ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಬೆಂಗಳೂರಿನ ತಿಲಕ್‌ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ನಡೆಸಲಾಗಿದೆ ಎಂದು ಆರೋಪಿಸಿ ನಿರ್ಮಲಾ ಸೀತಾರಾಮನ್ ಮತ್ತು ಇತರರ ವಿರುದ್ಧ ಜನಾಧಿಕಾರ ಸಂಘರ್ಷ ಸಂಘಟನೆಯ ಆದರ್ಶ ಅಯ್ಯರ್ ಎಂಬುವವರು ದೂರು ದಾಖಲಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಸುಲಿಗೆ ಹಿನ್ನಲೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಿದೆ. ನಿರ್ಮಲಾ ಸೀತಾರಾಮನ್ ಮತ್ತು ಇತರರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಫೆಬ್ರವರಿಯಲ್ಲಿ, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಗೊಳಿಸಿತ್ತು. ಈ ವೇಳೆ ನ್ಯಾಯಾಲಯವು ಯೋಜನೆಯನ್ನು “ಅಸಂವಿಧಾನಿಕ” ಮತ್ತು ಇದು ನಾಗರಿಕರ ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಹೇಳಿತ್ತು. ಕೇಂದ್ರ ಸರ್ಕಾರವು 2018 ರಲ್ಲಿ ಯೋಜನೆಯನ್ನು ಪರಿಚಯಿಸಿ, ರಾಜಕೀಯ ಪಕ್ಷಗಳಿಗೆ ನಗದು ದೇಣಿಗೆಗಳನ್ನು ನೀಡುವ ನೀತಿಗೆ ಬದಲಾವಣೆ ತಂದಿತ್ತು.
ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಮಲಾ ಸೀತಾರಾಮನ್ ಅವರ ರಾಜೀನಾಮೆಗೆ ಒತ್ತಾಯಿಸಿದರು ಮತ್ತು ಈ ವಿಷಯದ ಬಗ್ಗೆ ಮೂರು ತಿಂಗಳೊಳಗೆ ವರದಿ ಸಲ್ಲಿಸಬೇಕು ಎಂದು ಹೇಳಿದ್ದಾರೆ.
ಇದನ್ನೂಓದಿ: ಅಕ್ರಮ ಡಿನೋಟಿಫಿಕೇಷನ್ ಪ್ರಕರಣ : ಕುಮಾರಸ್ವಾಮಿ ವಿಚಾರಣೆ ನಡೆಸಿದ ಲೋಕಾಯುಕ್ತ
”ನಿರ್ಮಲಾ ಸೀತಾರಾಮನ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಎಫ್‌ಐಆರ್ ದಾಖಲಾಗಿದೆ. ಅವರು ಯಾರು? ಆಕೆ ಕೇಂದ್ರ ಸಚಿವೆ, ಅವರ ವಿರುದ್ಧವೂ ಎಫ್‌ಐಆರ್ ಇದೆ. ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆಯಲ್ಲಿ ತೊಡಗಿದ್ದು, ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ದಾಖಲಾದ ನಂತರ ಅವರು ರಾಜೀನಾಮೆ ನೀಡಬೇಕು ಎಂದು ಅವರು (ಬಿಜೆಪಿ) ಕೇಳುತ್ತಾರೆಯೇ?” ಅವರು ಹೇಳಿದ್ದಾರೆ.
“ಈಗ, ಸೆಕ್ಷನ್ 17 ಎ (ಭ್ರಷ್ಟಾಚಾರ ತಡೆ ಕಾಯ್ದೆ) ಪ್ರಕಾರ, ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಬೇಕು ಮತ್ತು ವರದಿಯನ್ನು ಸಲ್ಲಿಸಬೇಕು. ಅದರ ಆಧಾರದ ಮೇಲೆ, ಅವರು ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.
ಸೆಕ್ಷನ್ 17A ಸಾರ್ವಜನಿಕ ಸೇವಕರಿಗೆ ಕ್ಷುಲ್ಲಕ ಆಧಾರದ ಮೇಲೆ ತನಿಖೆಯಾಗದಂತೆ ಹೆಚ್ಚುವರಿ ರಕ್ಷಣೆ ನೀಡುತ್ತದೆ. ಭ್ರಷ್ಟಾಚಾರ ತಡೆ ಕಾಯಿದೆಯಡಿಯಲ್ಲಿ ಸಾರ್ವಜನಿಕ ಸೇವಕರು ಎಸಗಿದ್ದಾರೆಂದು ಆರೋಪಿಸಲಾದ ಯಾವುದೇ ಅಪರಾಧದ ಕುರಿತು ಯಾವುದೇ ವಿಚಾರಣೆ ಅಥವಾ ತನಿಖೆಯನ್ನು ನಡೆಸಲು ಪೊಲೀಸ್ ಅಧಿಕಾರಿಯು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವುದನ್ನು ಈ ನಿಬಂಧನೆಯು ಕಡ್ಡಾಯಗೊಳಿಸುತ್ತದೆ.
ಇದನ್ನೂ ಓದಿ: ದಲಿತರಿಗೆ ಅಧಿಕಾರ ಸಿಕ್ಕಾಗ ಕೇಳುವಷ್ಟು ಪ್ರಶ್ನೆಗಳನ್ನು ಬೇರೆಯವರಿಗೆ ಸಿಕ್ಕಾಗ ಕೇಳಲ್ಲ: ಹೆಚ್.ಡಿ. ಉಮಾಶಂಕರ
ನನ್ನ ಪ್ರಕರಣದಲ್ಲಿ ಕೆಳಹಂತದ ನ್ಯಾಯಾಲಯ ಆದೇಶ ಹೊರಡಿಸಿದ್ದು, ರಾಜ್ಯಪಾಲರು ಸೆಕ್ಷನ್ 17ಎ ಅಡಿಯಲ್ಲಿ ತನಿಖೆ ನಡೆಸುವಂತೆ ಕೋರಿದ್ದು, ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ ಎಂದು ಸಿದ್ದರಾಮಯ್ಯ ಹೇಳಿದದ್ದಾರೆ. ಮುಡಾ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ಸಿದ್ದರಾಮಯ್ಯ ಅವರನ್ನೂ ತನಿಖೆಗೆ ಒಳಪಡಿಸಲಾಗುವುದು.
ಇದೇ ವೇಳೆ ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ಅವರು ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ.
“ಮೊದಲು, ಕುಮಾರಸ್ವಾಮಿ ರಾಜೀನಾಮೆ ನೀಡಲಿ. ಅವರೂ ರಾಜೀನಾಮೆ ನೀಡಬೇಕಲ್ಲವೇ? ಅವರು ಮೊದಲು ರಾಜೀನಾಮೆ ನೀಡಲಿ. ಪ್ರಧಾನಿ (ನರೇಂದ್ರ) ಮೋದಿ ಅವರಾದರೂ ರಾಜೀನಾಮೆ ನೀಡಬೇಕು. ಚುನಾವಣಾ ಬಾಂಡ್ ಸುಲಿಗೆ ಪ್ರಕರಣದಲ್ಲಿ ಪ್ರಧಾನಿ ಮೋದಿ ಅವರೂ ರಾಜೀನಾಮೆ ನೀಡಬೇಕು. ನಿರ್ಮಲಾ ಸೀತಾರಾಮನ್ ರಾಜೀನಾಮೆ ನೀಡಬೇಕು. ಕುಮಾರಸ್ವಾಮಿ ಜಾಮೀನಿನ ಮೇಲೆ ಹೊರಗಿದ್ದು, ಅವರು ರಾಜೀನಾಮೆ ನೀಡಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ವಿಡಿಯೊ ನೋಡಿ: ಅಟ್ರಾಸಿಟಿ’ ಕಾದಂಬರಿ; ಮನುಷ್ಯ ಲೋಕದ ರೂಪಾಂತರವನ್ನ ಕಟ್ಟುತಿದೆಯಾ? ಡಾ. ಗೀತಾ ವಸಂತ


