Homeಮುಖಪುಟಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಅಂಖಿ ದಾಸ್ ವಿರುದ್ಧ ಎಫ್‌ಐಆರ್!

ಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಅಂಖಿ ದಾಸ್ ವಿರುದ್ಧ ಎಫ್‌ಐಆರ್!

ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಹಲವಾರು ದ್ವೇಷ ಭಾಷಣ ಪೋಸ್ಟ್‌ಗಳನ್ನು ನಿರ್ಬಂಧಿಸದಂತೆ ಅಂಖಿ ದಾಸ್ ತನ್ನ ನೌಕರರ ಮೇಲೆ ಒತ್ತಡ ಹೇರಿದ್ದಾರೆ” ಎಂದು ತಿವಾರಿ ಆರೋಪಿಸಿದ್ದಾರೆ.

- Advertisement -
- Advertisement -

ಆಗಸ್ಟ್ 17 ರಂದು ಪತ್ರಕರ್ತ ಅವೇಶ್ ತಿವಾರಿ ಸಲ್ಲಿಸಿರುವ ದೂರಿನ ಆಧಾರದಲ್ಲಿ ರಾಯ್‌ಪುರ ಪೊಲೀಸರು ಫೇಸ್‌ಬುಕ್‌ ನ ಸಾರ್ವಜನಿಕ ನೀತಿ ನಿರ್ದೇಶಕರಾದ ಅಂಖಿ ದಾಸ್ ವಿರುದ್ಧ ಭಾರತೀಯ ದಂಡ ಸಂಹಿತೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಛತ್ತೀಸ್‌ಗಢ ಮೂಲದ ಪತ್ರಕರ್ತ ಅವೇಶ್ ತಿವಾರಿ ಅವರು ಸಲ್ಲಿಸಿರುವ ದೂರಿನಲ್ಲಿ, “ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಹಲವಾರು ದ್ವೇಷ ಭಾಷಣ ಪೋಸ್ಟ್‌ಗಳನ್ನು ನಿರ್ಬಂಧಿಸದಂತೆ ಅಂಖಿ ದಾಸ್ ತನ್ನ ನೌಕರರ ಮೇಲೆ ಒತ್ತಡ ಹೇರಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದು ‘ಭಾರತೀಯ ಮಾರುಕಟ್ಟೆಯಲ್ಲಿ ರಾಜಕೀಯ ಲಾಭ ಗಳಿಸಲು’ ಮಾಡಲಾದ ಅಪರಾಧ ಎಂದು ತಿವಾರಿ ಆರೋಪಿಸಿದ್ದಾರೆ.

ನಿನ್ನೆಯೇ ತನಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಅಂಖಿ ದಾಸ್ ಅವರ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ.

ತನಗೆ ಮಾರಣಾಂತಿಕ ಬೆದರಿಕೆ ಮತ್ತು ಆನ್‌ಲೈನ್ ಕಿರುಕುಳ ನೀಡಲಾಗುತ್ತಿದೆ ಎಂದು ದಾಸ್ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ. ಆವೇಶ್ ತಿವಾರಿಯವರ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಿದ್ದ ಅವರು, ಆಗಸ್ಟ್ 16 ರಂದು ತಿವಾರಿ ಫೇಸ್‌ಬುಕ್‌ನಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದರು.

ಸುದ್ದಿ ಚಾನೆಲ್ ಸ್ವರಾಜ್ ಎಕ್ಸ್‌ಪ್ರೆಸ್‌ನ ರಾಜ್ಯ ಬ್ಯೂರೋ ಮುಖ್ಯಸ್ಥರಾಗಿರುವ ಛತ್ತೀಸ್‌ಗಢ ಮೂಲದ ಪತ್ರಕರ್ತ ತಿವಾರಿ ಈ ಆರೋಪಗಳನ್ನು ನಿರಾಕರಿಸಿದ್ದಾರೆ.

ಎರಡೂ ಎಫ್‌ಐಆರ್‌ಗಳು ಅಮೆರಿಕ ವಾಲ್‌ಸ್ಟ್ರೀಟ್‌ ಜರ್ನಲ್ ಪ್ರಕಟಿಸಿದ ಫೇಸ್‌ಬುಕ್‌ ಮತ್ತು ಬಿಜೆಪಿ ನಂಟು ವರದಿಯ ನಂತರದ ಬೆಳವಣಿಗೆಗಳಾಗಿವೆ.

ತಿವಾರಿ ದೂರಿನ ಎಫ್‌ಐಆರ್‌ನಲ್ಲಿ ಇತರ ಇಬ್ಬರು ಫೇಸ್‌ಬುಕ್ ಬಳಕೆದಾರರಾದ ಛತ್ತೀಸ್‌ಗಢ ನಿವಾಸಿ ವಿವೇಕ್ ಸಿನ್ಹಾ ಮತ್ತು ಇಂದೋರ್ ನಿವಾಸಿ ರಾಮ್ ಸಾಹು ಅವರನ್ನೂ ಹೆಸರಿಸಲಾಗಿದೆ. ಸಿನ್ಹಾ ಮತ್ತು ಸಾಹು ಸೇರಿದಂತೆ ಅಂಖಿ ದಾಸ್  “ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ ಉದ್ದೇಶದಿಂದ ವಿಷಯವನ್ನು ಪ್ರಕಟಿಸಲು ಮತ್ತು ಪ್ರಸಾರ ಮಾಡಲು ಫೇಸ್‌ಬುಕ್ ಅನ್ನು ಬಳಸಿದ್ದಾರೆ” ಎಂದು ತಿವಾರಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಟಿ ರಾಜಾ ಸಿಂಗ್, ಅನಂತ್‌ಕುಮಾರ್ ಹೆಗ್ಡೆ ಮತ್ತು ಕಪಿಲ್ ಮಿಶ್ರಾ ಸೇರಿದಂತೆ ಹಲವಾರು ಬಿಜೆಪಿ ನಾಯಕರ ಮೇಲೆ ದ್ವೇಷ ಭಾಷಣ ನಿರ್ಬಂಧವನ್ನು ಅನ್ವಯಿಸದಂತೆ ಅಂಖಿ ದಾಸ್ ಫೇಸ್‌ಬುಕ್‌ನ್ನು ನಿರ್ಬಂಧಿಸಿದ್ದಾರೆ ಎಂದು ಅಮೇರಿಕದ ಪತ್ರಿಕೆ ವರದಿ ಮಾಡಿದ ನಂತರ ಎರಡೂ ಎಫ್‌ಐಆರ್‌ಗಳು ದಾಖಲಾಗಿವೆ.

ಫೇಸ್‌ಬುಕ್‌ನ ಕಟೆಂಟ್‌ ಪಾಲಿಸಿ ನಿಯಮಗಳು ಆಡಳಿತರೂಢ ಬಿಜೆಪಿ ಪರವಾಗಿವೆ. ಬಿಜೆಪಿ ಮತ್ತು ಹಿಂದೂತ್ವ ನಾಯಕರು ದ್ವೇಷ ಭಾಷಣಗಳು ತನ್ನ ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದರೂ ಕೂಡ ಫೇಸ್ ಬುಕ್ ಕ್ರಮ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು “ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ” ಎಂದು ಫೇಸ್‌ಬುಕ್‌ನ ಹಿರಿಯ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವಾಲ್‌ಸ್ಟ್ರೀಟ್‌ ಜರ್ನಲ್ ವಿಶೇಷ ವರದಿ ಮಾಡಿತ್ತು.

ನಾನು ಎಂದಿಗೂ ದಾಸ್‌ ಅವರನ್ನು ಸಂಪರ್ಕಿಸಿಲ್ಲ ಅಥವಾ ಸಂವಹನ ನಡೆಸಿಲ್ಲ: ತಿವಾರಿ

ನಾನು ಎಂದಿಗೂ ಅಂಖಿ ದಾಸ್‌ ಅವರನ್ನು ಸಂಪರ್ಕಿಸಿಲ್ಲ ಮತ್ತು ಅವರೊಂದಿಗೆ ಸಂವಹನ ನಡೆಸಿಲ್ಲ. ಅವರಿಗೆ ಬೆದರಿಕೆ ಹಾಕಿರುವುದು ಸುಳ್ಳು ಸುದ್ದಿ ಎಂದು ಪತ್ರಕರ್ತ ತಿವಾರಿ ತಿಳಿಸಿದ್ದಾರೆ. ದೂರಿನಲ್ಲಿ ನನ್ನನ್ನು ಏಕೆ ಹೆಸರಿಸಲಾಗಿದೆ ಎಂದು ನನಗೆ ತಿಳಿದಿಲ್ಲ. ನಾನು ಸಹೋದ್ಯೋಗಿಗಳಿಂದ ಇದರ ಬಗ್ಗೆ ತಿಳಿದುಕೊಂಡೆ. ಇದು ಬಹಳ ಮುಖ್ಯವಾದ ವಿಷಯವಾಗಿದೆ. ವಾಸ್ತವದಲ್ಲಿ ವಾಲ್‌ಸ್ಟ್ರೀಟ್ ಜರ್ನಲ್ ಪ್ರಕಟಿಸಿದ ವರದಿಯನ್ನು ನಾನು ಸರಳವಾಗಿ ಪೋಸ್ಟ್ ಮಾಡಿದ್ದೇನೆ ಎಂದು ತಿವಾರಿ ತಿಳಿಸಿದ್ದಾರೆ.

ಅಂಖಿ ದಾಸ್ ಕುರಿತು ಮಾತನಾಡಿದ್ದಕ್ಕಾಗಿ, ಸಾಹು ಮತ್ತು ಸಿನ್ಹಾ ನನಗೆ ಮಾರಣಾಂತಿಕ ಬೆದರಿಕೆಗಳನ್ನು ಹಾಕಿದ್ದಾರೆ ಎಂದು ತಿವಾರಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಪುಲ್ವಾಮಾ, ಸಿಎಎ-ಎನ್‌ಆರ್‌ಸಿ ಕುರಿತು ಫೇಸ್‌ಬುಕ್ ನನ್ನ ಪೋಸ್ಟ್‌ಗಳನ್ನು ನಿರ್ಬಂಧಿಸಿದೆ ಎಂದು ತಿವಾರಿ ಹೇಳಿದ್ದಾರೆ. ಫೆಬ್ರವರಿ 2019 ರಿಂದ ಸರ್ಕಾರದ ನೀತಿಗಳನ್ನು ಟೀಕಿಸುವ ಹಲವಾರು ಪೋಸ್ಟ್‌ಗಳನ್ನು ಸೂಕ್ತ ವಿವರಣೆಯಿಲ್ಲದೆ ಫೇಸ್‌ಬುಕ್ ತೆಗೆದುಹಾಕಿದೆ ಎಂದು ಅವರು ಆರೋಪಿಸಿದರು.

25 ವರ್ಷಗಳಿಂದ ಪತ್ರಕರ್ತನಾಗಿರುವ ನಾನು ಪ್ರಶ್ನೆಗಳನ್ನು ಕೇಳುವುದು ನನ್ನ ಕರ್ತವ್ಯ. ಆದರೆ ಪುಲ್ವಾಮಾ ದಾಳಿ, ಸಿಎಎ-ಎನ್‌ಆರ್‌ಸಿ ಮತ್ತು ಛತ್ತೀಸ್‌ಗಢದ ಬುಡಕಟ್ಟು ಸಮಸ್ಯೆಗಳು ಸೇರಿದಂತೆ ನನ್ನ ಹಲವಾರು ಪೋಸ್ಟ್‌ಗಳನ್ನು ಈ ಹಿಂದೆ ಫೇಸ್‌ಬುಕ್ ನಿರ್ಬಂಧಿಸಿದೆ ಎಂದು ತಿವಾರಿ ದೂರಿದ್ದಾರೆ.

ಭಿಲೈ ಅವರ ಬುಡಕಟ್ಟು ಆಂದೋಲನದ ಕುರಿತು ವೈರಲ್ ಆಗಿದ್ದ ನನ್ನ ಲೈವ್ ವೀಡಿಯೊ ಒಂದನ್ನು ಇದ್ದಕ್ಕಿದ್ದಂತೆ ನಿರ್ಬಂಧಿಸಲಾಗಿದೆ. ಇದು ಫೇಸ್‌ಬುಕ್ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ನನಗೆ ತಿಳಿಯಿತು. ಆದರೆ ನಾನು ಏನು ತಪ್ಪು ಮಾಡಿದೆ ಎಂದು ಫೇಸ್‌ಬುಕ್ ಎಂದಿಗೂ ವಿವರಿಸಲಿಲ್ಲ ಎಂದು ತಿವಾರಿ ಆರೋಪಿಸಿದರು.


ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...