Homeಮುಖಪುಟಮಣಿಪುರ ಬೆತ್ತಲೆ ಪ್ರಕರಣದಲ್ಲಿ FIR ವಿಳಂಬ: ‘14 ದಿನಗಳಿಂದ ಪೊಲೀಸರು ಏನು ಮಾಡುತ್ತಿದ್ದರು?’- ಸುಪ್ರೀಂ ಪ್ರಶ್ನೆ

ಮಣಿಪುರ ಬೆತ್ತಲೆ ಪ್ರಕರಣದಲ್ಲಿ FIR ವಿಳಂಬ: ‘14 ದಿನಗಳಿಂದ ಪೊಲೀಸರು ಏನು ಮಾಡುತ್ತಿದ್ದರು?’- ಸುಪ್ರೀಂ ಪ್ರಶ್ನೆ

- Advertisement -
- Advertisement -

ಮೇ 4 ರಂದು ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಕುಕಿ ಬುಡಕಟ್ಟು ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣದಲ್ಲಿ ಎಫ್‌ಐಆರ್ ನೋಂದಣಿ ಮಾಡಿಕೊಳ್ಳಲು ವಿಳಂಬ ಮಾಡಿರುವುದೇಕೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಪ್ರಶ್ನಿಸಿದೆ.

ಎಫ್‌ಐಆರ್ ದಾಖಲಿಸಲು ಪೊಲೀಸರು 14 ದಿನಗಳ ಕಾಲ ಏನು ಮಾಡುತ್ತಿದ್ದರು? ”ಶೂನ್ಯ ಎಫ್‌ಐಆರ್‌ಗೆ ಹದಿನಾಲ್ಕು ದಿನ ಬೇಕಾ?” ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಪ್ರಶ್ನಿಸಿದ್ದಾರೆ.

ಅಪರಾಧ ನಡೆದಿರುವ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಸಾಮಾನ್ಯವಾಗಿೆ ಎಫ್‌ಐಆರ್ ದಾಖಲಿಸಲಾಗುತ್ತದೆ. ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಬಹುದು ಮತ್ತು ಶೂನ್ಯ ಎಫ್‌ಐಆರ್‌ನ್ನು ದಾಖಲಿಸಲು ಆನಂತರ ಅದನ್ನು ಸಂಬಂಧಪಟ್ಟ ಠಾಣೆಗೆ ರವಾನಿಸಲು ಅನುಮತಿಸುತ್ತದೆ.

ಬೆತ್ತಲೆಯಾಗಿಸಿ ಮೆರವಣಿಗೆ ನಡೆಸಿದ್ದ ಪ್ರಕರಣದ ಇಬ್ಬರು ಸಂತ್ರಸ್ತ ಮಹಿಳೆಯರು ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ಸೋಮವಾರ ವಿಚಾರಣೆ ನಡೆಸುತ್ತಿದೆ. ಜುಲೈ 19ರಂದು ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಮೈತಿ ಮತ್ತು ಕುಕಿ ಸಮುದಾಯಗಳ ನಡುವೆ ಘರ್ಷಣೆಗಳು ಭುಗಿಲೆದ್ದ ಒಂದು ದಿನದ ನಂತರ, ಮೇ 4ರಂದು ಕಾಂಗ್‌ಪೊಕ್ಪಿಯ ಬಿ ಫೈನೋಮ್ ಗ್ರಾಮದಲ್ಲಿ ವೀಡಿಯೊದಲ್ಲಿ ಕಂಡುಬರುವ ಇಬ್ಬರು ಸೇರಿದಂತೆ ಮೂವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಪೊಲೀಸ್ ದೂರಿನ ಪ್ರಕಾರ ಮಹಿಳೆಯರಲ್ಲಿ ಒಬ್ಬರನ್ನು ”ಕ್ರೂರವಾಗಿ ಸಾಮೂಹಿಕ ಅತ್ಯಾಚಾರ” ಮಾಡಲಾಗಿದೆ.

ಪ್ರಕರಣದ ಶೂನ್ಯ ಎಫ್‌ಐಆರ್‌ನ್ನು ಮೇ 18 ರಂದು ದಾಖಲಿಸಲಾಗಿದೆ. ಆದರೆ, ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡ ನಂತರವೇ ಪ್ರಕರಣದ ಆರೋಪಿಗಳನ್ನು ಬಂಧಿಸಲಾಯಿತು.

ಜುಲೈ 20ರಂದು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಈ ಹೇಯ ಕೃತ್ಯದ ಬಗ್ಗೆ ಮಾತನಾಡಿತ್ತು. ಈ ಘಟನೆಯು “ಸರಳವಾಗಿ ಸ್ವೀಕಾರಾರ್ಹವಲ್ಲ” ಮತ್ತು ಈ ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕು ಇಲ್ಲದಿದ್ದರೆ, ನಾವೇ ಕ್ರಮಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದರು.

ಮಣಿಪುರ ಹಿಂಸಾಚಾರದ ವಿಚಾರದಲ್ಲಿ ಸುಮಾರು 80ದಿನಗಳ ಕಾಲ ಮೌನ ವಾಗಿದ್ದ ಪ್ರಧಾನಿ ಮೋದಿ ಅವರು ಈ ವಿಡಿಯೋ ವೈರಲ್ ಆದ ಬಳಿಕ ಒತ್ತಡ ಹೆಚ್ಚಾದ ಕಾರಣ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಬೇರೆ ರಾಜ್ಯಗಳಲ್ಲೂ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ ಎನ್ನುವುದನ್ನು ಉಲ್ಲೇಖಿಸಿದ್ದರು.

ಇದನ್ನೂ ಓದಿ: ಬೇರೆಡೆಯೂ ನಡೆದಿವೆ ಎಂದು ಮಣಿಪುರದ ಘಟನೆಗಳನ್ನು ಸಮರ್ಥಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

”ಇತರ ರಾಜ್ಯಗಳಲ್ಲಿ ಇದೇ ರೀತಿಯ ಪ್ರಕರಣಗಳು ನಡೆಯುತ್ತಿವೆ ಎಂಬ ಕಾರಣಕ್ಕಾಗಿ ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ನಿರ್ಲಕ್ಷಿಸಲಾಗುವುದಿಲ್ಲ” ಎಂದು ಸೋಮವಾರ ನ್ಯಾಯಾಲಯ ಹೇಳಿದೆ.

”ದೇಶಾದ್ಯಂತ ಮಹಿಳೆಯರ ವಿರುದ್ಧ ಅಪರಾಧಗಳು ನಡೆಯುತ್ತಿವೆ – ಅದು ವಾಸ್ತವದ ಸಂಗತಿ. ಆದರೆ ಇಲ್ಲಿ, ನಾವು ಭಯಂಕರ ಹೇಯ ಕೃತ್ಯದ ಕುರಿತು ಮಾತನಾಡುತ್ತಿದ್ದೇವೆ. ಬೇರೆ ಕಡೆಗಳಲ್ಲಿ ಅಪರಾಧಗಳು ಕೋಮು ಮತ್ತು ಪಂಥೀಯ ಕಲಹದ ಪರಿಸ್ಥಿತಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಅಪರಾಧಗಳು” ಎಂದು ಹೇಳಿದರು.

ನ್ಯಾಯವಾದಿ ಬಾನ್ಸುರಿ ಸ್ವರಾಜ್ ಅವರು ಪಶ್ಚಿಮ ಬಂಗಾಳ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ನ್ಯಾಯಾಲಯದ ಗಮನಕ್ಕೆ ತೆಗೆದುಕೊಳ್ಳುವಂತೆ ಒತ್ತಾಯಿಸಿದ ನಂತರ ”ನಾವು ಮಣಿಪುರವನ್ನು ಹೇಗೆ ಎದುರಿಸುತ್ತೇವೆ ಎಂಬುದು ಪ್ರಶ್ನೆಯಾಗಿದೆ. ಭಾರತದ ಎಲ್ಲಾ ಹೆಣ್ಣುಮಕ್ಕಳನ್ನು ರಕ್ಷಿಸಿ ಎಂದು ನೀವು ಹೇಳುತ್ತೀರಾ ಅಥವಾ ಯಾರನ್ನೂ ರಕ್ಷಿಸಬೇಡಿ ಎಂದು ಹೇಳುತ್ತಿರಾ? ಎಂದು ಮುಖ್ಯ ನ್ಯಾಯಾಧೀಶರು ಈ ಹೇಳಿಕೆ ನೀಡಿದ್ದಾರೆ ಎಂದು ಬಾರ್ ಮತ್ತು ಬೆಂಚ್ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು ಮೇ 4ರಂದು ನಡೆದ ಲೈಂಗಿಕ ದೌರ್ಜನ್ಯವನ್ನು ಪ್ರತ್ಯೇಕ ಅಪರಾಧವೆಂದು ಪರಿಗಣಿಸಲಾಗುವುದಿಲ್ಲ, ಆದರೆ ಇದು ವ್ಯವಸ್ಥಿತ ಹಿಂಸೆಯ ಭಾಗವಾಗಿದೆ ಎಂದು ಹೇಳಿದರು. ಅಂತಹ ಸಂದರ್ಭದಲ್ಲಿ, ನೀವು [ಮಣಿಪುರ ಸರ್ಕಾರ] ವಿಶೇಷ ತಂಡವನ್ನು ಹೊಂದಿರುವುದು ಮುಖ್ಯವಲ್ಲವೇ? ಮಣಿಪುರ ರಾಜ್ಯದಲ್ಲಿ ಹಿಂಸಾಚಾರ ಅವ್ಯಾಹತವಾಗಿ ಮುಂದುವರಿದಿದೆ ಅದನ್ನು ನಿಲ್ಲಿಸಬೇಕಿದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

ರಾಜ್ಯಾದ್ಯಂತ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 6,000 ಕ್ಕೂ ಹೆಚ್ಚು ಎಫ್‌ಆರ್‌ಗಳನ್ನು ಸಲ್ಲಿಸಲಾಗಿದೆ ಎಂದು ಮಣಿಪುರ ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು.

ಇವುಗಳಲ್ಲಿ ಎಷ್ಟು ಪ್ರಕರಣಗಳು ಮಹಿಳೆಯರ ವಿರುದ್ಧದ ಅಪರಾಧಗಳನ್ನು ಒಳಗೊಂಡಿವೆ ಮತ್ತು ಎಷ್ಟು ಕೊಲೆ ಮತ್ತು ಅಗ್ನಿಸ್ಪರ್ಶದಂತಹ ಗಂಭೀರ ಅಪರಾಧಗಳಿಗೆ ಸಂಬಂಧಿಸಿದೆ ಎಂಬುದನ್ನು ತಿಳಿಸುವಂತೆ ನ್ಯಾಯಾಲಯವು ಮೆಹ್ತಾ ಅವರನ್ನು ಕೇಳಿದೆ. ಕೇಂದ್ರೀಯ ತನಿಖಾ ದಳವು ಎಲ್ಲಾ ಪ್ರಕರಣಗಳನ್ನು ಕೈಗೆತ್ತಿಕೊಳ್ಳುವ ಸ್ಥಿತಿಯಲ್ಲಿದೆಯೇ? ಎಂದು ಪೀಠವು ಕೇಳಿದೆ.

ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಅರ್ಜಿ ವಿಚಾರಣೆ ನಡೆಯಲಿದೆ.

ಮೇ 3ರಿಂದ ಮಣಿಪುರದಲ್ಲಿ ಕುಕಿ ಮತ್ತು ಬಹುಸಂಖ್ಯಾತ ಮೈತಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆ ಆರಂಭವಾಯಿತು. ಈವರೆಗೂ ಹಿಂಸಾಚಾರದಲ್ಲಿ 113 ಕುಕಿಗಳು ಮತ್ತು 62 ಮೈತಿ ಜನರು ಸೇರಿದಂತೆ ಕನಿಷ್ಠ 181 ಜನರು ಸಾವಿಗೀಡಾಗಿದ್ದಾರೆ ಮತ್ತು ಸುಮಾರು 60,000 ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...