Homeಮುಖಪುಟತನ್ನ ಮೇಲಿನ ಎಫ್‌ಐಆರ್ ವಿರುದ್ಧ ಬಾಂಬೆ ಹೈಕೋರ್ಟ್‌ ಮೊರೆ ಹೋದ ಕುನಾಲ್

ತನ್ನ ಮೇಲಿನ ಎಫ್‌ಐಆರ್ ವಿರುದ್ಧ ಬಾಂಬೆ ಹೈಕೋರ್ಟ್‌ ಮೊರೆ ಹೋದ ಕುನಾಲ್

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು “ದೇಶದ್ರೋಹಿ” ಎಂದು ಟೀಕಿಸಿದ್ದಕ್ಕಾಗಿ ಮುಂಬೈ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಾಮ್ರಾ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅವರು ಏಪ್ರಿಲ್ 5 ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ತಮ್ಮ ವಿರುದ್ಧದ ದೂರುಗಳು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ, ಯಾವುದೇ ವೃತ್ತಿ ಮತ್ತು ವ್ಯವಹಾರವನ್ನು ನಡೆಸುವ ಹಕ್ಕು ಮತ್ತು ಭಾರತದ ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಲಾದ ಜೀವನ ಮತ್ತು ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುತ್ತವೆ ಎಂದು ಅವರು ಅರ್ಜಿಯಲ್ಲಿ ವಾದಿಸಿದ್ದಾರೆ. ವಕೀಲ ಮೀನಾಜ್ ಕಾಕಾಲಿಯಾ ಅವರ ಮೂಲಕ ಸಲ್ಲಿಸಲಾದ ಅರ್ಜಿಯು ಏಪ್ರಿಲ್ 21 ರಂದು ನ್ಯಾಯಮೂರ್ತಿ ಸಾರಂಗ್ ಕೊತ್ವಾಲ್ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬರುವ ಸಾಧ್ಯತೆಯಿದೆ.

ಕುನಾಲ್ ತಮ್ಮ ವಿರುದ್ಧದ ಪ್ರಕರಣದಲ್ಲಿ ಕಳೆದ ತಿಂಗಳು ಮದ್ರಾಸ್ ಹೈಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದಿದ್ದರು. ತಾನು ತಮಿಳುನಾಡಿನ ಖಾಯಂ ನಿವಾಸಿ ಆಗಿರುವುದರಿಂದ ತನ್ನ ಅರ್ಜಿ ಆಲಿಸುವ ಹಕ್ಕು ಮದ್ರಾಸ್ ಹೈಕೋರ್ಟ್‌ಗೆ ಇದೆ ಎಂದು ಅವರು ಹೇಳಿದ್ದರು. ಅವರ ವಿರುದ್ಧ ಪೊಲೀಸರು ಮೂರು ಸಮನ್ಸ್ ಜಾರಿ ಮಾಡಿದ್ದರೂ ಅವರು ಇನ್ನೂ ವಿಚಾರಣೆಗೆ ಹಾಜರಾಗಿಲ್ಲ.

ಹಾಸ್ಯ ಕಾರ್ಯಕ್ರಮದ ಸಂದರ್ಭದಲ್ಲಿ ಕುನಾಲ್ ಅವರು “ದಿಲ್ ತೋ ಪಾಗಲ್ ಹೈ” ಚಿತ್ರದ ಹಿಂದಿ ಹಾಡಿನ ಮಾರ್ಪಡಿಸಿದ ಆವೃತ್ತಿಯನ್ನು ಬಳಸಿಕೊಂಡು ಶಿಂಧೆ ಅವರನ್ನು “ಗದ್ದರ್” (ದೇಶದ್ರೋಹಿ) ಎಂದು ಕರೆದಿದ್ದರು. ಶಿಂಧೆ ಅವರು ಉದ್ಧವ್ ಠಾಕ್ರೆ ವಿರುದ್ಧ ರಾಜಕೀಯ ದಂಗೆ ಎದ್ದು ಸರ್ಕಾರ ಪತನ ಮಾಡಿದ್ದ ಘಟನೆಯನ್ನು ಅವರು ಹಾಸ್ಯವಾಗಿ ನಿರೂಪಿಸಿದ್ದರು.

ಶಿವಸೇನಾ ಶಾಸಕ ಮುರ್ಜಿ ಪಟೇಲ್ ಅವರ ದೂರಿನ ನಂತರ, ಮುಂಬೈ ಪೊಲೀಸರು ಕುನಾಲ್‌ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 353(1)(b) (ಸಾರ್ವಜನಿಕ ಕಿರುಕುಳಕ್ಕೆ ಕಾರಣವಾಗುವ ಹೇಳಿಕೆಗಳು) ಮತ್ತು 356(2) (ಮಾನನಷ್ಟ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ

ವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...