Homeಮುಖಪುಟತಂದೆ-ಮಗನ ನಕಲಿ ಎನ್‌ಕೌಂಟರ್ ಆರೋಪ: 7 ಮಂದಿ ಪೊಲೀಸರ ವಿರುದ್ಧ ಎಫ್ಐಆರ್ ದಾಖಲು

ತಂದೆ-ಮಗನ ನಕಲಿ ಎನ್‌ಕೌಂಟರ್ ಆರೋಪ: 7 ಮಂದಿ ಪೊಲೀಸರ ವಿರುದ್ಧ ಎಫ್ಐಆರ್ ದಾಖಲು

- Advertisement -
- Advertisement -

ನಾಲ್ಕು ವರ್ಷಗಳ ಕಾನೂನು ಹೋರಾಟದ ನಂತರ, ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯಲ್ಲಿ ನಕಲಿ ಎನ್‌ಕೌಂಟರ್‌ನಲ್ಲಿ ತಂದೆ-ಮಗನನ್ನು ಹತ್ಯೆಗೈದ ಆರೋಪದ ಮೇಲೆ ಏಳು ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ವೀರೇಂದ್ರಸಿಂಹ ಎನ್ ಜಡೇಜಾ ಮತ್ತು ಅವರ ಅಧೀನ ಅಧಿಕಾರಿಗಳಾದ ರಾಜೇಶ್ ಸಾವಿಜಿಭಾಯಿ, ಕಿರೀಟ್‌ಭಾಯಿ ಗಣೇಶ್‌ಭಾಯಿ, ದಿಗ್ವಿಜಯ್‌ ಸಿನ್ಹ್‌ ಹರ್ದೀಪ್‌ ಸಿನ್ಹ್‌, ಪ್ರಹ್ಲಾದಭಾಯಿ ಪ್ರಭುಭಾಯಿ ಮತ್ತು ಮನುಭಾಯಿ ಗೋವಿಂದ್‌ಭಾಯಿ ಸೇರಿದಂತೆ ಏಳು ಪೊಲೀಸರ ವಿರುದ್ಧ ಶುಕ್ರವಾರ (ಮೇ.30) ಪಟ್ಡಿ ತಾಲೂಕಿನ ಬಜಾನಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏಳು ಪೊಲೀಸರ ವಿರುದ್ಧ ಕೊಲೆ ಸೇರಿದಂತೆ ಇತರ ಆರೋಪಗಳಿಗಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಧೃಂಗಾಧ್ರದ ಉಪ ಪೊಲೀಸ್ ವರಿಷ್ಠಾಧಿಕಾರಿ ಜೆ.ಡಿ. ಪುರೋಹಿತ್ ಅವರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಪ್ರಕರಣದ ತನಿಖಾಧಿಕಾರಿಯಾಗಿ ಪುರೋಹಿತ್ ಅವರನ್ನು ನೇಮಿಸಲಾಗಿದೆ.

ಪಟ್ಡಿ ತಾಲೂಕಿನಲ್ಲಿ 2021ರಲ್ಲಿ ಆಪಾದಿಯ ನಕಲಿ ಎನ್‌ಕೌಂಟರ್ ನಡೆದಿದೆ. ಪೊಲೀಸ್ ಕಾರ್ಯಾಚರಣೆಯ ಸಮಯದಲ್ಲಿ ಆರೋಪಿ ಪಿಎಸ್ಐ ಜಡೇಜಾ ನೇತೃತ್ವದ ತಂಡ ನಡೆಸಿದ ಗುಂಡಿನ ದಾಳಿಯಲ್ಲಿ ಹನೀಫ್ ಜಾಟ್ ಮಲಿಕ್ (44) ಮತ್ತು ಅವರ ಮಗ ಮದೀನ್ (14) ಸಾವನ್ನಪ್ಪಿದ್ದರು.

ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದೇವೆ ಎಂದು ಹೇಳುವ ಮೂಲಕ ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದರು. ಆದರೆ, ಮೃತರ ಕುಟುಂಬ ಸದಸ್ಯರು ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ, ತಂದೆ-ಮಗನನ್ನು ನಿರ್ದಯವಾಗಿ ಕೊಲ್ಲಲಾಗಿದೆ ಎಂದು ಆರೋಪಿಸಿದ್ದರು. ಹತ್ಯೆಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದರು.

ನವೆಂಬರ್ 6, 2021ರಂದು ಬಜಾನಾ ಪೊಲೀಸ್ ಠಾಣೆ ವ್ಯಾಪ್ತಿಯ ಗೆಡಿಯಾ ಗ್ರಾಮದಲ್ಲಿ ತನ್ನ ತಂದೆ ಮತ್ತು ಸಹೋದರನನ್ನು ಕ್ರೂರವಾಗಿ ಕೊಲ್ಲಲಾಯಿತು ಎಂದು ಆರೋಪಿಸಿ ಸೋಹಾನಾ ಮಲೇಕ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಗುಜರಾತ್ ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧ ನಿಯಂತ್ರಣ (GUJCTOC) ಕಾಯ್ದೆಯಡಿಯಲ್ಲಿ ದಾಖಲಾದ ಪ್ರಕರಣದಲ್ಲಿ ಹನೀಫ್ ಬೇಕಾಗಿದ್ದ ಎಂದು ಪೊಲೀಸರು ಹೇಳಿಕೊಂಡಿದ್ದರು. ಹಲವಾರು ಲೂಟಿ ಮತ್ತು ಕಳ್ಳತನ ಪ್ರಕರಣಗಳಲ್ಲಿ ಹನೀಫ್ ಭಾಗಿಯಾಗಿದ್ದ ಎಂದು ಹೇಳಿಕೊಂಡಿದ್ದರು. ಹನೀಫ್ ಕುಖ್ಯಾತ “ಗೆಡಿಯಾ ಗ್ಯಾಂಗ್” ನ ಭಾಗವಾಗಿದ್ದ. 86 ಎಫ್‌ಐಆರ್‌ಗಳಲ್ಲಿ ಹೆಸರಿಸಲ್ಪಟ್ಟಿದ್ದ ಮತ್ತು 59 ಪ್ರಕರಣಗಳಲ್ಲಿ ಬೇಕಾಗಿದ್ದ ಎಂದಿದ್ದರು.

ನಿರ್ದಿಷ್ಟ ಮಾಹಿತಿ ಪಡೆದ ನಂತರ ಜಡೇಜಾ ನೇತೃತ್ವದ ಏಳು ಸದಸ್ಯರ ಪೊಲೀಸ್ ತಂಡ ಹನೀಫ್ ಅವರನ್ನು ಬಂಧಿಸಲು ಗ್ರಾಮಕ್ಕೆ ಹೋಗಿತ್ತು. ಈ ವೇಳೆ ಹನೀಫ್ ಮತ್ತು ಅವರ ಮಗ ತಪ್ಪಿಸಿಕೊಂಡು ಪರಾರಿಯಾಗಲು ಪ್ರಯತ್ನಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಅಲ್ಲದೆ, ಹನೀಫ್ ತನ್ನ ಮಗ ಮತ್ತು ಇತರರ ಸಹಾಯದಿಂದ ಪೊಲೀಸರ ಮೇಲೆ ಗುಂಡು ಹಾರಿಸಿದ್ದರು. ಈ ವೇಳೆ ಪೊಲೀಸರು ಪ್ರತಿ ಗುಂಡು ಹಾರಿಸಬೇಕಾಯಿತು. ಒಂದು ಗುಂಡು ಹನೀಫ್ ಎದೆಗೆ ತಗುಲಿದರೆ, ಇನ್ನೊಂದು ಗುಂಡು ಮಗ ಮದೀನ್ ಗೆ ತಗುಲಿತ್ತು ಎಂದು ತಿಳಿಸಿದ್ದಾರೆ.

2024ರಲ್ಲಿ ಗುಜರಾತ್ ಹೈಕೋರ್ಟ್ ಅರ್ಜಿಯನ್ನು ವಿಲೇವಾರಿ ಮಾಡಿ ಅರ್ಜಿದಾರರಿಗೆ ಸ್ಥಳೀಯ ನ್ಯಾಯಾಲಯವನ್ನು ಸಂಪರ್ಕಿಸಲು ಸ್ವಾತಂತ್ರ್ಯ ನೀಡಿತ್ತು. ನಂತರ, ಅರ್ಜಿದಾರರು ಮ್ಯಾಜಿಸ್ಟೀರಿಯಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಮ್ಯಾಜಿಸ್ಟೀರಿಯಲ್ ನ್ಯಾಯಾಲಯ ತಪ್ಪಿತಸ್ಥ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಆದೇಶಿಸಿದೆ ಎಂದು ವರದಿಯಾಗಿದೆ.

ಗೋಮಾಂಸ ಮಾರಾಟ ಆರೋಪ; ದೆಹಲಿ ವಿಶ್ವವಿದ್ಯಾಲಯ ಬಳಿಯ ಅಂಗಡಿ ಮಾಲೀಕನಿಗೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...