Homeಮುಖಪುಟವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

- Advertisement -
- Advertisement -

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17) ಎಫ್‌ಐಆರ್ ದಾಖಲಿಸಲಾಗಿದೆ.

ಮಹಾರಾಷ್ಟ್ರದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸದಾನಂದ ದಾಟೆ ಅವರ ನಿರ್ದೇಶನದ ಮೇರೆಗೆ, ಕಲ್ಯಾಣ್ ಪಶ್ಚಿಮ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನರೇಂದ್ರ ಪವಾರ್ ಮತ್ತು ಸೇವೆಯಿಂದ ವಜಾಗೊಂಡಿರುವ ಪೊಲೀಸ್ ಸಿಬ್ಬಂದಿ ಶೈಲೇಶ್ ಪಾಟೀಲ್ ವಿರುದ್ಧ ಪಡ್ಘಾ ಪೊಲೀಸರು ಗುರುವಾರ ನಸುಕಿನ ಜಾವ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ದೂರಿನ ಪ್ರಕಾರ, ಕಲ್ಯಾಣ್ ನಿವಾಸಿಯಾದ ಸಂತ್ರಸ್ತೆ ತನ್ನ ಪತಿಯೊಂದಿಗಿನ ಕೌಟುಂಬಿಕ ಕಲಹವನ್ನು ಬಗೆಹರಿಸಲು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಶಾಸಕ ಪವಾರ್ ಅವರನ್ನು ಸಂಪರ್ಕಿಸಿದ್ದರು. ಸೆಪ್ಟೆಂಬರ್ 13ರಂದು ಪವಾರ್ ಅವರು ಸಹಾಯ ಮಾಡುವ ನೆಪದಲ್ಲಿ ಸಂತ್ರಸ್ತೆಯನ್ನು ಕಲ್ಯಾಣ್‌ನಲ್ಲಿರುವ ತಮ್ಮ ಕಚೇರಿಗೆ ಕರೆಸಿಕೊಂಡಿದ್ದರು. ನಂತರ ಆಕೆಯನ್ನು ಭಿವಂಡಿ ತಾಲೂಕಿನ ಬಾಪ್‌ಗಾಂವ್ ಗ್ರಾಮದಲ್ಲಿರುವ ಫಾರ್ಮ್ ಹೌಸ್‌ಗೆ ಕರೆದೊಯ್ಯಲಾಗಿತ್ತು.

ಅಲ್ಲಿ, ಪೊಲೀಸ್ ಸಿಬ್ಬಂದಿ ಶೈಲೇಶ್ ಪಾಟೀಲ್ ಸಂತ್ರಸ್ತೆಗೆ ಆಯುಧವೊಂದನ್ನು ತೋರಿಸಿ ಬೆದರಿಸಿ, ಬಲವಂತವಾಗಿ ಮದ್ಯಪಾನ ಮಾಡಿಸಿದರೆಂದು ಹಾಗೂ ಮೊದಲು ಪವಾರ್ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದರೆಂದು ಆ ಮಹಿಳೆ ಆರೋಪಿಸಿದ್ದಾರೆ. ನಂತರ ಪವಾರ್ ಅಲ್ಲಿಂದ ಹೊರಟುಹೋದರು, ಆ ಬಳಿಕ ಪಾಟೀಲ್ ಆಕೆಯ ಮೇಲೆ ಮತ್ತೆ ಹಲ್ಲೆ ನಡೆಸಿದರೆಂದು ಆರೋಪಿಸಲಾಗಿದೆ.

ಬೆಳಗಿನ ಜಾವ ಸುಮಾರು 4.00 ಗಂಟೆಗೆ, ಪಾಟೀಲ್ ಅವರ ಮನೆಯ ಕೆಲಸದಾಳು ಸಂತ್ರಸ್ತೆಯನ್ನು ಆಕೆಯ ಮನೆಗೆ ಕರೆತಂದು ಬಿಟ್ಟಿದ್ದಾರೆ ಎಂದು ಹೇಳಲಾಗಿದೆ.

ಈ ಘಟನೆಯಿಂದ ತೀವ್ರ ಆಘಾತಕ್ಕೊಳಗಾಗಿದ್ದ ಮಹಿಳೆ, ಸೆಪ್ಟೆಂಬರ್ 16ರಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕ ಸಂಪರ್ಕ ವಿವರಗಳ ಮೂಲಕ ಕಲ್ಯಾಣ್-ಡೊಂಬಿವಲಿ ಮಹಾನಗರ ಪಾಲಿಕೆಯ ಕಾಂಗ್ರೆಸ್ ಕಾರ್ಪೊರೇಟರ್ ಕಾಂಚನ್ ಕುಲಕರ್ಣಿ ಅವರನ್ನು ಸಂಪರ್ಕಿಸಿದ್ದರು.

ಸಂತ್ರಸ್ತೆ ಹಂಚಿಕೊಂಡ ವಿಡಿಯೋ ಮತ್ತು ಲಿಖಿತ ಪುರಾವೆಗಳನ್ನು ಪರಿಶೀಲಿಸಿದ ನಂತರ, ಕುಲಕರ್ಣಿ ಅವರು ಬುಧವಾರ ತಡರಾತ್ರಿ ಆಕೆಯೊಂದಿಗೆ ಪದ್ಘಾ ಪೊಲೀಸ್ ಠಾಣೆಗೆ ಹೋಗಿದ್ದರು.

ದೂರನ್ನು ಪರಿಶೀಲಿಸಿದ ನಂತರ, ಸಾಮೂಹಿಕ ಅತ್ಯಾಚಾರ ಮತ್ತು ಶಸ್ತ್ರಾಸ್ತ್ರಗಳ ಮೂಲಕ ಕ್ರಿಮಿನಲ್ ಬೆದರಿಕೆ ಸೇರಿದಂತೆ ವಿವಿಧ ಆರೋಪಗಳಡಿ ಪವಾರ್ ಮತ್ತು ಪಾಟೀಲ್ ಇಬ್ಬರ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪಡ್ಘಾ ಪೊಲೀಸ್ ಠಾಣೆ ತಿಳಿಸಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಕುಲಕರ್ಣಿ, ಪಾಟೀಲ್ ವಿರುದ್ಧ ಈಗಾಗಲೇ ಹಿಂದಿನ ಕ್ರಿಮಿನಲ್ ಪ್ರಕರಣಗಳು ಇರುವುದನ್ನು ಉಲ್ಲೇಖಿಸಿ, ಆರೋಪಿಯನ್ನು 48 ಗಂಟೆಗಳ ಒಳಗೆ ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.






ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...