Homeಕರ್ನಾಟಕಸಿದ್ದರಾಮಯ್ಯ 24 ಹಿಂದೂಗಳನ್ನು ಕೊಂದಿದ್ದಾರೆಂದ ಹರೀಶ್‌ ಪೂಂಜಾ ವಿರುದ್ಧ ಎಫ್‌ಐಆರ್‌

ಸಿದ್ದರಾಮಯ್ಯ 24 ಹಿಂದೂಗಳನ್ನು ಕೊಂದಿದ್ದಾರೆಂದ ಹರೀಶ್‌ ಪೂಂಜಾ ವಿರುದ್ಧ ಎಫ್‌ಐಆರ್‌

- Advertisement -
- Advertisement -

“ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂಗಳನ್ನು ಕೊಂದಿದ್ದಾರೆ” ಎಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಆರೋಪಿಸಿರುವ ವಿಡಿಯೋ ವೈರಲ್ ಆದ ನಂತರ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಿಂದ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪೂಂಜಾ ಅವರು ಮೇ 22 ರಂದು ಬೆಳ್ತಂಗಡಿಯಲ್ಲಿ ನಡೆದ ವಿಜಯೋತ್ಸವದ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.

ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಹಿಂದೂ ಕಾರ್ಯಕರ್ತರನ್ನು ಕಟುವಾಗಿ ಟೀಕಿಸಿ ಮಾಡಿದ ಭಾಷಣದ ಆಡಿಯೋ ಮತ್ತು ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

24 ಹಿಂದೂ ಕಾರ್ಯಕರ್ತರ ಹತ್ಯೆಗೆ ಕಾರಣರಾದ ಸಿದ್ದರಾಮಯ್ಯ ಅವರಿಗೆ ಮತ ಯಾಚಿಸಿದ್ದೀರಿ, ಭಜರಂಗದಳವನ್ನು ನಿಷೇಧಿಸಲು ಮುಂದಾಗಿರುವ ಕಾಂಗ್ರೆಸ್‌ಗೆ ಮತ ಯಾಚಿಸಿದ್ದೀರಿ ಎಂದು ಭಾಷಣದಲ್ಲಿ ಆರೋಪಿಸಿದ್ದರು.

ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆ ನಮಿತಾ ಕೆ ಪೂಜಾರಿ ಅವರು ನೀಡಿದ ದೂರಿನ ಮೇರೆಗೆ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಎಸ್ಪಿ ಡಾ.ವಿಕ್ರಮ್ ಅಮಾತೆ ಖಚಿತಪಡಿಸಿದ್ದಾರೆ.

ಕಾರ್ಯಕ್ರಮ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತ ಜಯಂತ್ ಕೋಟ್ಯಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರುದಾರರು ಒತ್ತಾಯಿಸಿದ್ದಾರೆ. ಶಾಸಕರು ಕೋಮುದ್ವೇಷ ಹರಡಿ ಸಮಾಜದಲ್ಲಿ ಶಾಂತಿ ಹಾಳು ಮಾಡಲು ಯತ್ನಿಸುತ್ತಿದ್ದಾರೆ ಎಂದು ದೂರಿನಲ್ಲಿ ನಮಿತಾ ಆರೋಪಿಸಿದ್ದಾರೆ.

ಪುತ್ತೂರು ನಗರಸಭಾ ಸದಸ್ಯ ಮಹಮ್ಮದ್ ರಿಯಾಝ್ ಕೆ ಪ್ರತಿಕ್ರಿಯಿಸಿ, “ಆರೋಪಗಳು ಸುಳ್ಳಿನಿಂದ ಕೂಡಿವೆ, ಘಟನೆಯ ಸಮಗ್ರ ತನಿಖೆ ನಡೆಯಲಿ” ಎಂದು ಆಗ್ರಹಿಸಿದ್ದಾರೆ. ಘಟನೆಯನ್ನು ಕಾಂಗ್ರೆಸ್ ಖಂಡಿಸಿದ್ದು, ಬಿಜೆಪಿ ಶಾಸಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷೆ ಪ್ರತಿಭಾ ಕುಳಾಯಿ ಅವರು ಪ್ರತಿಕ್ರಿಯಿಸಿ, “ಗುರುವಾರ ಐಜಿಪಿ ಅವರನ್ನು ಭೇಟಿ ಮಾಡುತ್ತೇನೆ” ಎಂದು ಹೇಳಿದ್ದಾರೆ. ಪಕ್ಷದ ಇನ್ನೊಬ್ಬ ಹಿರಿಯ ನಾಯಕ ಮತ್ತು ಅವರ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ಆರೋಪದ ಮೇಲೆ ಪೂಂಜಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಳಾಯಿ ಕೋರಿದ್ದಾರೆ.

ಇದನ್ನೂ ಓದಿರಿ: ಹೈದ್ರಾಬಾದ್: ಜೊತೆಗಾತಿಯ ಕೊಂದು ತುಂಡುತುಂಡಾಗಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಆರೋಪಿ ಅರೆಸ್ಟ್‌

ಇದೇ ತಿಂಗಳ 22ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಹರೀಶ್ ಪೂಂಜಾ, 24 ಹಿಂದೂ ಕಾರ್ಯಕರ್ತರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆಂದು ಹೇಳಿದ್ದರು.

24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ ಸಿದ್ದರಾಮಯ್ಯ ಪರ ನೀವು ವೋಟ್ ಕೇಳಿದ್ದೀರ. ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ ಎಂದಿದ್ದರು.

ಸಿದ್ದರಾಮಯ್ಯನವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ವಿಚಾರವಂತರು ಪೂಂಜಾ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರಪ್ರದೇಶ: ಕ್ಷೌರ ಮಾಡಲು ತಡವಾಗಿ ಬಂದ ಕ್ಷೌರಿಕನನ್ನು ಲಾಕಪ್‌ನಲ್ಲಿ ಕೂಡಿ ಹಾಕಿದ ಪೊಲೀಸ್‌ ಅಧಿಕಾರಿ

0
ಕ್ಷೌರಕ್ಕಾಗಿ ಮನೆಗೆ ಕ್ಷೌರಿಕ ತಡವಾಗಿ ಬಂದ ಎಂದು ಪೊಲೀಸ್‌ ಅಧಿಕಾರಿಯೋರ್ವ ಕ್ಷೌರಿಕನನ್ನು ಲಾಕಪ್‌ನಲ್ಲಿ ಕೂಡಿ ಹಾಕಿರುವ ಅಮಾನವೀಯ ಘಟನೆ ಬಿಜೆಪಿ ಆಡಳಿತದ ಉತ್ತರಪ್ರದೇಶದ ಬುದೌನ್‌ನ ಪೊಲೀಸ್ ಠಾಣೆಯೊಂದರಲ್ಲಿ ನಡೆದಿದೆ. ಸರ್ಕಲ್ ಆಫೀಸರ್(ಸಿಒ) ಸುನೀಲ್ ಕುಮಾರ್...