Homeಕರ್ನಾಟಕಸಂವಿಧಾನ ಶಿಲ್ಪಿಗೆ ಅವಹೇಳನ; ಸಮಾಜ ಕಲ್ಯಾಣ ಇಲಾಖೆ ದೂರಿನನ್ವಯ ಜೈನ್ ಕಾಲೇಜಿನ ವಿರುದ್ಧ ಎಫ್‌ಐಆರ್‌

ಸಂವಿಧಾನ ಶಿಲ್ಪಿಗೆ ಅವಹೇಳನ; ಸಮಾಜ ಕಲ್ಯಾಣ ಇಲಾಖೆ ದೂರಿನನ್ವಯ ಜೈನ್ ಕಾಲೇಜಿನ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಸಂವಿಧಾನಶಿಲ್ಪಿ, ರಾಷ್ಟ್ರನಾಯಕ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತು ಅವಹೇಳನಕಾರಿಯಾಗಿ ಸ್ಕಿಟ್‌ ಪ್ರದರ್ಶನ ಮಾಡಿರುವ ಬೆಂಗಳೂರಿನ ಜೈನ್ ಕಾಲೇಜಿನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇದು ಡೀಮ್ಡ್‌ ಯೂನಿವರ್ಸಿಟಿಯಾಗಿದ್ದು, ಕಾಲೇಜಿನ ಪ್ರಾಂಶುಪಾರು, ಡೀನ್‌ ಸೇರಿದಂತೆ ಆರು ಜನ ಆರೋಪಿಗಳನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ 3(1)(r), 3(1)(s), 3(1)(v) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153A, 149, 295A ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿದೆ.

ಬೆಂಗಳೂರಿನ ಹೊಸೂರು ಮುಖ್ಯ ರಸ್ತೆಯಲ್ಲಿನ ನಿಮಾನ್ಸ್‌ ಕನ್ವೆಷನ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೈನ್‌ ಕಾಲೇಜಿನ ವಿದ್ಯಾರ್ಥಿಗಳು, “ಡಾ.ಬಿ.ಆರ್‌.ಅಂಬೇಡ್ಕರ್‌, ದಲಿತರು ಮತ್ತು ಮೀಸಲಾತಿ” ಕುರಿತು ಅವಹೇಳನಕಾರಿಯಾಗಿ ಸ್ಕಿಟ್ ಪ್ರದರ್ಶಿಸಿದ್ದರು. ಈ ಸಂಬಂಧ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಭಾರೀ ವಿರೋಧ ವ್ಯಕ್ತವಾಗಿದೆ. ವಿವಿಯ ವಿರುದ್ಧ ಕ್ರಮ ಜರುಗಿಸಬೇಕೆಂಬ ಆಗ್ರಹಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಕೆ.ಎನ್.ಮಧುಸೂದನ ಅವರು ಪೊಲೀಸರಿಗೆ ದೂರು ನೀಡಿದ್ದರು. ಆ ಸಂಬಂಧ ಕ್ರಮ ಜರುಗಿಸಲಾಗಿದೆ.

ದೂರಿನಲ್ಲಿ ಏನಿದೆ?

ಜೈನ್‌ ವಿಶ್ವವಿದ್ಯಾನಿಲಯದ ಕಾಲೇಜು ಫೆಸ್ಟ್‌ನಲ್ಲಿ ವಿದ್ಯಾರ್ಥಿಗಳು ಆ ದಿನ ನೀಡಿದ  ಸ್ಕಿಟ್‌ನಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ಮೀಸಲಾತಿಯ ಕುರಿತು ಅವಹೇಳನ ಮಾಡಲಾಗಿದೆ. @sunilhc ಎಂಬ ಟ್ವಿಟರ್ ಖಾತೆಯ ಮೂಲಕ ವಿಡಿಯೊವನ್ನು ಟ್ವೀಟ್ ಮಾಡಲಾಗಿದ್ದು ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಕಮಿಷನರ್‌, ಡಿಜಿಪಿ ಮತ್ತು ಇತರೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.

ಸದರಿ ಟ್ವೀಟ್‌ನಲ್ಲಿ ಮಾಡಲಾದ ವಿಡಿಯೊದಲ್ಲಿ ಮೇಲ್ನೋಟಕ್ಕೆ ಆಪಾದನೆಗಳು ಸರಿಯೆಂದು ಕಂಡು ಬಂದಿದೆ. ಸಾರ್ವಜನಿಕ ಸ್ಥಳದಲ್ಲಿ, ಸ್ಕಿಟ್‌ ಮೂಲಕ ಜಾತಿ ನಿಂದನೆ ಮಾಡಿರುವುದರಿಂದ ಇದನ್ನು ನೋಡಿದಲ್ಲಿ ಸಾಮಾಜಿಕ ಸಾಮರಸ್ಯ ಹಾಳಾಗುತ್ತದೆ. ಇದರಿಂದ ಜಾತಿ ಜಾತಿಗಳ ವಿರುದ್ಧ ವಿಷಬೀಜ ಬಿತ್ತಿದಂತಾಗಿರುತ್ತದೆ. ಈ ಹಿನ್ನೆಲೆಯಲ್ಲಿ- ಕಾರ್ಯಕ್ರಮದ ಉಸ್ತುವಾರಿಗಳು ಆದ ಜೈನ್ ವಿಶ್ವವಿದ್ಯಾಲಯದ ಪ್ರಾಂಶುಪಾಲರು (A1), ಡೀನ್ (A2), ಕಾರ್ಯಕ್ರಮದ ಆಯೋಜಕರು (A3), ಸ್ಕಿಟ್‌ನಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು (A4), ಸ್ಕಿಟ್‌ ಬರೆದ ಬರಹಗಾರರು (A5), ಇತರರರು (A6) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಅವಹೇಳನ ಮಾಡಿರುವುದು ಕಂಡುಬಂದಿದೆ. ಇದರಿಂದಾಗಿ ಸದರಿ ಮೇಲೆ ಹೆಸರಿಸಲಾದ ಎಲ್ಲರ ವಿರುದ್ಧ ದೌರ್ಜನ್ಯ ತಡೆ (ಪ್ರತಿಬಂಧಕ) ಕಾಯ್ದೆ 1989ರ ನಿಯಮ 3ರ ಉಪ ನಿಯಮಗಳಡಿ ಹಾಗೂ ಐ.ಪಿ.ಸಿ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...