Homeಮುಖಪುಟಆಂಬ್ಯುಲೆನ್ಸ್ ದುರ್ಬಳಕೆ ಆರೋಪ : ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ದ ಪ್ರಕರಣ ದಾಖಲು

ಆಂಬ್ಯುಲೆನ್ಸ್ ದುರ್ಬಳಕೆ ಆರೋಪ : ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ದ ಪ್ರಕರಣ ದಾಖಲು

- Advertisement -
- Advertisement -

ಕಳೆದ ಏಪ್ರಿಲ್‌ ತಿಂಗಳಿನಲ್ಲಿ ನಡೆದ ತ್ರಿಶೂರ್ ಪೂರಂ ಉತ್ಸವಕ್ಕೆ ತೆರಳಲು ಆಂಬ್ಯುಲೆನ್ಸ್ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಕೇಂದ್ರ ಪ್ರವಾಸೋದ್ಯಮ ಇಲಾಖೆಯ ರಾಜ್ಯ ಖಾತೆ ಸಚಿವ ಸುರೇಶ್ ಗೋಪಿ ವಿರುದ್ಧ ಕೇರಳ ಪೊಲೀಸರು ಭಾನುವಾರ (ನ.3) ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಗೋಪಿ ಜೊತೆಗೆ ಆಂಬ್ಯುಲೆನ್ಸ್‌ನಲ್ಲಿದ್ದ ಅಭಿಜಿತ್ ನಾಯರ್ ಎಂಬವರು ಮತ್ತು ಆಂಬ್ಯುಲೆನ್ಸ್ ಚಾಲಕನ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಲೋಕಸಭಾ ಚುನಾವಣಾ ಪ್ರಚಾರ ಕಾರ್ಯತಂತ್ರದ ಭಾಗವಾಗಿ ಗೋಪಿ ಮತ್ತು ಇತರರು ಆಂಬ್ಯುಲೆನ್ಸ್  ದುರುಪಯೋಗಪಡಿಸಿಕೊಂಡಿದ್ದಾರೆ. ಪೂರಂ ಉತ್ಸವದ ದಿನ ರಾತ್ರಿ ತ್ರಿಶೂರ್‌ನ ಜನನಿಬಿಡ ರಸ್ತೆಯಲ್ಲಿ ಸುಖಾಸುಮ್ಮನೆ ಆಂಬ್ಯುಲೆನ್ಸ್ ಓಡಿಸಿದ್ದಾರೆ ಎಂದು ಆರೋಪಿಸಿ ವಕೀಲ ಸುಮೇಶ್ ಭವದಾಸನ್ ಎಂಬವರು ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಮೂವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳಾದ 279 ಸಾರ್ವಜನಿಕ ರಸ್ತೆಯಲ್ಲಿ ಅತಿ ವೇಗದ ಮತ್ತು ನಿರ್ಲಕ್ಷ್ಯದ ಚಾಲನೆ, 34 ಕ್ರಿಮಿನಲ್ ಕೃತ್ಯ ಮತ್ತು ಮೋಟಾರು ವಾಹನ ಕಾಯ್ದೆಯಡಿ ಅರೋಪ ಹೊರಿಸಲಾಗಿದೆ.

ಪ್ರಕರಣದ ಹಿನ್ನೆಲೆ : ಏಪ್ರಿಲ್ 19, 2024 ರಂದು ಜನಸಂದಣಿ ನಿರ್ವಹಣೆಗಾಗಿ ಪೊಲೀಸರು ವಿಧಿಸಿದ ನಿರ್ಬಂಧಗಳಿಂದಾಗಿ ಪೂರಂ ಉತ್ಸವದ ಕೆಲವು ಕಾರ್ಯಕ್ರಮಗಳನ್ನು ಮಧ್ಯದಲ್ಲಿಯೇ ಕೈಬಿಟ್ಟಿದ್ದರಿಂದ ರಾಜಕೀಯ ಗದ್ದಲ ಭುಗಿಲೆದ್ದಿತ್ತು. ಕಾರ್ಯಕ್ರಮಗಳನ್ನು ಅರ್ಧಕ್ಕೆ ನಿಲ್ಲಿಸಿದ್ದನ್ನು ವಿರೋಧಿಸಿದ್ದ ಸುರೇಶ್ ಗೋಪಿ, ಏಪ್ರಿಲ್ 20ರಂದು ಮುಂಜಾನೆ ದೇವಸ್ಥಾನದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ, ಹಬ್ಬದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಸಿಡಿಮದ್ದು ಪ್ರದರ್ಶನ ಹಗಲು ಹೊತ್ತಿನಲ್ಲಿ ನಡೆದಿತ್ತು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಉತ್ಸವವನ್ನು ಅರ್ಧಕ್ಕೆ ನಿಲ್ಲಿಸಿ ಮರುದಿನ ಹಗಲೊತ್ತು ಸಿಡಿಮದ್ದು ಪ್ರದರ್ಶನ ನಡೆಸಲಾಗಿದೆ. ಇದರ ಹಿಂದೆ ಸುರೇಶ್ ಗೋಪಿ ಕೈವಾಡ ಇದೆ. ಅಧಿಕಾರಿಗಳು ಕೂಡ ಈ ತಂತ್ರಕ್ಕೆ ಕೈ ಜೋಡಿಸಿದ್ದಾರೆ ಎಂದು ಕೇರಳದ ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ಸೇರಿದಂತೆ ಹಲವರು ಆರೋಪಿಸಿದ್ದರು.

ಅಕ್ಟೋಬರ್ 3ರಂದು, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ವಿಷಯದ ಬಗ್ಗೆ ಮೂರು ಹಂತಗಳ ತನಿಖೆಯನ್ನು ಘೋಷಿಸಿದ್ದರು. ಲೋಕಸಭೆ ಚುನಾವಣೆಗೆ ಲಾಭ ಪಡೆಯಲು ಸಿಡಿಮದ್ದು ಪ್ರದರ್ಶನವನ್ನು ವಿಳಂಬ ಮಾಡುವ ತಂತ್ರ ಹೂಡಲಾಗಿತ್ತೇ? ಎಂದು ವರದಿ ನೀಡಲು ಆದೇಶಿಸಿದ್ದರು.

ಬಳಿಕ, “ರಾಜ್ಯದ ಸಾಮಾಜಿಕ ವ್ಯವಸ್ಥೆಯನ್ನು ಹಾಳುಗಡೆವುವ ಪ್ರಯತ್ನ ನಡೆದಿದೆ” ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾಧ್ಯಮಗಳ ಮುಂದೆ ಹೇಳಿಕೆ ಕೊಟ್ಟಿದ್ದರು.

ಈ ವಿಚಾರವಾಗಿ ಕಳೆದ ಅಕ್ಟೋಬರ್ 28ರಂದು, ಕೇರಳದ ಆಡಳಿತರೂಢ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರಕ್ಕೆ ಸವಾಲೆಸೆದಿದ್ದ ಸುರೇಶ್ ಗೋಪಿ, ತ್ರಿಶೂರ್ ಪೂರಂ ಗೊಂದಲದ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ಆದೇಶಿಸಿ ಎಂದಿದ್ದರು. ಉತ್ಸವದ ಸ್ಥಳಕ್ಕೆ ತೆರಳಲು ಆಂಬ್ಯುಲೆನ್ಸ್ ಬಳಸಲಾಗಿದೆ ಎಂಬ ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ್ದರು.

ಚೇಲಕ್ಕರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಯುಕ್ತ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ಗೋಪಿ, “ನಾನು ಬಿಜೆಪಿ ಜಿಲ್ಲಾಧ್ಯಕ್ಷರ ಕಾರಿನಲ್ಲಿ ಪೂರಂ ಸ್ಥಳಕ್ಕೆ ತೆರಳಿದ್ದೆ. ಪಿಣರಾಯಿ ಪೊಲೀಸರಿಗೆ ಸತ್ಯ ಕಂಡು ಹಿಡಿಯಲು ಸಾಧ್ಯವಾಗುತ್ತಿಲ್ಲ” ಎಂದು ವಾಗ್ದಾಳಿ ನಡೆಸಿದ್ದರು.

ಬಳಿಕ, ಮಾತು ಬದಲಿಸಿದ್ದ ಗೋಪಿ, ಆಂಬ್ಯುಲೆನ್ಸ್ ದುರ್ಬಳಕೆ ಮಾಡಿರುವುದನ್ನು ಒಪ್ಪಿಕೊಂಡಿದ್ದರು. “ನನಗೆ ಕಾಲು ನೋವಿದ್ದ ಕಾರಣ ಜನಸಂದಣಿಯಲ್ಲಿ ನಡೆಯಲು ಕಷ್ಟವಾಗಿತ್ತು. ಹಾಗಾಗಿ, ಕೆಲ ಯುವಕರು ಯಾವುದೇ ರಾಜಕೀಯ ಅಜೆಂಡಾ ಇಲ್ಲದೆ ನನಗೆ ಆಂಬ್ಯುಲೆನ್ಸ್‌ಗೆ ಸಹಾಯ ಮಾಡಿದ್ದರು” ಎಂದಿದ್ದರು. ಈ ಹೇಳಿಕೆಯನ್ನು ಅಕ್ಟೋಬರ್ 31 ರಂದು ‘ದಿ ಹಿಂದೂ‘ ತನ್ನ ವರದಿಯಲ್ಲಿ ಉಲ್ಲೇಖಿಸಿತ್ತು.

ಆರೋಪ ಪ್ರತ್ಯಾರೋಪಗಳ ನಡುವೆ ಇದೀಗ ಸುರೇಶ್ ಗೋಪಿ ಸೇರಿದಂತೆ ಮೂವರ ವಿರುದ್ದ ಆಂಬ್ಯುಲೆನ್ಸ್ ದುರ್ಬಳಕೆ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಈ ಮೂಲಕ ಪ್ರಕರಣ ಮತ್ತೊಂದು ಮಜಲಿಗೆ ಕಾಲಿಟ್ಟಿದೆ.

ಇದನ್ನೂ ಓದಿ : ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ; 24 ವರ್ಷದ ಯುವತಿಯನ್ನು ಬಂಧಿಸಿದ ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...