Homeಕರ್ನಾಟಕಸಿಎಂಗೆ ಅವಹೇಳನ: ಅನಂತ್‌ ಕುಮಾರ್‌ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು

ಸಿಎಂಗೆ ಅವಹೇಳನ: ಅನಂತ್‌ ಕುಮಾರ್‌ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು

- Advertisement -
- Advertisement -

ಕಳೆದ ಲೋಕಸಭೆ ಚುನಾವಣೆಯ ಬಳಿಕ ತೆರೆಯ ಹಿಂದೆ ಸರಿದಿದ್ದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗೆಡೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಸದಾ ದ್ವೇಷ ಭಾಷಣಕ್ಕೆ ಸುದ್ದಿಯಾಗುತ್ತಿದ್ದ ಅನಂತ್‌ ಕುಮಾರ್‌ ಹೆಗಡೆ ವಿರುದ್ಧ ಇದೀಗ ಸಿಎಂ ಸಿದ್ದರಾಮ್ಯಯ್ಯ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ನೀಡಿರುವ ಹಿನ್ನೆಲೆ ಪ್ರಕರಣವನ್ನು ದಾಖಲಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಿಂದ ನಿಂದಿಸಿ ಅವಹೇಳನಾಕಾರಿ ಹೇಳಿಕೆ ನೀಡಿದ್ದ  ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಪೊಲೀಸ್ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಪಾಳಾದಲ್ಲಿ ಶುಕ್ರವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಅನಂತಕುಮಾರ ಹೆಗಡೆ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದಿದ್ದರು. ಅಲ್ಲದೆ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಖಲಿಸ್ತಾನಿಗಳೆಂದು ಹೇಳಿದ್ದರು. ‘ನಮ್ಮ ತೆರಿಗೆ ನಮ್ಮ ಹಕ್ಕು’ ಹೋರಾಟದ ವಿರುದ್ಧ ಹೇಳಿಕೆ ಕೊಡುವಾಗ ಸಂಸದ ಅನಂತ್ ಕುಮಾರ್ ಹೆಗಡೆ, ದೇಶದಲ್ಲಿ 99.9% ಹಿಂದೂಗಳು ತೆರಿಗೆ ಕಟ್ಟುತ್ತಾರೆ. ಆದರೆ ಮುಸ್ಲಿಮರ ಮಸೀದಿಗೆ ಯಾಕೆ ಅನುದಾನ ಕೊಟ್ರಿ? ಸಿದ್ರಾಮುಲ್ಲಾ ಖಾನ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ರಾಜ್ಯದಲ್ಲಿ ಸಿದ್ರಮುಲ್ಲಾ ಖಾನ್ ಸರ್ಕಾರ ಇದೆ ಎಂದು ಹೇಳಿದ್ದರು.

ಈ  ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಧಾರ್ಮಿಕವಾಗಿ ಮತ್ತು  ಸಾಮಾಜಿಕವಾಗಿ ಅವಮಾನಕಾರಿ ಹೇಳಿಕೆ ನೀಡಿರುವ ಸಂಸದರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಕುಮಟಾದಲ್ಲಿ ನಡೆದ ಸಭೆಯಲ್ಲಿ ಅನಂತಕುಮಾರ್‌ ಹೆಗಡೆ ಪ್ರಚೋದನಕಾರಿ ಮಾತನಾಡಿದ್ದಕ್ಕೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅಯೋಧ್ಯೆ ರಾಮಮಂದಿರ ವಿಚಾರವಾಗಿ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಅನಂತ್‌ ಕುಮಾರ್‌ ಹೆಗಡೆ ನಾಲಗೆ ಹರಿಯ ಬಿಟ್ಟಿದ್ದರು. ಭಟ್ಕಳ, ಶಿರಸಿ, ಶ್ರೀರಂಗಪಟ್ಟಣದ ಮಸೀದಿಗಳು ಹಿಂದೆ ದೇವಾಲಯಗಳಾಗಿದ್ದವು. ಅವುಗಳನ್ನು ಬಾಬ್ರಿ ಮಸೀದಿ ರೀತಿಯಲ್ಲಿ ಹೊಡೆಯಬೇಕು ಎಂದು ಅನಂತ್‌ ಕುಮಾರ್‌ ಹೆಗಡೆ ಹೇಳಿದ್ದರು. ಅನಂತ್‌ ಕುಮಾರ್‌ ಹೆಗಡೆ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹೇಳಿಕೆ ನೀಡುವ ಜೊತೆಗೆ ಸಾಮಾಜಿಕ ಅಶಾಂತಿಗೆ ಕಾರಣವಾಗುವ ಮಾತುಗಳನ್ನಾಡಿರುವುದರಿಂದ ಸೆಕ್ಷನ್ 153ಎ, 505 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಮುಸಲ್ಮಾನರ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಕಾರಣಕ್ಕೆ ಕುಖ್ಯಾತಿಯನ್ನೂ ಗಳಿಸಿದ್ದ ಅನಂತಕುಮಾರ್ ಹೆಗಡೆ ತನ್ನ ತಾಯಿಗೆ ಸೂಕ್ತ ಚಿಕಿತ್ಸೆ ನೀಡಲಿಲ್ಲ ಎಂಬ ಕಾರಣದಿಂದ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ ವಿಡಿಯೋವೊಂದು ಈ ಹಿಂದೆ ವೈರಲ್‌ ಆಗಿತ್ತು.

ಇದನ್ನು ಓದಿ: ಉತ್ತರಪ್ರದೇಶದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿಯಿಂದ ಕೋಟ್ಯಾಧಿಪತಿಗಳ ತೆರಿಗೆ ಮನ್ನಾ; ರಾಹುಲ್‌ ವಾಗ್ಧಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...