Homeಮುಖಪುಟಮೋದಿ ಕುರಿತ ಧ್ರುವ್‌ ರಾಥಿ ವಿಡಿಯೋ ಹಂಚಿಕೊಂಡ ವಕೀಲನ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು

ಮೋದಿ ಕುರಿತ ಧ್ರುವ್‌ ರಾಥಿ ವಿಡಿಯೋ ಹಂಚಿಕೊಂಡ ವಕೀಲನ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು

- Advertisement -
- Advertisement -

ಯೂಟ್ಯೂಬರ್ ಧ್ರುವ್‌ ರಾಥಿ ಪ್ರಧಾನಿ ಮೋದಿಯನ್ನು ಟೀಕಿಸಿದ್ದ ವಿಡಿಯೋವನ್ನು ಹಂಚಿಕೊಂಡ ವಕೀಲರೊಬ್ಬರ ವಿರುದ್ಧ ಮಹಾರಾಷ್ಟ್ರ ಪೊಲೀಸರು ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಲಿಬರೇಶನ್‌ನ ಮಹಾರಾಷ್ಟ್ರ ಕಾರ್ಯದರ್ಶಿಯೂ ಆಗಿರುವ ವಕೀಲ ಆದೇಶ್ ಬನ್ಸೋಡೆ ‘ಮೈಂಡ್ ಆಫ್ ಎ ಡಿಕ್ಟೇಟರ್’ ಎಂಬ ಶೀರ್ಷಿಕೆಯ ಧ್ರುವ್‌ ರಾಥಿ ಅವರ ವೀಡಿಯೊ ಲಿಂಕ್‌ನ್ನು ವಸಾಯಿಯ ಬಾರ್ ಅಸೋಸಿಯೇಷನ್ ವಾಟ್ಸಾಪ್‌ ಗ್ರೂಪ್‌ಗೆ ಹಂಚಿಕೊಂಡಿದ್ದಾರೆ.   ​​ಮತದಾನ ಮಾಡುವ ಮೊದಲು ವೀಡಿಯೊವನ್ನು ವೀಕ್ಷಿಸಿ ಎಂಬ ಸಂದೇಶದೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಮೇ 20ರಂದು ಐದನೇ ಹಂತದ ಲೋಕಸಭೆ ಚುನಾವಣೆ ವೇಳೆ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿತ್ತು.

ಬನ್ಸೋಡೆ ಅವರು ಹಂಚಿಕೊಂಡಿರುವ ವೀಡಿಯೊದ ಬಗ್ಗೆ ಮತ್ತೋರ್ವ ವಕೀಲರು ಪೊಲೀಸರಿಗೆ ಪತ್ರ ಬರೆದ ನಂತರ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ. ಎಂಬಿವಿವಿ ಪೊಲೀಸ್‌ನ ರಹಸ್ಯ ವಿಭಾಗದ ಹೆಡ್‌ಕಾನ್ಸ್‌ಟೇಬಲ್‌ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಾಗಿದೆ. ಎಫ್ಐಆರ್‌ನಲ್ಲಿ ಶೇರ್ ಮಾಡಿರುವ ವಿಡಿಯೋ ಮತ್ತು ಅದರ ಸಂದೇಶವು ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಬಗ್ಗೆ ಸುಳ್ಳು ಬಿಂಬನೆ ಮೂಲಕ ಮತದಾರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದೆ. ಎಂಬಿವಿವಿ ಪೊಲೀಸ್ ಕಮಿಷನರ್ ಮಧುಕರ್ ಪಾಂಡೆ ತಮ್ಮ ಕಮಿಷನರೇಟ್‌ಗೆ ಮೇ 18 ಮತ್ತು ಮೇ 20ರ ನಡುವೆ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆ ನಿಷೇಧಾಜ್ಞೆ ಹೊರಡಿಸಿದ್ದರು. ವಿಡಿಯೋ ಹಂಚಿಕೆಯು ಕಮಿಷನರ್‌ ಅವರ ಆದೇಶದ ಉಲ್ಲಂಘನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಎಫ್‌ಐಆರ್ ಬಗ್ಗೆ ಪ್ರತಿಕ್ರಿಯಿಸಿದ ಬನ್ಸೋಡೆ, ಎಫ್‌ಐಆರ್ ಕಾನೂನುಬಾಹಿರ, ಇದು ಜನರ ಧ್ವನಿಯನ್ನು ಹತ್ತಿಕ್ಕುವ ರಾಜ್ಯದ ನಡೆಯ ಭಾಗ ಎಂದು ಆರೋಪಿಸಿದ್ದಾರೆ. ಐಪಿಸಿ ಸೆಕ್ಷನ್‌ 188ರಡಿಯಲ್ಲಿ ಪ್ರಕರಣ ದಾಖಲಿಸುವ ಮುನ್ನ ಪೊಲೀಸರು ಸಂಬಂಧಿತ ಕೋರ್ಟಿನಿಂದ ಅನುಮತಿ ಪಡೆಯಬೇಕಿದೆ. ಈ ನಿರ್ದಿಷ್ಟ ವೀಡಿಯೋವನ್ನು ಕೋಟ್ಯಂತರ ಜನರು ವೀಕ್ಷಿಸಿದ್ದಾರೆ ಮತ್ತು ಹಂಚಿಕೊಂಡಿದ್ದಾರೆ, ಅವರೆಲ್ಲರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದೇ? ಸಿಆರ್‌ಪಿಸಿ ಸೆಕ್ಷನ್ 195ರ ಪ್ರಕಾರ, ಐಪಿಸಿಯ ಸೆಕ್ಷನ್ 188ರಡಿಯಲ್ಲಿ ಎಫ್‌ಐಆರ್ ದಾಖಲಿಸುವ ಮೊದಲು ಪೊಲೀಸರು ಸಂಬಂಧಪಟ್ಟ ನ್ಯಾಯಾಲಯದಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಬನ್ಸೋಡೆ ಹೇಳಿದ್ದಾರೆ.

ಇದನ್ನು ಓದಿ: ಜಮ್ಮು-ಕಾಶ್ಮೀರ: ಠಾಣೆಗೆ ನುಗ್ಗಿ ಪೊಲೀಸರಿಗೆ ಥಳಿಸಿದ ಸೇನಾಧಿಕಾರಿಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...