Homeಕರ್ನಾಟಕಪ್ರಚೋದನಾಕಾರಿ ಹೇಳಿಕೆ: ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು

ಪ್ರಚೋದನಾಕಾರಿ ಹೇಳಿಕೆ: ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು

- Advertisement -
- Advertisement -

ಪ್ರಚೋದನಾಕಾರಿ ಭಾಷಣದ ಮೂಲಕ ಅಶಾಂತಿ ಸೃಷ್ಟಿಸಲು ಯತ್ನಿಸಿದ ಮಾಜಿ ಕೇಂದ್ರ ಸಚಿವ, ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕುಮಟಾ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಧಾರ್ಮಿಕ ಭಾವನೆಗೆ ಧಕ್ಕೆ, ಸಾಮಾಜದ ಅಶಾಂತಿಗೆ ಕಾರಣವಾಗುವ ಹೇಳಿಕೆ ಹಿನ್ನೆಲೆಯಲ್ಲಿ ಅನಂತಕುಮಾರ್‌ ಹೆಗಡೆ ವಿರುದ್ಧ ಸೆಕ್ಷನ್ 153ಎ, 505 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ ಅವರು ಪ್ರತಿಕ್ರಿಯಿಸಿದ್ದು, ಅನಂತಕುಮಾರ್ ಹೆಗಡೆ ಕುಮಟಾದಲ್ಲಿ ನಡೆದ ಸಭೆಯಲ್ಲಿ ಮಾಡಿರುವ ಭಾಷಣ ಆಕ್ಷೇಪಾರ್ಹವಾಗಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಶನಿವಾರ ಕುಮಟಾದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆದಿತ್ತು. ಸಭೆಯಲ್ಲಿ ಮಾತನಾಡಿದ್ದ ಅನಂತಕುಮಾರ್‌ ಹೆಗಡೆ, ಭಟ್ಕಳ, ಶಿರಸಿ, ಶ್ರೀರಂಗಪಟ್ಟಣದ ಮಸೀದಿಗಳು ಹಿಂದೆ ದೇವಾಲಯಗಳಾಗಿದ್ದವು. ಅವುಗಳನ್ನು ಬಾಬ್ರಿ ಮಸೀದಿ ರೀತಿಯಲ್ಲಿ ಹೊಡೆಯಬೇಕು ಎಂದಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಜಿಲ್ಲಾ ಘಟಕದ ವಕ್ತಾರ ಕೆ.ಶಂಭು ಶೆಟ್ಟಿ, ಸಂಸದ ಅನಂತಕುಮಾರ್ ಹೆಗಡೆ ಶಾಂತವಾಗಿರುವ ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸುವ ಪ್ರಯತ್ನವನ್ನು ನಡೆಸುತ್ತಿದ್ದಾರೆ. ಚುನಾವಣೆ ಸಮೀಪಿಸಿದಂತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ಸಂಸದ ವಿವಾದ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಅನಂತಕುಮಾರ್ ತಮ್ಮ ಭಾಷಣದಲ್ಲಿ ಮಾತ್ರ ದ್ವೇಷಿಸುವ ಸಮುದಾಯದ ಜತೆಗೆ ವ್ಯಾವಹಾರಿಕ ಸಂಬಂಧ ಹೊಂದಿದ್ದಾರೆ. ಆದರೆ ಜನರನ್ನು ಮಾತ್ರ ತಪ್ಪು ದಾರಿಗೆ ಎಳೆದು ಸಮಾಜದಲ್ಲಿ ದ್ವೇಷ ವಾತಾವರಣ ನಿರ್ಮಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದರು.

ಅನಂತಕುಮಾರ್ ಹೆಗಡೆ ಕೆಲವು ದಶಕದಿಂದ ಜಿಲ್ಲೆಯನ್ನು ಲೋಕಸಭೆಯಲ್ಲಿ ಪ್ರತಿನಿಧಿಸುತ್ತಿದ್ದರೂ ಜಿಲ್ಲೆಗೆ ಅವರ ಕೊಡುಗೆ ಶೂನ್ಯ. ಜನರು ಅವರನ್ನು ಸಹಿಸಿಕೊಂಡಿದ್ದಾರೆ. ನಾಲ್ಕು ವರ್ಷಗಳಿಂದ ನಾಪತ್ತೆಯಾಗಿದ್ದರು. ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯ ಕಾರಣಕ್ಕೆ ಹತ್ತಾರು ಜನರು ಅಪಘಾತದಲ್ಲಿ ಮೃತಪಟ್ಟರೂ ಸಂಸದರು ಯಾವ ಕ್ರಮವನ್ನೂ ಕೈಗೊಂಡಿರಲಿಲ್ಲ. ಸಂಸದರಿಗೆ ಅನಾರೋಗ್ಯ ಕಾಡಿದೆ ಎಂದು ಗುಲ್ಲೆಬ್ಬಿಸಲಾಗಿತ್ತು. ಜನರು ಇದನ್ನು ನಂಬಿ ಸುಮ್ಮನಿದ್ದರು. ಆದರೆ ಈಗ ಅವರು ಸಮಾಜದಲ್ಲಿ ಅಶಾಂತಿ ಕದಡುವ ಹೇಳಿಕೆ ನೀಡುತ್ತ ಮುನ್ನೆಲೆಗೆ ಬರುವ ಯತ್ನ ನಡೆಸಿದ್ದಾರೆ ಎಂದು ಹೇಳಿದ್ದರು.

ಮುಸಲ್ಮಾನರ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಕಾರಣ ಕುಖ್ಯಾತಿಯನ್ನೂ ಗಳಿಸಿದ್ದ ಅನಂತಕುಮಾರ್ ಹೆಗಡೆ ತನ್ನ ತಾಯಿಗೆ ಸೂಕ್ತ ಚಿಕಿತ್ಸೆ ನೀಡಲಿಲ್ಲ ಎಂಬ ಕಾರಣದಿಂದ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ ವಿಡಿಯೋವೊಂದು ಈ ಹಿಂದೆ ವೈರಲ್‌ ಆಗಿತ್ತು.

ಇದನ್ನು ಓದಿ: ‘ಒಬಿಸಿ’ ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...