರ್ ನರಸಿಂಹರಾವ್ ಕೇದಾರಿ ಅವರ ದೂರಿನ ಮೇರೆಗೆ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.  ಆಡಳಿತಾತ್ಮಕ ನಿರ್ಲಕ್ಷ್ಯ ಮತ್ತು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ವಿರುದ್ಧ ದಾಖಲಾದ 3ನೇ ಎಫ್ಐಆರ್‌ ಇದಾಗಿದೆ.

ಪ್ರತಿಭಟನೆ ಕ್ಯಾಂಪಸ್‌ನಲ್ಲಿ ಹಿಂಸಾಚಾರವನ್ನು ಪ್ರಚೋದಿಸಬಹುದು. ವಿಶ್ವವಿದ್ಯಾಲಯ ಮತ್ತು ಸರ್ಕಾರಕ್ಕೆ ಬೆದರಿಕೆ ಹಾಕುವ ಉದ್ದೇಶವನ್ನು ವಿದ್ಯಾರ್ಥಿಗಳು ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿಗಳು ಇಂಕ್ವಿಲಾಬ್ ಝಿಂದಾಬಾದ್ ಮತ್ತು ಕೆಲ ಆಕ್ಷೇಪಾರ್ಹ ಘೋಷಣೆಗಳನ್ನು ಕ್ಯಾಂಪಸ್‌ನಲ್ಲಿ ಬಳಸುತ್ತಿದ್ದಾರೆ. ವಿಶ್ವವಿದ್ಯಾನಿಲಯದ ಮುಖ್ಯ ದ್ವಾರದಲ್ಲಿ ಪ್ರತಿಭಟನಾಕಾರರ  ಘೋಷಣೆಗಳು ನಮ್ಮ ಕಳವಳಕ್ಕೆ ಕಾರಣವಾಗಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅ.18ರಂದು EFLUನ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯದ ನಂತರ ಪ್ರತಿಭಟನೆ ಪ್ರಾರಂಭವಾಗಿದೆ. ತಮ್ಮ ಬೇಡಿಕೆಗಳ ಪಟ್ಟಿಯಲ್ಲಿ ವಿದ್ಯಾರ್ಥಿಗಳು ಉಪಕುಲಪತಿ ಸುರೇಶ್ ಕುಮಾರ್ ಮತ್ತು ಟಿ ಸ್ಯಾಮ್ಸನ್ ಎಂಬವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದರು.

ಪೊಲೀಸರು 11 ಪ್ರತಿಭಟನಾನಿರತ ವಿದ್ಯಾರ್ಥಿಗಳು ಮತ್ತು 200 ಇತರರ ವಿರುದ್ಧ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿದ್ದಾರೆ. ತನಗೆ ಹಾನಿ ಮಾಡುವ ಪೂರ್ವಯೋಜಿತ ಯೋಜನೆಯೊಂದಿಗೆ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಜಮಾಯಿಸಿದ್ದಾರೆ ಎಂದು ಟಿ ಸ್ಯಾಮ್ಸನ್ ಅವರು ದೂರು ನೀಡಿದ್ದರು.

ಸಹಾಯಕ ಪ್ರಾಧ್ಯಾಪಕ ಸುರೇಶ್ ಬಾಬು ಅವರು ದೂರಿನ ನಂತರ ಎರಡನೇ ಎಫ್‌ಐಆರ್ ದಾಖಲಿಸಲಾಗಿದೆ. ಮೊದಲ 2 ಎಫ್‌ಐಆರ್‌ಗಳನ್ನು ಹಿಂಪಡೆಯಲು ಇಎಫ್‌ಎಲ್‌ಯು ವಿದ್ಯಾರ್ಥಿಗಳ ಬೇಡಿಕೆಗೆ ಸಹಕರಿಸುವುದಿಲ್ಲ  ಎಂದು ರಿಜಿಸ್ಟಾರ್ ಹೇಳಿದ್ದಾರೆ. ವಿವಿಯ ಆಡಳಿತಾಧಿಕಾರಿಗಳು ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು 3 ಬಾರಿ ಭೇಟಿ ಮಾಡಲು ಪ್ರಯತ್ನಿಸಿದರು ಆದರೆ ಅವರು ಅಸಮಂಜಸ ಮತ್ತು ಅಪ್ರಾಯೋಗಿಕ ಷರತ್ತುಗಳನ್ನು ಹಾಕಿದರು ಎಂದು ಅವರು ಹೇಳಿದ್ದಾರೆ.

ವಿವಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ದೊಡ್ಡ ಪ್ರಮಾಣದ ಅಶಾಂತಿಯನ್ನು ಸೃಷ್ಟಿಸುವ ಉದ್ದೇಶವನ್ನು ವಿದ್ಯಾರ್ಥಿಗಳು ಹೊಂದಿದ್ದಾರೆ. ವಿಶ್ವವಿದ್ಯಾಲಯ ಮತ್ತು ಪ್ರಾಧ್ಯಾಪಕರ ವಿರುದ್ಧ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಇದು ವಿಶ್ವವಿದ್ಯಾಲಯದ ಪ್ರತಿಷ್ಠೆಗೆ ಧಕ್ಕೆ ತಂದಿದೆ ಎಂದು ಅವರು ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 342  ಮತ್ತು 506  ಸೇರಿದಂತೆ ವಿವಿಧ ಸೆಕ್ಸನ್‌ಗಳಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಇದನ್ನು ಓದಿ: ಇಸ್ರೇಲ್‌ಗೆ ಬೆಂಬಲ: ಬೈಡನ್‌ ನಿಲುವಿಗೆ ಅಮೆರಿಕದಲ್ಲಿ ಹೆಚ್ಚಿದ ಆಂತರಿಕ ಅಸಮಾಧಾನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...