Homeಮುಖಪುಟದಿ ವೈರ್‌ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ : ಯುಪಿ ಸರ್ಕಾರಕ್ಕೆ 3,500ಕ್ಕೂ ಹೆಚ್ಚು...

ದಿ ವೈರ್‌ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ : ಯುಪಿ ಸರ್ಕಾರಕ್ಕೆ 3,500ಕ್ಕೂ ಹೆಚ್ಚು ನ್ಯಾಯಶಾಸ್ತ್ರಜ್ಞರು, ಕಲಾವಿದರಿಂದ ಛೀಮಾರಿ

- Advertisement -
- Advertisement -

ಖ್ಯಾತ ವೆಬ್ ಪೋರ್ಟಲ್ ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಕ್ಕಾಗಿ ಸುಮಾರು 3,500 ನ್ಯಾಯಶಾಸ್ತ್ರಜ್ಞರು, ಶಿಕ್ಷಣ ತಜ್ಞರು, ನಟರು, ಕಲಾವಿದರು, ಬರಹಗಾರರು ಮತ್ತು ಇತರ ವರ್ಗದ ಜನರು ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ಧಾರ್ಥ್ ವರದರಾಜನ್‌ ವಿರುದ್ಧದ ಎಲ್ಲಾ ಕ್ರಿಮಿನಲ್ ಮೊಕದ್ದಮೆಗಳನ್ನು ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ.

ಮಂಗಳವಾರ ಬಿಡುಗಡೆ ಮಾಡಿರುವ ಜಂಟಿ ಹೇಳಿಕೆಯಲ್ಲಿ ಅವರು ವರದರಾಜನ್ ವಿರುದ್ಧ ಎಫ್‌ಐಆರ್ ನೋಂದಣಿಯು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಕರೆದಿದ್ದಾರೆ. ಅಲ್ಲದೇ COVID-19 ಸಾಂಕ್ರಾಮಿಕವನ್ನು ಮಾಧ್ಯಮಗಳ ಸ್ವಾತಂತ್ರ್ಯವನ್ನು ಹಾಳುಮಾಡಲು ಒಂದು ಅಸ್ತ್ರವಾಗಿ ಬಳಸಬೇಡಿ ಎಂದು ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.

ವೈದ್ಯಕೀಯ ತುರ್ತುಸ್ಥಿತಿಯನ್ನು ಬಳಸಿಕೊಂಡು ವಾಸ್ತವಿಕ ರಾಜಕೀಯ ತುರ್ತುಸ್ಥಿತಿಯನ್ನು ಹೇರುವ ನೆಪವಾಗಿ ಕಾರ್ಯನಿರ್ವಹಿಸಬಾರದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದಕ್ಕೆ ಸಹಿ ಹಾಕಿದವರಲ್ಲಿ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಮದನ್ ಬಿ ಲೋಕೂರ್, ಮದ್ರಾಸ್ ಹೈಕೋರ್ಟ್ ಮಾಜಿ ನ್ಯಾಯಾಧೀಶ ಕೆ ಚಂದ್ರು ಮತ್ತು ಪಾಟ್ನಾ ಹೈಕೋರ್ಟ್ ಮಾಜಿ ನ್ಯಾಯಾಧೀಶ ಅಂಜನಾ ಪ್ರಕಾಶ್ ಸೇರಿದ್ದಾರೆ.

ಮಾಜಿ ಮಾಜಿ ಹಣಕಾಸು ಸಚಿವ ಯಶ್ವಂತ್ ಸಿನ್ಹಾ ಅವರೊಂದಿಗೆ ಇಬ್ಬರು ಮಾಜಿ ನೌಕಾಪಡೆಯ ಮುಖ್ಯಸ್ಥರಾದ ಅಡ್ಮಿರಲ್ ರಾಮದಾಸ್ ಮತ್ತು ಅಡ್ಮಿರಲ್ ವಿಷ್ಣು ಭಾಗವತ್ ಸಹ ಸಹಿ ಹಾಕಿದ್ದಾರೆ.

“ಮಾಧ್ಯಮ ಸ್ವಾತಂತ್ರ್ಯದ ಮೇಲಿನ ಈ ದಾಳಿ, ವಿಶೇಷವಾಗಿ COVID-19 ಬಿಕ್ಕಟ್ಟಿನ ಸಂದರ್ಭದಲ್ಲಿ, ಕೇವಲ ವಾಕ್ ಸ್ವಾತಂತ್ರ್ಯಕ್ಕೆ ಮಾತ್ರವಲ್ಲ, ಸಾರ್ವಜನಿಕರ ಮಾಹಿತಿಯ ಹಕ್ಕಿಗೆ ಅಪಾಯವನ್ನುಂಟುಮಾಡುತ್ತದೆ” ಎಂದು ಹೇಳಿಕೆ ತಿಳಿಸಿದೆ. ಸಾಂಕ್ರಾಮಿಕ ರೋಗವನ್ನು ಕೋಮುವಾದೀಕರಿಸಬೇಡಿ ಎಂದು ಅವರು ಮಾಧ್ಯಮಗಳಿಗೆ ಕರೆ ನೀಡಿದರು.

ದೆಹಲಿಯಲ್ಲಿ ತಬ್ಲೀಘಿ ಜಮಾಅತ್ ಕಾರ್ಯಕ್ರಮ ನಡೆದ ದಿನ, ಯೋಗಿ ಆದಿತ್ಯನಾಥ್ ಅವರು ಎಂದಿನಂತೆ ರಾಮ್ ನವಮಿ ಜಾತ್ರೆ ನಡೆಯಲಿದೆ ಎಂದು ತಿಳಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಟ್ವಿಟ್ಟರ್ ನಲ್ಲಿ ಮಾಡಿದ ಕಾಮೆಂಟ್‌ಗಳ ಕುರಿತು ವರದರಾಜನ್ ರವರ ದಿ ವೈರ್‌ ವರದಿ ಮಾಡಿತ್ತು.

ಕೊರೋನವೈರಸ್ ಹರಡುವುದನ್ನು ತಡೆಗಟ್ಟಲು ರಾಷ್ಟ್ರವ್ಯಾಪಿ ಲಾಕ್ ಡೌನ್ ಸಮಯದಲ್ಲಿ ಅಯೋಧ್ಯೆಯ ರಾಮ್‌ಜನ್ಮಭೂಮಿ ಸ್ಥಳದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಯೋಗಿ ಆದಿತ್ಯನಾಥ್ ಭಾಗವಹಿಸಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ವರದರಾಜನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ವರದರಾಜನ್ ವಿರುದ್ಧದ ಎಫ್ಐಆರ್‌ನಲ್ಲಿ ಅವರು ಮಾಡಿದ ಟ್ವೀಟ್ ಅನ್ನು ಉಲ್ಲೇಖಿಸಿದ್ದಾರೆ, “ತಬ್ಲೀಘಿ ಜಮಾಅತ್ ಕಾರ್ಯಕ್ರಮ ನಡೆದ ದಿನ, ಆದಿತ್ಯನಾಥ್ ಮಾರ್ಚ್ 25 ರಿಂದ ಏಪ್ರಿಲ್ 2 ರವರೆಗೆ ಅಯೋಧ್ಯೆಗಾಗಿ ಯೋಜಿಸಲಾದ ದೊಡ್ಡ ರಾಮ್ ನವಮಿ ಜಾತ್ರೆ ಎಂದಿನಂತೆ ಮುಂದುವರಿಯುತ್ತದೆ ಮತ್ತು ಭಗವಾನ್ ರಾಮ್ ಭಕ್ತರನ್ನು ಕೊರೋನವೈರಸ್‌ನಿಂದ ರಕ್ಷಿಸುತ್ತಾನೆ” ಎಂಬುದು ಆ ಟ್ವೀಟ್‌ನ ಸಾರವಾಗಿದೆ.

ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೆನನ್, ಮಾಜಿ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್, ಪಂಜಾಬ್ ರಾಜ್ಯಪಾಲರ ಮಾಜಿ ಸಲಹೆಗಾರ ಮತ್ತು ರೊಮೇನಿಯಾದ ಮಾಜಿ ರಾಯಭಾರಿ ಜೂಲಿಯೊ ರಿಬೈರೊ ಮತ್ತು ಮಾಜಿ ಸಿಇಸಿ ಎಂಎಸ್ ಗಿಲ್ ಸೇರಿದಂತೆ ಹಲವಾರು ಮಾಜಿ ಅಧಿಕಾರಿಗಳು ಈ ಹೇಳಿಕೆಗೆ ಸಹಿ ಹಾಕಿದ್ದಾರೆ.

ಲೇಖಕರಾದ ವಿಕ್ರಮ್ ಸೇಠ್, ನಯನತಾರಾ ಸಹಗಲ್, ಅರುಂಧತಿ ರಾಯ್, ಅನಿತಾ ದೇಸಾಯಿ, ಕೆ ಸಚ್ಚಿದಾನಂದನ್ ಮತ್ತು ಕಿರಣ್ ದೇಸಾಯಿ ಇತರ ಸಹಿ ಹಾಕಿದ್ದಾರೆ.

ನಟರು ಮತ್ತು ಕಲಾವಿದರಾದ ಅಮೋಲ್ ಪಾಲೇಕರ್, ನಸೀರುದ್ದೀನ್ ಷಾ, ನಂದಿತಾ ದಾಸ್, ಫರ್ಹಾನ್ ಅಖ್ತರ್ ಮತ್ತು ಮಲ್ಲಿಕಾ ಸಾರಾಭಾಯ್ ಅವರು ಈ ಹೇಳಿಕೆಯನ್ನು ಅನುಮೋದಿಸಿದ್ದಾರೆ. ಚಿತ್ರ ನಿರ್ಮಾಪಕರಲ್ಲಿ ಜೋಯಾ ಅಖ್ತರ್, ಕಿರಣ್ ರಾವ್ ಮತ್ತು ಆನಂದ್ ಪಟ್ವರ್ಧನ್, ಮತ್ತು ದಯಾನಿತಾ ಸಿಂಗ್‌ ಕೂಡ ಇದ್ದಾರೆ.

ಹಿರಿಯ ಪತ್ರಕರ್ತರು ಮತ್ತು ಜಗತ್ತಿನಾದ್ಯಂತದ ವಿಶ್ವವಿದ್ಯಾಲಯಗಳ ಸಾವಿರಕ್ಕೂ ಹೆಚ್ಚು ಪ್ರಾಧ್ಯಾಪಕರು ಸಹ ಸಹಿ ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...